Homeಮುಖಪುಟಸುಳ್ಳು ಸುದ್ದಿ ಪ್ರಕಟ: ಪಾಯಲ್‌ ರೋಹ್ಟಗಿಗಿಲ್ಲ ಬೇಲ್: ಎಂಟು ದಿನಗಳ ನ್ಯಾಯಂಗ ಬಂಧನಕ್ಕೆ ಆದೇಶ

ಸುಳ್ಳು ಸುದ್ದಿ ಪ್ರಕಟ: ಪಾಯಲ್‌ ರೋಹ್ಟಗಿಗಿಲ್ಲ ಬೇಲ್: ಎಂಟು ದಿನಗಳ ನ್ಯಾಯಂಗ ಬಂಧನಕ್ಕೆ ಆದೇಶ

- Advertisement -
- Advertisement -

ಸೋಷಿಯಲ್ ಮೀಡಿಯಾದಲ್ಲಿ ನೆಹರೂ-ಗಾಂಧಿ ಕುಟುಂಬದ ವಿರುದ್ಧ ಸುಳ್ಳು ಸುದ್ದಿ ಪ್ರಕಟಿಸಿದ ಕಾರಣಕ್ಕಾಗಿ ಬಂಧನಕ್ಕೊಳಗಾಗಿದ್ದ ಪಾಯಲ್ ರೋಹ್ಟಗಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಅಲ್ಲದೇ 8 ದಿನಗಳ ನ್ಯಾಯಾಂಗ ಕಸ್ಟಡಿಗೆ ಆದೇಶಿಸಿದೆ.

ರಾಜಸ್ಥಾನದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಾರ್ಮೇಶ್ ಶರ್ಮಾ ಅವರು ರೋಹ್ಟಗಿ ವಿರುದ್ಧ ಬುಂಡಿಯ ಸದರ್ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 2 ರಂದು ಪೊಲೀಸ್ ದೂರು ದಾಖಲಿಸಿದ್ದರು. ಬುಂಡಿಯ ನ್ಯಾಯಾಲಯವು ಈ ತೀರ್ಪು ನೀಡಿದ್ದು ಎಂಟು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ನೆಹರು-ಗಾಂಧಿ ವಿರುದ್ಧ ರೋಹ್ಟಗಿಯವರು “ಅಸಹ್ಯಕರ ಮತ್ತು ವಿವಾದಾತ್ಮಕ” ವಿಷಯವನ್ನು ಪೋಸ್ಟ್ ಮಾಡಿದ್ದಾರೆ ಎಂದು ಶರ್ಮಾ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಈ ವರ್ಷ ಸೆಪ್ಟೆಂಬರ್ 6 ಮತ್ತು ಸೆಪ್ಟೆಂಬರ್ 21 ರಂದು ಅವರ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ಅವು ಪ್ರಕಟವಾಗಿವೆ ಎಂದಿದ್ದಾರೆ.

ಕಾನೂನು ಮತ್ತು ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸಲು ಉದ್ದೇಶಪೂರ್ವಕವಾಗಿ ಮಾಡಿದ ಅವಮಾನಕ್ಕೆ ಸಂಬಂಧಿಸಿದ ದಂಡ ಸಂಹಿತೆಯ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿಯಲ್ಲಿ ಪಾಯಲ್ ರೋಹಟ್ಗಿಯನ್ನು ಬಂಧಿಸಲಾಗಿದೆ. ಪಾಯಲ್ ರೋಹ್ತಗಿ ಯಾವುದೇ ಗಂಭೀರ ಅಪರಾಧ ಮಾಡಿಲ್, ಆದರೂ ಗಂಭೀರ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಆಕೆಯ ವಕೀಲ ಭೂಪೇಂದ್ರ ರೈ ಸಕ್ಸೇನಾ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...