Homeಮುಖಪುಟಕಾರವಾನ್ ಪತ್ರಕರ್ತ ಮಂದೀಪ್ ಪುನಿಯಾಗೆ ಜಾಮೀನು- ದೆಹಲಿ ಪೊಲೀಸ್‌ಗೆ ಮುಖಭಂಗ

ಕಾರವಾನ್ ಪತ್ರಕರ್ತ ಮಂದೀಪ್ ಪುನಿಯಾಗೆ ಜಾಮೀನು- ದೆಹಲಿ ಪೊಲೀಸ್‌ಗೆ ಮುಖಭಂಗ

- Advertisement -
- Advertisement -

ಕಳೆದ ವಾರ ಸಿಂಘು ಗಡಿಯ ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಂಧಿಸಿದ್ದ ಸ್ವತಂತ್ರ ಪತ್ರಕರ್ತ ಮಂದೀಪ್ ಪುನಿಯಾ ಅವರಿಗೆ ದೆಹಲಿಯ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ. ಕಾರವಾನ್ ನಿಯತಕಾಲಿಕೆಯಲ್ಲೂ ಬರೆಯುತ್ತಿರುವ ಮಂದೀಪ್ ಪುನಿಯಾ ಅವರನ್ನು, ಕರ್ತವ್ಯದಲ್ಲಿದ್ದ ಪೊಲೀಸರೊಂದಿಗೆ ಕೆಟ್ಟದಾಗಿ ವರ್ತಿಸಿದ ಆರೋಪವನ್ನು ಹೊರಿಸಲಾಗಿತ್ತು.

“ಕಾನೂನು ವ್ಯವಸ್ಥೆಯ ಮೂಲಭೂತ ತತ್ವದ ಪ್ರಕಾರ ಜಾಮೀನು ನೀಡುವುದು ನಿಯಮವಾಗಿದ್ದು, ಜೈಲಿಗೆ ಕಳುಹಿಸುವುದು ಒಂದು ಅಪವಾದವಾಗಿದೆ” ಎಂದು ಕೋರ್ಟ್ ಹೇಳಿದೆ.

ಜಾಮೀನು ಅರ್ಜಿಯ ಕುರಿತು ಸೋಮವಾರ ವಿಚಾರಣೆ ನಡೆಸಿದ್ದ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸತ್ವೀರ್ ಸಿಂಗ್ ಲಂಬಾ ಅವರು ಆದೇಶವನ್ನು ಕಾಯ್ದಿರಿಸಿದ್ದರು. ಕರಾಳ ಕೃಷಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಗು ಗಡಿಯಲ್ಲಿ ಪ್ರತಿಭಟನಾಕಾರರನ್ನು ಪ್ರಚೋದಿಸಲು ಮತ್ತು ಗೊಂದಲವನ್ನು ಉಂಟುಮಾಡಲು ಪುನಿಯಾ ಪ್ರಯತ್ನಿಸಬಹುದು ಎಂದು ದೆಹಲಿ ಪೊಲೀಸರು ಅವರಿಗೆ ಜಾಮೀನು ನೀಡುವುದನ್ನು ವಿರೋಧಿಸಿದ್ದರು.

ಇದನ್ನೂ ಓದಿ: ಪತ್ರಕರ್ತರ ಬಂಧನ: ದೆಹಲಿ ಪೊಲೀಸರ ವಿರುದ್ಧ ಭುಗಿಲೆದ್ದ ಪ್ರತಿಭಟನೆ

ಶನಿವಾರ ಸಂಜೆ ಬ್ಯಾರಿಕೇಡ್‌ಗಳನ್ನು ಮುರಿಯಲು ಯತ್ನಿಸಿದ ಜನರ ಗುಂಪಿನಲ್ಲಿ ಇವರಿದ್ದರು ಎಂದು ಆರೋಪಿಸಿರುವ ಪೊಲೀಸರೊಬ್ಬರ ದೂರಿನ ಆಧಾರದ ಮೇಲೆ ಪುನಿಯಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಭಾನುವಾರ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು.

ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದು, ಪತ್ರಕರ್ತರಿಗೆ ಯಾವುದೇ ಭಯವಿಲ್ಲದೆ ವರದಿ ಮಾಡಲು ಅವಕಾಶ ನೀಡುವಂತೆ ಪೊಲೀಸರಿಗೆ ಕರೆ ನೀಡಿತ್ತು. ಈಮಧ್ಯೆ, ಭಾನುವಾರ ದೆಹಲಿಯ ಪತ್ರಕರ್ತರು ಅವರ ಬಂಧನದ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಮತ್ತೊಬ್ಬ ಪತ್ರಕರ್ತ ಆನ್‌ಲೈನ್ ನ್ಯೂಸ್ ಇಂಡಿಯಾದ ಧರ್ಮೇಂದರ್ ಸಿಂಗ್ ಅವರನ್ನು ಸಹ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಆದರೆ ಅವರನ್ನು ಭಾನುವಾರ ಬೆಳಿಗ್ಗೆ ಬಿಡುಗಡೆ ಮಾಡಲಾಯಿತು. ಗಣರಾಜ್ಯೋತ್ಸವದಂದು ನಡೆದ ರೈತರ ಟ್ರಾಕ್ಟರ್ ರ್‍ಯಾಲಿಯಲ್ಲಿ ಪ್ರತಿಭಟನಾಕಾರ ಯುವಕನೊಬ್ಬ ಮೃತಪಟ್ಟಿದ್ದರು. ಈ ಕುರಿತು ಹಲವು ಪತ್ರಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಪೋಸ್ಟ್‌‌ಗಳ ಬಗ್ಗೆ ವಿವಿಧ ರಾಜ್ಯಗಳಲ್ಲಿ ಪತ್ರಕರ್ತರ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ರೈತರ ಪರ ವರದಿ ಮಾಡಿದ ಪತ್ರಕರ್ತೆಗೆ ಅತ್ಯಾಚಾರ, ಕೊಲೆ ಬೆದರಿಕೆ: ಎಬಿವಿಪಿ ಸದಸ್ಯನ ಬಂಧನ

ವಿಧಾನ ಸಭಾ ಅಧಿವೇಶನದ ಯೂಟ್ಯೂಬ್ ಲೈವ್►►‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...