Homeಕರ್ನಾಟಕಬಾಗಲಕೋಟೆ: ದೇಗುಲ ಪ್ರವೇಶಿಸಿದ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

ಬಾಗಲಕೋಟೆ: ದೇಗುಲ ಪ್ರವೇಶಿಸಿದ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

- Advertisement -
- Advertisement -

ದೇವಾಲಯ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದದಲ್ಲಿ ಪರಿಶಿಷ್ಟ ಸಮುದಾಯದ (ಎಸ್‌ಸಿ) ಯುವಕನ್ನು ಪ್ರಬಲ ಜಾತಿ ಗುಂಪು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಬಾಗಲಕೋಟೆ ಜಿಲ್ಲೆ ಬದಾಮಿ ತಾಲ್ಲೂಕಿನಲ್ಲಿ ಸಂಭವಿಸಿದೆ.

ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದೂ ಅಲ್ಲದೆ ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದು; ತಾಲೂಕಿನ ಉಗಲವಾಟ ಗ್ರಾಮದಲ್ಲಿ ಇತ್ತೀಚೆಗೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಗ್ರಾಮದ 21 ಜನರ ವಿರುದ್ಧ ಎಫ್‌ಐಆ‌ರ್ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಮರನಾಥ ರೆಡ್ಡಿ ಶನಿವಾರ ಗ್ರಾಮಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಅರ್ಜುನ್ ಮಾದರ ಎಂಬ 28 ವರ್ಷದ ಯುವಕ ಥಳಿತಕ್ಕೊಳಗಾಗಿದ್ದು, ಈ ಸಂಬಂಧ ಮುದ್ದಿನಗೌಡ ದ್ಯಾಮನಗೌಡ ಸತ್ಯನ್ನವರ, ಮಂಜುನಾಥ ಲೆಂಕೇಶ ಮೂಲಿಮನಿ, ತುಳಸಿಗೇರಪ್ಪ ಕಾಮಪ್ಪ ತಳವಾರ ಸೇರಿದಂತೆ 21 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಸೆ.10ರಂದು ಅರ್ಜುನ್, ತನ್ನದೇ ಗ್ರಾಮದ ದ್ಯಾಮವ್ವ ಗುಡಿಯ ಒಳಗೆ ಹೋಗಿ ದೇವರಿಗೆ ನಮಸ್ಕಾರ ಮಾಡಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕೆಲ ಪ್ರಬಲ ಜಾತಿ ಗುಂಪು, “ನೀನು ದಲಿತ ಸಮುದಾಯದವನು.. ಗುಡಿಯ ಒಳಗೆ ಹೋಗಿ ನಮಸ್ಕಾರ ಮಾಡಿದ್ದು ಯಾಕೆ”  ಎಂದು ಆತನೊಂದಿಗೆ ವಾಗ್ವಾದ ನಡೆಸಿದ್ದಾರೆ. ಸಾಲದ್ದಕ್ಕೆ, ಆತನ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

“20ಕ್ಕೂ ಅಧಿಕ ಜನರು ಸೇರಿ ಆತನನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿ, ಜಾತಿ ನಿಂದನೆ ಮಾಡಿದ್ದಾರೆ” ಎಂದು ಹಲ್ಲೆಗೊಳಗಾದ ವ್ಯಕ್ತಿ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ಸಂಬಂಧ 21 ಆರೋಪಿಗಳ ವಿರುದ್ದ ಪ್ರಕರಣ ಕೇಸ್ ದಾಖಲಿಸಿದ್ದಾರೆ. ಘಟನೆ ನಂತರ ಬಾಗಲಕೋಟೆ ಎಸ್‌ಪಿ ಅಮರನಾಥ ರೆಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಷಯ ತಿಳಿದ ಜಿಲ್ಲೆಯ ಹಲವು ದಲಿತ ಮುಖಂಡರು ಉಗಲವಾಟ ಗ್ರಾಮಕ್ಕೆ ಆಗಮಿಸಿ, ಅಲ್ಲಿನ ದಲಿತ ಮುಖಂಡರ ಜೊತೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಘಟನೆ ಖಂಡಿಸಿ ಬಾಗಲಕೋಟೆ ಜಿಲ್ಲಾಡಳಿತ ಭವನಕ್ಕೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ನಿಲ್ಲದ ದಲಿತರ ಮೇಲಿನ ದೌರ್ಜನ್ಯ:

ಇತ್ತೀಚಿನ ದಿನಗಳಲ್ಲಿ ಉತ್ತರ ಕರ್ನಾಟಕದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಕಳೆದ ತಿಂಗಳು, ದಲಿತ ಯುವಕನೊಬ್ಬ ತನಗೆ ಕ್ಷೌರ ಮಾಡಲು ಒತ್ತಾಯಿಸಿದ ನಂತರ, ಮಾತಿಗೆ ಮಾತು ಬೆಳೆದು ಕ್ಷೌರಿಕ ಕೊಲೆ ಮಾಡಿರುವ ಘಟನೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ನಡೆದಿತ್ತು. ಯಮನೂರಪ್ಪ ಬಂಡಿಹಾಳ (23) ಕೊಲೆಯಾದ ಮೃತ ದಲಿತ ಯುವಕನಾಗಿದ್ದಾನೆ.

