Homeರಾಷ್ಟ್ರೀಯಖ್ಯಾತ ಫ್ಯಾಕ್ಟ್‌ಚೆಕ್ಕರ್‌‌ ಮೊಹಮ್ಮದ್‌ ಜುಬೇ‌ರ್‌ಗೆ ಜಾಮೀನು: ಸಂಜೆ 6 ಗಂಟೆಯೊಳಗೆ ಬಿಡುಗಡೆಗೆ ಸುಪ್ರೀಂ ಆದೇಶ

ಖ್ಯಾತ ಫ್ಯಾಕ್ಟ್‌ಚೆಕ್ಕರ್‌‌ ಮೊಹಮ್ಮದ್‌ ಜುಬೇ‌ರ್‌ಗೆ ಜಾಮೀನು: ಸಂಜೆ 6 ಗಂಟೆಯೊಳಗೆ ಬಿಡುಗಡೆಗೆ ಸುಪ್ರೀಂ ಆದೇಶ

- Advertisement -
- Advertisement -

ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್ ಅವರ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳಲ್ಲಿ ಸುಪ್ರೀಕೋರ್ಟ್‌ ಬುಧವಾರ ಜಾಮೀನು ನೀಡಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಹೇಳಿದೆ. ಇಂದು ಸಂಜೆ 6 ಗಂಟೆಯೊಳಗೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದೆ.

“ಎಲ್ಲಾ ಎಫ್‌ಐಆರ್‌ಗಳಲ್ಲಿ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ನಾವು ಅಭಿಪ್ರಾಯಪಡುತ್ತೇವೆ. ಇದು ಕಾನೂನಿನ ಒಂದು ಸೆಟ್ ತತ್ವವಾಗಿದ್ದು, ಬಂಧನದ ಅಧಿಕಾರವನ್ನು ಮಿತವಾಗಿ ಅನುಸರಿಸಬೇಕು” ಎಂದು ಸುಪ್ರೀಂಕೋರ್ಟ್ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಸ್ತುತ ಪ್ರಕರಣದಲ್ಲಿ ಅವರನ್ನು ನಿರಂತರ ಬಂಧನದಲ್ಲಿ ಇರಿಸಲು ಮತ್ತು ವಿವಿಧ ನ್ಯಾಯಾಲಯಗಳಲ್ಲಿ ಅಂತ್ಯವಿಲ್ಲದ ಸುತ್ತಿನ ವಿಚಾರಣೆಗೆ ಒಳಪಡಿಸುವುದನ್ನು ಸಮರ್ಥಿಸಲು ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಇದನ್ನೂ ಓದಿ: ಜುಬೇರ್‌ ಪ್ರಕರಣಗಳ ‘ವಿಷ ವರ್ತುಲ’ದಲ್ಲಿ ಸಿಲುಕಿದ್ದಾರೆ: ಸುಪ್ರೀಂಕೋರ್ಟ್‌ ಹೇಳಿಕೆ

ಯುಪಿ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಮೊಹಮ್ಮದ್ ಜುಬೇರ್ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ದು ಇಂದು ಆದೇಶಿಸಿದ್ದು, “ಎಲ್ಲಾ ಪ್ರಕರಣಗಳಲ್ಲಿನ ಎಫ್‌ಐಆರ್‌ಗಳನ್ನು ಒಟ್ಟಿಗೆ ಸೇರಿಸಿ, ಒಂದು ತನಿಖಾ ಪ್ರಾಧಿಕಾರದಿಂದ ಅವುಗಳನ್ನು ನಿರ್ವಹಿಸಬೇಕು” ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

ಉತ್ತರ ಪ್ರದೇಶದಲ್ಲಿ ತನ್ನ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳನ್ನು ರದ್ದುಗೊಳಿಸಬೇಕು ಎಂದು ಜುಬೇರ್‌ ಸುಪ್ರೀಂಕೋರ್ಟ್‌ಗೆ ಕೋರಿದ್ದರು. ಆದರೆ ಸುಪ್ರೀಂಕೋರ್ಟ್‌ ಎಫ್‌ಐಆರ್‌ಗಳನ್ನು ರದ್ದುಗೊಳಿಸದೆ, ಎಲ್ಲಾ ಪ್ರಕರಣಗಳ ವಿರುದ್ಧ ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸಬಹುದು ಎಂದು ಹೇಳಿದೆ.

