Homeಮುಖಪುಟದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಮಂಜೂರು

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ದೆಹಲಿಯ ರೂಸ್‌ ಅವೆನ್ಯೂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಜಾಮೀನಿಗಾಗಿ 15,000 ವೈಯಕ್ತಿಕ ಬಾಂಡ್ ಮತ್ತು 1 ಲಕ್ಷ ಭದ್ರತಾ ಬಾಂಡ್ ನೀಡುವಂತೆ ಸೂಚಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಪುನರಾವರ್ತಿತ ಸಮನ್ಸ್‌ಗಳನ್ನು ನೀಡಿದ್ದರೂ ಕೇಜ್ರಿವಾಲ್‌ ವಿಚಾರಣೆಗೆ ಹಾಜರಾಗಿರಲಿಲ್ಲ. ಇದರಿಂದಾಗಿ ದೆಹಲಿ ಮುಖ್ಯಮಂತ್ರಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 174ನ್ನು ಉಲ್ಲಂಘಿಸಿದ್ದಾರೆ ಎಂದು ಆಪಾದಿಸಲಾಗಿತ್ತು. ಕೇಜ್ರಿವಾಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಇ.ಡಿ ಮ್ಯಾಜಿಸ್ಟ್ರಿಯಲ್‌ ನ್ಯಾಯಾಲಯಕ್ಕೆ ಎರಡು ದೂರು ದಾಖಲಿಸಿತ್ತು.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯವು ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ 8 ಸಮನ್ಸ್‌ಗಳನ್ನು ನೀಡಿದೆ. ಆದರೆ ವಿಚಾರಣೆಗೆ ಹಾಜರಾಗಿಲ್ಲ ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿದ ನಂತರ ಎಎಪಿ ಮುಖ್ಯಸ್ಥರಿಗೆ ಸಮನ್ಸ್ ನೀಡಿದೆ.

ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ರೋಸ್ ಅವೆನ್ಯೂ ಕೋರ್ಟ್ ಸೂಚಿಸಿತ್ತು. ಭಾರೀ ಭದ್ರತೆಯ ನಡುವೆ ಕೇಜ್ರಿವಾಲ್ ಮತ್ತು ಅವರ ವಕೀಲ ರಮೇಶ್ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.

ಆಮ್ ಆದ್ಮಿ ಪಕ್ಷದ ಸಂಚಾಲಕರೂ ಆದ ಕೇಜ್ರಿವಾಲ್‌ ಅವರು ಈ ಹಿಂದೆ ‘ಈ ಸಮನ್ಸ್‌ಗಳು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ. ಚುನಾವಣಾ ಪ್ರಚಾರಕ್ಕೆ ಹೋಗದಂತೆ ನನ್ನನ್ನು ತಡೆಯುವ ಉದ್ದೇಶದಿಂದ ಸಮನ್ಸ್ ನೀಡಲಾಗಿದೆ’ ಎಂದು ಆರೋಪಿಸಿ ಇ.ಡಿಗೆ ಪತ್ರ ಬರೆದಿದ್ದರು. ನರೇಂದ್ರ ಮೋದಿ ಸರ್ಕಾರವು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಲು ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಆರೋಪಿಸಿದ್ದರು.

ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ದೆಹಲಿಯ ಈಗ ರದ್ದಾದ ಅಬಕಾರಿ ನೀತಿಗೆ ಸಂಬಂಧಿಸಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಈ ಮೊದಲು ಬಂಧಿಸಿದ್ದರು. ಇಡಿ ಚಾರ್ಜ್ ಶೀಟ್‌ಗಳಲ್ಲಿ ಕೇಜ್ರಿವಾಲ್ ಅವರ ಹೆಸರು ಉಲ್ಲೇಖಿಸಲಾಗಿದೆ. ಅಬಕಾರಿ ನೀತಿಯ ಕರಡು ರಚನೆ ವೇಳೆ ಪ್ರಕರಣದ ಆರೋಪಿಗಳು ಮುಖ್ಯಮಂತ್ರಿ ಜೊತೆ ಸಂಪರ್ಕದಲ್ಲಿದ್ದರು ಎಂದು ಇಡಿ ಹೇಳಿದೆ.

ಇದನ್ನು ಓದಿ: IT ದಾಳಿ ಬೆನ್ನಲ್ಲಿ 55 ಕೋಟಿ ಮೌಲ್ಯದ ಬಾಂಡ್‌ ಖರೀದಿಸಿದ್ದ ನವಯುಗ ಕಂಪೆನಿ

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪೂಂಚ್ ದಾಳಿ ಬಿಜೆಪಿಯ ಚುನಾವಣಾ ಪೂರ್ವ ಗಿಮಿಕ್: ಚರಂಜಿತ್ ಸಿಂಗ್ ಚನ್ನಿ

0
ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯು ಪಡೆಯ ಬೆಂಗಾವಲು ವಾಹನದ ಮೇಲೆ ನಡೆದ ಉಗ್ರರ ದಾಳಿಯು ಬಿಜೆಪಿಯ ಚುನಾವಣಾ ಪೂರ್ವ ಗಿಮಿಕ್‌ ಎಂದು ಕಾಂಗ್ರೆಸ್ ನಾಯಕ ಹಾಗೂ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ...