Homeಮುಖಪುಟಬಹ್ರೈಚ್ ಹಿಂಸಾಚಾರ | ಮತ್ತೇ ಬುಲ್ಡೋಜರ್ ದಾಳಿ ಮುಂದುವರೆಸಿದ ಆದಿತ್ಯನಾಥ್ ಸರ್ಕಾರ

ಬಹ್ರೈಚ್ ಹಿಂಸಾಚಾರ | ಮತ್ತೇ ಬುಲ್ಡೋಜರ್ ದಾಳಿ ಮುಂದುವರೆಸಿದ ಆದಿತ್ಯನಾಥ್ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿಯ ಆದಿತ್ಯನಾಥ್ ಆಡಳಿತರ ಬುಲ್ಡೋಜರ್ ದಾಳಿ ಮುಂದುವರೆದಿದ್ದು, ಬಹ್ರೈಚ್‌ನ ಜಿಲ್ಲಾ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಅಧಿಕಾರಿಗಳು ಅಕ್ಟೋಬರ್ 13 ರಂದು ಬಹ್ರೈಚ್‌ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ 23 ಜನರ ಮನೆಗಳಿಗೆ ಶುಕ್ರವಾರ ನೋಟಿಸ್ ಅಂಟಿಸಿದ್ದಾರೆ. ಮೂರು ದಿನಗಳಲ್ಲಿ ಅಕ್ರಮ ನಿರ್ಮಾಣವನ್ನು ತೆಗೆದುಹಾಕಬೇಕು ಇಲ್ಲದಿದ್ದರೆ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳುತ್ತದೆ ಎಂದು ನೋಟೀಸ್ ಎಚ್ಚರಿಸಿದೆ. ಬಹ್ರೈಚ್ ಹಿಂಸಾಚಾರ

24 ವರ್ಷದ ರಾಮ್ ಗೋಪಾಲ್ ಮಿಶ್ರಾ ಅವರ ಹತ್ಯೆಯ ನಂತರ ಬಹ್ರೈಚ್‌ನಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದಿತ್ತು. ಈ ಹಿಂಸಾಚಾರಕ್ಕೆ ಕಾರಣ ಎಂದು ಆರೋಪಿಸಲಾಗಿದ್ದ ಐದು ಜನರಲ್ಲಿ ಒಬ್ಬರಾದ ಅಬ್ದುಲ್ ಹಮೀದ್ ಸೇರಿದಂತೆ 23 ಜನರ ವಿರುದ್ಧ ಬುಲ್ಡೋಜರ್ ಕ್ರಮವನ್ನು ಪ್ರಾರಂಭಿಸುವ ಮೊದಲ ಹೆಜ್ಜೆ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಲಾಖಾ ಮಾನದಂಡಗಳ ಪ್ರಕಾರ, ಗ್ರಾಮೀಣ ಪ್ರದೇಶದ ಮುಖ್ಯ ಜಿಲ್ಲಾ ರಸ್ತೆಯಲ್ಲಿ ಇಲಾಖೆಯ ಅನುಮತಿಯಿಲ್ಲದೆ, ರಸ್ತೆಯ ಮಧ್ಯಭಾಗದಿಂದ 60 ಅಡಿ ಅಂತರದಲ್ಲಿ ಯಾವುದೇ ನಿರ್ಮಾಣ ಕಾಮಗಾರಿ ಅಕ್ರಮ ನಿರ್ಮಾಣದ ವರ್ಗಕ್ಕೆ ಸೇರುತ್ತದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

“ಬಹ್ರೈಚ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಥವಾ ಪೂರ್ವ ಇಲಾಖಾ ಅನುಮತಿಯೊಂದಿಗೆ ನಿರ್ಮಾಣ ಕಾರ್ಯವನ್ನು ಮಾಡಿದ್ದರೆ, ಅದರ ಮೂಲ ಪ್ರತಿಯನ್ನು ತಕ್ಷಣವೇ ಒದಗಿಸಿ, ಇಲ್ಲದಿದ್ದರೆ ಮೂರು ದಿನಗಳಲ್ಲಿ ಅಕ್ರಮ ನಿರ್ಮಾಣವನ್ನು ನೀವೇ ತೆಗೆದುಹಾಕಿ. ಇಲ್ಲವಾದಲ್ಲಿ ಪೊಲೀಸರು ಹಾಗೂ ಜಿಲ್ಲಾಡಳಿತದ ನೆರವಿನೊಂದಿಗೆ ಅಕ್ರಮ ಕಟ್ಟಡವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಐವರು ಆರೋಪಿಗಳಾದ ಅಬ್ದುಲ್ ಹಮೀದ್, ಮೊಹಮ್ಮದ್ ಅಫ್ಜಲ್, ಮೊಹಮ್ಮದ್ ಫಹೀಮ್, ಮೊಹಮ್ಮದ್ ಸರ್ಫರಾಜ್ ಮತ್ತು ಮೊಹಮ್ಮದ್ ತಾಲೀಮ್ ಅವರನ್ನು ಗುರುವಾರ ಬಂಧಿಸಲಾಯಿತು. ಆರಂಭದಲ್ಲಿ ಮೂವರನ್ನು ಬಂಧಿಸಲಾಗಿದ್ದರೆ, ಸರ್ಫರಾಜ್ ಮತ್ತು ತಾಲೀಮ್ ಅವರನ್ನು ಎನ್‌ಕೌಂಟರ್ ನಂತರ ಬಂಧಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲೆಯ ನನ್‌ಪಾರಾ ಪ್ರದೇಶದಲ್ಲಿ ಅವರ ಕಾಲಿಗೆ ಗುಂಡುಗಳನ್ನು ಹಾರಿಸಲಾಗಿತ್ತು. ಪೊಲೀಸರು ಪ್ರತಿಪಾದನೆಯನ್ನು ಅವರ ಕುಟುಂಬಿಕರು ನಿರಾಕರಿಸಿದ್ದು, ಅವರನ್ನು ಮನೆಯಿಂದ ವಶಕ್ಕೆ ಪಡೆದು ಕರೆದುಕೊಂಡು ಹೋಗಲಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಲಿಗೆ ಪ್ರಕರಣ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಬಂಧನ

