Homeಮುಖಪುಟಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು

ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು

- Advertisement -
- Advertisement -

ಅಮರಾವತಿ ಇನ್ನರ್ ರಿಂಗ್ ರೋಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಚಂದ್ರಬಾಬು ನಾಯ್ಡು ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಾದ ಆಲಿಸಿದ ನ್ಯಾಯಾಲಯ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 16ರವರೆಗೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸದಂತೆ ನ್ಯಾಯಾಲಯ ಮಧ್ಯಂತರ ಆದೇಶವನ್ನು ನೀಡಿದೆ.

ಕೌಶಲ ಅಭಿವೃದ್ಧಿ, ಕಾರ್ಪೊರೇಷನ್‌ನಲ್ಲಿದ್ದ ಹಣ ದುರುಪಯೋಗ ಪ್ರಕರಣದಲ್ಲಿ ಸೆ.9ರಂದು ಬಂಧನವಾಗಿರುವ ಚಂದ್ರಬಾಬು ನಾಯ್ಡು ಅವರನ್ನು ರಾಜಮಹೇಂದ್ರನರಂ ಕೇಂದ್ರೀಯ ಕಾರಾಗೃಹದಲ್ಲಿ ಇರಿಸಲಾಗಿದೆ.

ಕೌಶಲ ಅಭಿವೃದ್ಧಿ ಕಾರ್ಪೊರೇಷನ್‌ನಲ್ಲಿದ್ದ ಹಣ ದುರುಪಯೋಗ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ 300 ಕೋಟಿಗೂ ಹೆಚ್ಚು ನಷ್ಟವಾಗಿದೆ ಎನ್ನಲಾಗಿದೆ.

ಇನ್ನು ಅಂಗಲ್ಲು ಹಿಂಸಾಚಾರ ಪ್ರಕರಣದಲ್ಲಿ ನಾಳೆಯವರೆಗೆ ಯಾರನ್ನೂ ಬಂಧಿಸದಂತೆ ಸಿಐಡಿಗೆ ನ್ಯಾಯಾಲಯ ಸೂಚನೆ ನೀಡಿದೆ. ಸಿಐಡಿ ವಿಜಯವಾಡ ಎಸಿಬಿ ನ್ಯಾಯಾಲಯ ಸಲ್ಲಿಸಿದ್ದ ಇನ್ನರ್ ರಿಂಗ್ ರೋಡ್ ಅರ್ಜಿಗೆ ಹೈಕೋರ್ಟ್ ತಡೆ ನೀಡಿದೆ.

2014-19ರ ಅವರ ಅವಧಿಯಲ್ಲಿ ನಾಯ್ಡು ನೇತೃತ್ವದಲ್ಲಿ ಸರ್ಕಾರ ಆಂಧ್ರಪ್ರದೇಶ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ನಡೆಸಿದೆ ಎಂದು ಆರೋಪಿಸಿ, ಸೆಪ್ಟೆಂಬರ್ 9 ರಂದು ನಂದ್ಯಾಲ್‌ನಿಂದ ರಾಜ್ಯ ಸಿಐಡಿ ಬಂದಿಸಿತ್ತು. ನಂತರ ಚಂದ್ರಬಾಬು ನಾಯ್ಡು ಅಮರಾವತಿ ಇನ್ನರ್ ರಿಂಗ್ ರೋಡ್, ಫೈಬರ್ ನೆಟ್ ಮತ್ತು ಅಂಗಲ್ಲು ಹಿಂಸಾಚಾರ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದರು.

ಈ ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಜಾಮೀನು ಅರ್ಜಿಯನ್ನು ಡೀಮ್ಡ್ ಕಸ್ಟಡಿ ಆಧಾರದ ಮೇಲೆ ತಿರಸ್ಕರಿಸಿತು. ಇನ್ನು ಇನ್ನರ್ ರಿಂಗ್ ರೋಡ್ ಪ್ರಕರಣದಲ್ಲಿ, ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ತನಿಖೆ ಆರಂಭಿಕ ಹಂತದಲ್ಲಿದೆ ಎಂದು ಹೇಳಿದೆ.

ಇದನ್ನೂ ಓದಿ: ಚಂದ್ರಬಾಬು ನಾಯ್ಡುಗೆ ಹಿನ್ನಡೆ: ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...