ನೇಪಾಳ ಗಡಿಯಲ್ಲಿರುವ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ದುರ್ಗಾ ಮೂರ್ತಿ ವಿಸರ್ಜನೆಯ ಮೆರವಣಿಗೆಯ ವೇಳೆ ಹಿಂಸಾಚಾರ ಭುಗಿಲೆದ್ದಿದೆ. ಈ ಹಿಂಸಾಚಾರದಲ್ಲಿ ಭಾಗವಹಿಸಿದ್ದಾರೆ ಎನ್ನಲಾದ ಇಬ್ಬರು ಆರೋಪಿಗಳಿಗೆ ನನ್‌ಪಾರಾ ಬಳಿ ರಾಜ್ಯ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಪೊಲೀಸರು ಎನ್‌ಕೌಂಟರ್‌ನಲ್ಲಿ ಮಾಡಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬಹ್ರೈಚ್ ಗಲಭೆ
ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಆರೋಪಿಗಳನ್ನು ಸರ್ಫರಾಜ್ ಮತ್ತು ಫಹೀಮ್ ಎಂದು ಗುರುತಿಸಲಾಗಿದ್ದು, ಅವರಿಬ್ಬರನ್ನು ನನ್ಪಾರಾದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಅದರಲ್ಲಿ ಸರ್ಫರ್ಜ್ ಅವರ ಸ್ಥಿತಿ ‘ಚಿಂತಾಜನಕವಾಗಿದೆ’ ಎಂದು ಡೆಕ್ಕನ್ ಹೆರಾಲ್ಡ್ ವರದಿ ಹೇಳಿದೆ. ಬಹ್ರೈಚ್ ಗಲಭೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಬಹ್ರೈಚ್ ಹಿಂಸಾಚಾರದ ಐವರು ಆರೋಪಿಗಳು ನೇಪಾಳಕ್ಕೆ ತಪ್ಪಿಸಿಕೊಳ್ಳಲು ಯೋಜಿಸುತ್ತಿದ್ದರು. ಈ ವೇಳೆ ಅವರನ್ನು ಎಸ್‌ಟಿಎಫ್ ತಂಡವು ತಡೆದಿದೆ ಎಂದು ಮೂಲಗಳು ಹೇಳಿವೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದ್ದು, ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಸರ್ಫರಾಜ್ ಮತ್ತು ಫಹೀಮ್‌ಗೆ ಗುಂಡೇಟಿನ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ. ಎನ್‌ಕೌಂಟರ್ ವೇಳೆ ಇತರ ಮೂವರನ್ನು ಬಂಧಿಸಲಾಗಿತ್ತು.
ಅದಾಗ್ಯೂ, ಸರ್ಫರಾಜ್ ಅವರ ಕುಟುಂಬ ಸದಸ್ಯರು, ಬುಧವಾರ ಬೆಳಗ್ಗೆ ಪೊಲೀಸರು ಆತನನ್ನು ಮತ್ತು ಇತರ ಮೂವರು ಸದಸ್ಯರನ್ನು ತಮ್ಮ ನಿವಾಸದಿಂದ ಕರೆದೊಯ್ದಿದ್ದಾರೆ ಎಂದು ಹೇಳಿದ್ದಾರೆ.
ಭಾನುವಾರ ರಾತ್ರಿ ನಡೆದ ದುರ್ಗಾ ವಿಗ್ರಹ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಹಿಂಸಾಚಾರದಲ್ಲಿ ರಾಮ್ ಗೋಪಾಲ್ ಮಿಶ್ರಾ ಎಂಬ ಯುವಕನನ್ನು ಗುಂಡಿಕ್ಕಿ ಕೊಂಲ್ಲಾಗಿದೆ ಎಂದು ವರದಿಯಾಗಿದೆ. ಈ ವೇಳೆ ಭುಗಿಲೆದ್ದ ಹಿಂಸಾಚಾರದಲ್ಲಿ ಸುಮಾರು 12 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಮಾರು 50 ಜನರನ್ನು ಬಂಧಿಸಲಾಗಿದೆ. ಹರ್ಡಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ನಿರ್ಲಕ್ಷ್ಯದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. ಬಹ್ರೈಚ್‌ನಲ್ಲಿ ಹತ್ಯೆಗೈದು ವಾಹನಗಳು, ಮನೆಗಳು ಮತ್ತು ಅಂಗಡಿಗಳನ್ನು ಸುಟ್ಟುಹಾಕಿದ ನಂತರ ಹಿಂಸಾಚಾರ ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ ಎಂದು ವರದಿಯಾಗಿದೆ. ಇದೇ ವೇಳೆ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅದು ಹೇಳಿದೆ.
ಇದನ್ನೂ ಓದಿ: ನಟ ಸಲ್ಮಾನ್ ಖಾನ್ ಹತ್ಯೆಗೆ ಪಾಕಿಸ್ತಾನದಿಂದ ಶಸ್ತ್ರಾಸ್ತ್ರ ತರಿಸಲು ಸಿದ್ದತೆ ನಡೆಸಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್
ನಟ ಸಲ್ಮಾನ್ ಖಾನ್ ಹತ್ಯೆಗೆ ಪಾಕಿಸ್ತಾನದಿಂದ ಶಸ್ತ್ರಾಸ್ತ್ರ ತರಿಸಲು ಸಿದ್ದತೆ ನಡೆಸಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್