23 ಮನೆಗಳಿಗೆ ನೋಟಿಸ್ ಅಂಟಿಸಲಾಗಿದೆ ಎಂದು ಮಹಸಿ ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಡಿಒ) ಹೇಮಂತ್ ಕುಮಾರ್ ಯಾದವ್ ಅವರು ಖಚಿತಪಡಿಸಿದ್ದು, ಪ್ರದೇಶದಲ್ಲಿ ಭಾರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ ಮತ್ತು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ ಎಂದು ಹೇಳಿದ್ದಾರೆ. ಅಕ್ರಮ ಕಟ್ಟಡಗಳಲ್ಲಿ ವಾಸ ಮಾಡುತ್ತಿರುವ ಅಕ್ರಮ ನಿವಾಸಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಅತಿಕ್ರಮಣದಾರರಿಗೆ ಮೂರು ದಿನಗಳ ಕಾಲಾವಕಾಶ ನೀಡಲಾಗಿದ್ದು, ಸೂಚನೆ ಮೇರೆಗೆ ಭಾನುವಾರ ಅಥವಾ ಸೋಮವಾರ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಹ್ರೈಚ್‌ನ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯುಡಿ) ಕಾರ್ಯನಿರ್ವಾಹಕ ಇಂಜಿನಿಯರ್‌ರ ಕಚೇರಿಯಿಂದ ನೋಟಿಸ್ ಅಕ್ಟೋಬರ್ 17, 2024 ರಂದು ನೀಡಲಾಗಿತ್ತು.

ಬಹ್ರೈಚ್ ಜಿಲ್ಲೆಯಲ್ಲಿ ಭಾನುವಾರ ಉದ್ವಿಗ್ನತೆ ಉಂಟಾಗಿದ್ದು, ಹಿಂಸಾಚಾರ ಭುಗಿಲೆದ್ದಿತ್ತು. ಈ ಹಿಂಸಾಚಾರ ಸೋಮವಾರ ರಾತ್ರಿಯವರೆಗೆ ಮುಂದುವರೆದಿತ್ತು. ಒಂದು ದಿನದ ನಂತರ ದುರ್ಗಾಪೂಜೆ ವಿಗ್ರಹ ವಿಸರ್ಜನೆಯ ಸಮಯದಲ್ಲಿ ಗುಂಡು ಹಾರಾಟ ನಡೆದು ರಾಮ್‌ ಮಿಶ್ರಾ ಅವರ ಹತ್ಯೆಯಾಗಿತ್ತು ಹಾಗೂ ನಾಲ್ಕು ಜನರು ಗಾಯಗೊಂಡಿದ್ದರು. ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ ನಡೆಸಲಾಗಿದ್ದ ಮೆರವಣಿಗೆಯ ವೇಳೆ ಉದ್ರೇಕಕಾರಿ ಹಾಡುಗಳನ್ನು ನುಡಿಸುವ ಮೂಲಕ ಹಿಂಸಾಚಾರವನ್ನು ಪ್ರಚೋದಿಸಲಾಗಿತ್ತು. ಇದರ ಪರಿಣಾಮ ಹಿಂಸಾಚಾರ ಪ್ರಾರಂಭವಾಗಿತ್ತು ಎಂದು ವರದಿಯಾಗಿದೆ.

ಎಲ್ಲಾ ಐವರು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನದ ಮೇಲೆ ಜೈಲಿಗೆ ಕಳುಹಿಸಲಾಗಿದೆ. ಈ ನಡುವೆ ನೋಟೀಸ್‌ಗಳು ಆ ಪ್ರದೇಶದ ಜನರಲ್ಲಿ ಆತಂಕ ಮೂಡಿಸಿದೆ. ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಈ ಬೆಳವಣಿಗೆಯನ್ನು ಖಂಡಿಸಿವೆ.

ಇದನ್ನೂ ಓದಿ: ಜಾರ್ಖಂಡ್ | ಜೆಎಂಎಂ-ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧೆ; ‘ಏಕಪಕ್ಷೀಯ’ ನಿರ್ಧಾರ ಎಂದ ಆರ್‌ಜೆಡಿ!

ಜಾರ್ಖಂಡ್ | ಜೆಎಂಎಂ-ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧೆ; ‘ಏಕಪಕ್ಷೀಯ’ ನಿರ್ಧಾರ ಎಂದ ಆರ್‌ಜೆಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...