Homeರಾಷ್ಟ್ರೀಯತೀಸ್ತಾ ಮತ್ತು ಶ್ರೀಕುಮಾರ್ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಅಹಮದಾಬಾದ್ ನ್ಯಾಯಾಲಯ

ತೀಸ್ತಾ ಮತ್ತು ಶ್ರೀಕುಮಾರ್ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಅಹಮದಾಬಾದ್ ನ್ಯಾಯಾಲಯ

- Advertisement -
- Advertisement -

ಖ್ಯಾತ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್‌.ಬಿ. ಶ್ರೀಕುಮಾರ್ ಸಲ್ಲಿಸಿದ ಜಾಮೀನು ಅರ್ಜಿಯ ಆದೇಶಗಳನ್ನು ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯವು ಗುರುವಾರ ಕಾಯ್ದಿರಿಸಿದೆ. 2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ನಕಲಿ ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ಮತ್ತು ಶ್ರೀಕುಮಾರ್ ಅವರನ್ನು ಜೂನ್ 26 ರಂದು ಬಂಧಿಸಲಾಗಿತ್ತು.

“ಎಲ್ಲಾ ಕ್ಷಕ್ಷಿದಾರರು ತಮ್ಮ ವಾದವನ್ನು ಪೂರ್ಣಗೊಳಿಸಿದ್ದಾರೆ” ಎಂದು ಪ್ರಕರಣದಲ್ಲಿ ವಾದಿಸಿರುವ ವಕೀಲರಲ್ಲಿ ಒಬ್ಬರಾದ ವಕೀಲ ವಿಜಯ್ ಹಿರೇಮಠ ಅವರು ಸ್ಕ್ರಾಲ್‌.ಇನ್‌ಗೆ ತಿಳಿಸಿದ್ದಾರೆ. “ಈಗ, ಆದೇಶವನ್ನು ಕಾಯ್ದಿರಿಸಲಾಗಿದ್ದು, ಅದನ್ನು ಮಂಗಳವಾರ ಅಥವಾ ಬುಧವಾರದಂದು ನೀಡಲಾಗುತ್ತದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುಧವಾರದಂದು ರಾಜ್ಯ ಸರ್ಕಾರವು ತೀಸ್ತಾ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿತ್ತು. ಜುಲೈ 15 ರಂದು ಸಲ್ಲಿಸಿದ ಅಫಿಡವಿಟ್‌ನಲ್ಲಿ, 2002 ರ ಗುಜರಾತ್‌ ಗಲಭೆಯ ನಂತರ ಚುನಾಯಿತ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಶ್ರೀಕುಮಾರ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರೊಂದಿಗೆ ತೀಸ್ತಾ ಸೆಟಲ್ವಾಡ್ ಕೂಡಾ ಭಾರಿ ಪಿತೂರಿಯ ಭಾಗವಾಗಿದ್ದರು ಎಂದು ಗುಜರಾತ್ ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ವಿರುದ್ಧ ದಿವಂಗತ ಅಹ್ಮದ್ ಪಟೇಲ್ ಸಂಚು – ತೀಸ್ತಾ ಅದರ ಭಾಗ: ಗುಜರಾತ್‌ ಪೊಲೀಸ್ ಆರೋಪ

ಕಾಂಗ್ರೆಸ್‌ನ ಮಾಜಿ ಸಂಸದ ಅಹ್ಮದ್ ಪಟೇಲ್ ಅವರ ನಿರ್ದೇಶನದ ಮೇರೆಗೆ ಈ ಸಂಚು ರೂಪಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತೀಸ್ತಾ ಮತ್ತು ಶ್ರೀಕುಮಾರ್ ಇಬ್ಬರೂ ಈ ಆರೋಪವನ್ನು ವಿರೋಧಿಸಿದ್ದಾರೆ. ತಮ್ಮ ವಿರುದ್ಧ ಹೊರಿಸಲಾದ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರಗಳ ಇಲ್ಲ ಎಂದು ಹೇಳಿದ್ದು, ಇದನ್ನು ಕಾನೂನಿನಡಿಯಲ್ಲಿ ನಿರ್ವಹಿಸಲು ಸಾಧ್ಯವಿಲ್ಲ ಎಂದು ಸೆಟಲ್ವಾಡ್ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ತಾನು ಯಾವುದೇ ಅಪರಾಧ ಮಾಡಿಲ್ಲ ಎಂದು ಶ್ರೀಕುಮಾರ್ ಹೇಳಿಕೊಂಡಿದ್ದಾರೆ. ಅವರ ಜಾಮೀನು ಅರ್ಜಿಗಳು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಡಿಡಿ ಠಕ್ಕರ್ ಅವರ ನ್ಯಾಯಾಲಯದಲ್ಲಿ ಬಾಕಿ ಉಳಿದಿವೆ.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ನುಡಿದ ತೀಸ್ತಾ ಬಂಧನ; ಸುಪ್ರೀಂ ಕೋರ್ಟ್ ತನ್ನ ಜವಾಬ್ದಾರಿಯನ್ನು ಮರೆಯಿತೇ?

ತೀಸ್ತಾ ಮತ್ತು ಶ್ರೀಕುಮಾರ್ ಬಂಧನ

ರಾಜಕಾರಣಿ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಮತ್ತು ತೀಸ್ತಾ ಸೆಟಲ್ವಾಡ್ ಅವರು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರ ಅಧಿಕಾರಿಗಳಿಗೆ ನೀಡಿದ್ದ ಕ್ಲೀನ್ ಚಿಟ್ ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಜೂನ್ 24 ರಂದು ವಜಾಗೊಳಿಸಿತ್ತು. ಇದರ ನಂತರ ತೀಸ್ತಾ ಮತ್ತು ಶ್ರೀಕುಮಾರ್ ಅವರ ಬಂಧನ ನಡೆದಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಎಎಪಿಯನ್ನು ಹತ್ತಿಕ್ಕಲು ಬಿಜೆಪಿ ಆಪರೇಷನ್ ಜಾದು ಆರಂಭಿಸಿದೆ..’; ಅರವಿಂದ್ ಕೇಜ್ರಿವಾಲ್

0
"ಪ್ರಧಾನಿ ನರೇಂದ್ರ ಮೋದಿ ಅವರು ಯಾರನ್ನಾದರೂ ಜೈಲಿಗೆ ಕಳುಹಿಸಬಹುದು" ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕರೊಂದಿಗೆ ಇಂದು ಬಿಜೆಪಿ ಕೇಂದ್ರ ಕಚೇರಿಗೆ ಯೋಜಿತ...