ಬಹ್ರೈಚ್‌ ಪ್ರಕರಣ: ಬುಲ್ಡೋಜರ್ ಕ್ರಮದ ವಿರುದ್ಧ ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಪರೋಕ್ಷ ಎಚ್ಚರಿಕೆ

ಕೋಮು ಘರ್ಷಣೆಯ ನಂತರ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಆರೋಪಿಗಳಿಗೆ ನೀಡಲಾದ ಮನೆ ನೆಲಸಮ ನೋಟಿಸ್‌ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ಆಲಿಸಿದ ಸುಪ್ರೀಂ ಕೋರ್ಟ್, ಯಾವುದೇ ಕ್ರಮ ತೆಗೆದುಕೊಳ್ಳದಂತೆ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದೆ. “ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಉಲ್ಲಂಘಿಸುವ ಅಪಾಯವನ್ನು ಎದುರಿಸಲು ಬಯಸಿದರೆ ಅದು ರಾಜ್ಯ ಸರ್ಕಾರದ ಆಯ್ಕೆ” ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿ.ವಿಶ್ವನಾಥನ್ ಅವರ ಪೀಠವು ನಾಳೆ ಮುಂದಿನ ವಿಚಾರಣೆಗೆ ಮುನ್ನ ಯಾವುದೇ ಕ್ರಮ ಕೈಗೊಳ್ಳದಂತೆ ಉತ್ತರ … Continue reading ಬಹ್ರೈಚ್‌ ಪ್ರಕರಣ: ಬುಲ್ಡೋಜರ್ ಕ್ರಮದ ವಿರುದ್ಧ ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಪರೋಕ್ಷ ಎಚ್ಚರಿಕೆ