Homeಕರ್ನಾಟಕಕೊಲೆ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿಗೆ ಜಾಮೀನು; ಮರು ತನಿಖೆಗೆ ಮುನೀರ್ ಕಾಟಿಪಳ್ಳ ಆಗ್ರಹ

ಕೊಲೆ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿಗೆ ಜಾಮೀನು; ಮರು ತನಿಖೆಗೆ ಮುನೀರ್ ಕಾಟಿಪಳ್ಳ ಆಗ್ರಹ

- Advertisement -
- Advertisement -

ಜಾನುವಾರು ಸಾಗಣೆ ಮಾಡುವ ಸಂದರ್ಭದಲ್ಲಿ ಇದ್ರೀಸ್ ಪಾಷಾ (45) ಎಂಬುವವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ಹಾಗೂ ಇತರ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದ ಮರು ತನಿಖೆಯ ಮಾಡಬೇಕು ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.

ಆರೋಪಿಗಳಾದ ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರಿಗೆ ಜಾಮೀನು ಸಿಕ್ಕ ಬಳಿಕ ಪ್ರತಿಕ್ರಿಯಿಸಿದ ಮುನೀರ್ ಅವರು, ”ಜಾನುವಾರು ವ್ಯಾಪಾರಿ ಇದ್ರೀಸ್ ಪಾಷಾ ಹತ್ಯೆ ಆರೋಪಿಗಳಾದ ಪುನೀತ್ ಕೆರೆಹಳ್ಳಿ ಮತ್ತಾತನ ನಟೋರಿಯಸ್ ಗ್ಯಾಂಗ್ ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದು ಆಘಾತಕಾರಿ. ಬಿಜೆಪಿ ಸರಕಾರದ ನಿರ್ದೇಶನದಂತೆ ಪೊಲೀಸರು ದುರ್ಬಲ ತನಿಖಾ ವರದಿ ಸಲ್ಲಿಸಿರುವ ಕಾರಣದಿಂದಲೇ ಇಷ್ಟು ಬೇಗ ಜಾಮೀನು ದೊರಕಿದೆ. ಇದು ಕರ್ನಾಟಕ ಪೊಲೀಸರ ವಿಶ್ವಾಸಾರ್ಹತಗೆ ಧಕ್ಕೆ ತಂದಿದೆ. ಕಾಂಗ್ರೆಸ್ ಸರಕಾರ ಅಸ್ಥಿತ್ವಕ್ಕೆ ಬಂದ ತಕ್ಷಣವೇ ಇದ್ರಿಸ್ ಪಾಷಾ ಹತ್ಯೆ ಪ್ರಕರಣದ ಮರು ತನಿಖೆಯ ನಿರ್ಧಾರ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಕೊಲೆ ಪ್ರಕರಣದ ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳನ್ನು ರಜಾಕಾಲದ ಪೀಠದಲ್ಲಿದ್ದ ನ್ಯಾಯಮೂರ್ತಿ ಎಂ. ಜಿ. ಉಮಾ ಅವರು ಮಂಗಳವಾರ ವಿಚಾರಣೆ ನಡೆಸಿ, ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ, ಗೋಪಿ, ಸುರೇಶ್, ಎ.ಎನ್. ಪವನ್ ಕುಮಾರ್, ಪಿ. ಲಿಂಗಪ್ಪ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ, ಅರುಣ್‌ ಶ್ಯಾಮ್, ”ಮರಣೋತ್ತರ ಪರೀಕ್ಷೆಯಲ್ಲಿ ಇದ್ರೀಸ್ ಪಾಷಾ ದೇಹದಲ್ಲಿ ತರಚಿದ ಗಾಯಗಳ ಬಗ್ಗೆ ಮಾತ್ರ ಉಲ್ಲೇಖವಿದೆ. ಗಂಭೀರ ಗಾಯಗಳ ಬಗ್ಗೆ ಯಾವ ಮಾಹಿತಿಯೂ ಇಲ್ಲ. ಪ್ರಕರಣವು ಸಾತನೂರು ಠಾಣೆಯ 100 ಮೀಟರ್ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಈಗಾಗಲೇ ತನಿಖೆ ಪೂರ್ಣಗೊಂಡಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಪೂರ್ಣಗೊಳಿಸಲಾಗಿದೆ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬೇಕಿದ್ದು ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದರು.

ನ್ಯಾಯಪೀಠವು ಈ ವಾದಾಂಶವನ್ನು ಪುರಸ್ಕರಿಸಿ, ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ, ಗೋಪಿ, ಸುರೇಶ್, ಎ.ಎನ್. ಪವನ್ ಕುಮಾರ್, ಪಿ. ಲಿಂಗಪ್ಪ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣವೇನು?:

ಕಳೆದ ಮಾರ್ಚ್ 31ರಂದು ಮಂಡ್ಯದ ಕಡೆಯಿಂದ ಬರುತ್ತಿದ್ದ ಜಾನುವಾರು ಸಾಗಣೆ ವಾಹನವೊಂದನ್ನು ಸಾತನೂರು ಪೊಲೀಸ್‌ ಠಾಣೆ ಸಮೀಪ ಅಡ್ಡಗಟ್ಟಿದ್ದ ಪುನೀತ್‌ ಕೆರೆಹಳ್ಳಿ ಹಾಗೂ ಆತನ ಸಹಚರರು ವಾಹನದಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.

ಆ ವಾಹನದಲ್ಲಿದ್ದ ಇದ್ರೀಸ್ ಪಾಷಾ ಏಪ್ರಿಲ್ 1ರಂದು ಬೆಳಗ್ಗೆ ಘಟನಾ ಸ್ಥಳದಿಂದ ಅಂದರೆ ಪೊಲೀಸ್‌ ಠಾಣೆಯಿಂದ 100 ಮೀಟರ್‌ ದೂರದಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಘಟನೆ ಅನೇಕ ಅನುಮಾನಗಳಿಗೆ ಕಾರಣವಾಗಿದ್ದು, ವಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಸಾರ್ವಜನಿಕರ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಪುನೀತ್ ಮತ್ತು ಸಹಚರರಿಂದ ಪಾಷ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ಇದ್ರೀಸ್ ಪಾಷಾ ಅವರ ಸಹೋದರ ಯೂನುಸ್ ಪಾಷಾ ದೂರು ನೀಡಿದ್ದರು.

ದೂರು ಆಧರಿಸಿ ಆರೋಪಿಗಳ ವಿರುದ್ಧ ಸಾತನೂರು ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 302, 324, 341, 504, 506 ಜೊತೆಗೆ 34 ಆಟ ಪ್ರಕರಣ ದಾಖಲಾಗಿತ್ತು. ಘಟನೆಯ ಬಳಿಕ ಪುನೀತ್ ಕೆರೆಹಳ್ಳಿ ಮತ್ತು ಉಳಿದ ಆರೋಪಿಗಳು ಪರಾರಿಯಾಗಿದ್ದರು. ಏಪ್ರಿಲ್ 5ರಂದು ಆರೋಪಿಗಳನ್ನು ರಾಜಸ್ಥಾನದ ಬನ್ಸವಾರಾ ಬಳಿ ರಾಮನಗರ ಪೊಲೀಸರು ಬಂಧಿಸಿದ್ದರು. ಬಳಿಕ ಆರೋಪಿಗಳನ್ನು ಅಲ್ಲಿನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ರಾಮನಗರಕ್ಕೆ ಕರೆ ತಂದಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಕನಕಪುರ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...