Homeಕರ್ನಾಟಕಬಾಗಲಕೋಟೆ: ಸ್ಕಲ್‌ ಕ್ಯಾಪ್‌ ಧರಿಸಿದ್ದಕ್ಕೆ ವಿದ್ಯಾರ್ಥಿಗೆ ಥಳಿತ; ಪ್ರಾಂಶುಪಾಲ, ಇನ್‌ಸ್ಪೆಕ್ಟರ್‌ ಸೇರಿ ಐವರ ವಿರುದ್ಧ ಎಫ್‌ಐಆರ್‌

ಬಾಗಲಕೋಟೆ: ಸ್ಕಲ್‌ ಕ್ಯಾಪ್‌ ಧರಿಸಿದ್ದಕ್ಕೆ ವಿದ್ಯಾರ್ಥಿಗೆ ಥಳಿತ; ಪ್ರಾಂಶುಪಾಲ, ಇನ್‌ಸ್ಪೆಕ್ಟರ್‌ ಸೇರಿ ಐವರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಬಾಗಲಕೋಟೆ: ಇಲ್ಲಿನ ಕಾಲೇಜೊಂದರ ಆವರಣದಲ್ಲಿ ಸ್ಕಲ್ ಕ್ಯಾಪ್ ಧರಿಸಿದ್ದಕ್ಕೆ ವಿದ್ಯಾರ್ಥಿಯೊಬ್ಬನಿಗೆ ಥಳಿಸಿದ ಆರೋಪದ ಮೇಲೆ ಪ್ರಾಂಶುಪಾಲರು, ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸ್ಥಳೀಯ ಬನಹಟ್ಟಿ ಜೆಎಂಎಫ್‌ಸಿ ನ್ಯಾಯಾಲಯದ ನಿರ್ದೇಶನದಂತೆ ರಾಜ್ಯದ ಬಾಗಲಕೋಟ ಜಿಲ್ಲೆಯ ತೇರದಾಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಕಾಲೇಜು ವಿದ್ಯಾರ್ಥಿ ನವೀದ್ ಹಸನ್ ಸಾಬ್ ಥರತಾರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫೆಬ್ರುವರಿ 18ರಂದು ತೇರದಾಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸ್ಕಲ್ ಕ್ಯಾಪ್ ಧರಿಸಿ ಬಂದಿದ್ದಾಗ ತನ್ನನ್ನು ಅವಮಾನಿಸಿ ಸಂಸ್ಥೆಯೊಳಗೆ ಪ್ರವೇಶಿಸದಂತೆ ತಡೆದು ಧಾರ್ಮಿಕ ಭಾವನೆಗಳಿಗೆ ಚ್ಯುತಿ ತಂದಿದ್ದಾರೆ ಎಂದು ನವೀದ್ ಅರ್ಜಿಯಲ್ಲಿ ತಿಳಿಸಿದ್ದರು.

ತನ್ನ ಧರ್ಮವನ್ನು ಅವಮಾನಿಸಿ ಕಾಲೇಜಿನಿಂದ ಬಹಿಷ್ಕಾರ ಹಾಕಿದ ಪ್ರಾಂಶುಪಾಲರು ಮತ್ತು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ದೂರು ದಾಖಲಿಸುವಂತೆ ಅವರು ನ್ಯಾಯಾಲಯದ ಮುಂದೆ ಕೋರಿದ್ದರು. ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿತ್ತು.

ನ್ಯಾಯಾಲಯವು ಜೂನ್ 30ರಂದು ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಿದ್ದು, ಜಮಖಂಡಿ ಉಪ ಎಸ್ಪಿ ಅವರನ್ನು ಪ್ರಕರಣದ ತನಿಖಾಧಿಕಾರಿಯನ್ನಾಗಿ ಮಾಡಲಾಗಿದೆ.

ಇದಕ್ಕೂ ಮುನ್ನ ನವೀದ್ ಮತ್ತು ಆತನ ತಂದೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಪ್ರಾಂಶುಪಾಲ ಎ.ಎಸ್.ಪೂಜಾರ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...