ಯಮನೂರಪ್ಪ ಕ್ಷೌರ ಮಾಡಿಸಿಕೊಳ್ಳಲು ಸೆಲೂನ್‌ಗೆ ಹೋಗಿದ್ದ ಈ ವೇಳೆ ಸೆಲೂನ್ ಮಾಲೀಕ ಮುದುಕಪ್ಪ ಅಂದಪ್ಪ ಹಡಪದ ಅವರು, ‘ನೀನು ದಲಿತ. ಹಾಗಾಗಿ, ನಾವು ಕ್ಷೌರ ಮಾಡುವುದಿಲ್ಲ’ ಎಂದು ಹೇಳಿದ್ದಾನೆ. ಇದನ್ನ ಯುವಕ ಪ್ರಶ್ನಿಸಿದ್ದು, ಮಾತಿಗೆ ಮಾತು ಬೆಳೆದು ಮುದುಕಪ್ಪ ಹಡಪದ ಕೈಯ್ಯಲ್ಲಿದ್ದ ಕತ್ತರಿಯಿಂದ ಯಮನೂರಪ್ಪ ಹೊಟ್ಟೆಗೆ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದರು.

ಮತ್ತೊಂದು ಪ್ರಕರಣದಲ್ಲಿ, ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಯುವಕನ ಮೇಲೆ ದೂರು ನೀಡಿದ ಕಾರಣಕ್ಕಾಗಿ, ಇಡೀ ಗ್ರಾಮದ ಪರಿಶಿಷ್ಟ ಸಮುದಾಯದ ಜನರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಮೂರ್ನಾಲ್ಕು ದಿನಗಳ ಹಿಂದಷ್ಟೇ ಬೆಳಕಿಗೆ ಬಂದಿತ್ತು.

“14 ವರ್ಷದ ದಲಿತ ಸಮುದಾಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಂಧಾನಕ್ಕೆ ಒಪ್ಪದ ಕುಟುಂಬ ಮತ್ತು ದಲಿತ ಕುಟುಂಬಗಳಿಗೆ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ‌ಗ್ರಾಮದಲ್ಲಿ ನಡೆದಿದೆ. ತಮ್ಮ ಮಾತಿನಂತೆ ಸಂಧಾನಕ್ಕೆ ಒಪ್ಪದೆ ದೂರು ನೀಡಿದರು ಎಂಬ ಕಾರಣಕ್ಕೆ ದಲಿತ ಕುಟುಂಬವನ್ನು ಬಹಿಷ್ಕರಿಸಿರುವ ಸವರ್ಣೀಯರು, ಗ್ರಾಮದ ಅಂಗಡಿಗಳಲ್ಲಿ ದಿನಸಿ ಸಾಮಗ್ರಿ ನೀಡದಂತೆ ಷರತ್ತು ವಿಧಿಸಿದ್ದಾರೆ. ಈ ಸಾಮಾಜಿಕ ಬಹಿಷ್ಕಾರದಿಂದಾಗಿ ಗ್ರಾಮದ ದಲಿತ ಸಮುದಾಯದ ಮಕ್ಕಳಿಗೆ ಅಗತ್ಯವಿರುವ ಪೆನ್ನು, ನೋಟುಬುಕ್ ಮತ್ತು ದೈನಂದಿನ ದಿನಸಿ ಸಾಮಗ್ರಿ ಸಿಗದೆ ಹಲವು ಕುಟುಂಬಗಳು ಪರದಾಡುತ್ತಿವೆ. ಗ್ರಾಮದಲ್ಲಿ ಕಡಿಮೆ ಸಂಖ್ಯೆಯಲ್ಲಿರುವ ದಲಿತರು, ಇದೀಗ ಸಾಮಾಜಿಕ ಬಹಿಷ್ಕಾರದಿಂದಾಗಿ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಇದೀಗ ದೇವಸ್ಥಾನ ಪ್ರವೇಶಿಸಿದ ಎಂಬ ಕಾರಣಕ್ಕೆ ದಲಿತ ಯುವಕನಿಗೆ ಸವರ್ಣೀಯರು ಥಳಿಸಿದ್ದು, ತಿಂಗಳಲ್ಲಿ ಬೆಳಕಿಗೆ ಬಂದ ಮೂರನೇ ದಲಿತ ದೌರ್ಜನ್ಯ ಪ್ರಕರಣ ಇದಾಗಿದೆ.

ಇದನ್ನೂ ಓದಿ; ಯಾದಗಿರಿ| ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದವನ ಮೇಲೆ ದೂರು ದಾಖಲಿಸಿದ ಪೋಷಕರು; ಸಂಧಾನಕ್ಕೆ ಒಪ್ಪದ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....