ಉತ್ತರ ಪ್ರದೇಶದಲ್ಲಿ ದಾಖಲಾದ 6 ಎಫ್‌ಐಆರ್‌ಗಳು ಸೇರಿದಂತೆ ಅರ್ಜಿದಾರರ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸರು ತನಿಖೆಗೆ ವರ್ಗಾಯಿಸಬೇಕು ಆದೇಶಿಸಿರುವ ಸುಪ್ರೀಂಕೋರ್ಟ್‌, “ಮೊಹಮ್ಮದ್ ಜುಬೈರ್ ವಿರುದ್ಧದ ಎಫ್‌ಐಆರ್‌ಗಳ ತನಿಖೆಗಾಗಿ ಯುಪಿ ಪೊಲೀಸರು ರಚಿಸಿದ್ದ ಎಸ್‌ಐಟಿಯನ್ನು ವಿಸರ್ಜಿಸಬೇಕು” ಎಂದು ತಿಳಿಸಿದೆ.

ಇದನ್ನೂ ಓದಿ: ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

ದೆಹಲಿ ಹೈಕೋರ್ಟ್‌ನಲ್ಲಿ ಎಫ್‌ಐಆರ್‌ಗಳನ್ನು ರದ್ದುಪಡಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜಾಮೀನು ಬಾಂಡ್‌ಗಳನ್ನು ಸಲ್ಲಿಸಿದ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆಯೊಳಗೆ ಮೊಹಮ್ಮದ್ ಜುಬಿಯಾರ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಈ ನಡುವೆ ಉತ್ತರ ಪ್ರದೇಶ ಸರ್ಕಾರವು ಜುಬೇರ್‌ ಅವರು ಯಾವುದೇ ಟ್ವೀಟ್‌ಗಳನ್ನು ಪೋಸ್ಟ್‌ ಮಾಡದಂತೆ ಅವರನ್ನು ತಡೆಯುವಂತೆ ನ್ಯಾಯಾಲಯವನ್ನು ಕೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ ಇಂತಹ ಆದೇಶ ನೀಡುವುದಿಲ್ಲ ಎಂದು ಹೇಳಿದೆ.

“ಇದು ವಕೀಲರಿಗೆ ಮುಂದೆ ನೀವು ವಾದಿಸಬೇಡಿ ಎಂದು ಹೇಳುವಂತಿದೆ. ಪತ್ರಕರ್ತನಿಗೆ ಬರೆಯಬೇಡಿ ಎಂದು ನೀವು ಹೇಗೆ ಹೇಳಲು ಸಾಧ್ಯ? ಅವರು ಕಾನೂನನ್ನು ಉಲ್ಲಂಘಿಸುವ ಕೆಲಸವನ್ನು ಮಾಡಿದರೆ, ಅದಕ್ಕೆ ಅವರು ಜವಾಬ್ದಾರನಾಗಿರುತ್ತಾರೆ. ಆದರೆ ನಾಗರಿಕನ ವಿರುದ್ಧ ನಾವು ನಿರೀಕ್ಷಿತ ಕ್ರಮವನ್ನು ತೆಗೆದುಕೊಳ್ಳುವುದು ಹೇಗೆ? ಸಾರ್ವಜನಿಕವಾಗಿ ಅಥವಾ ಖಾಸಗಿಯಾಗಿ ಅವರು ಏನು ಮಾಡುತ್ತಾರೆ ಎಂಬುದಕ್ಕೆ ಪ್ರತಿಯೊಬ್ಬ ನಾಗರಿಕನು ಜವಾಬ್ದಾರನಾಗಿರುತ್ತಾನೆ. ನಾವು ಅಂತಹ ಯಾವುದೇ ಆದೇಶವನ್ನು ನೀಡುವುದಿಲ್ಲ” ಎಂದು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಉತ್ತರ ಪ್ರದೇಶ ಸರ್ಕಾರಕ್ಕೆ ಹೇಳಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು!

ಜುಬೇ‌ರ್‌ ಅವರು 2018 ರಲ್ಲಿ ಮಾಡಿದ್ದ ಟ್ವೀಟ್ ಒಂದರ ಆಧಾರ ಮೇಲೆ ದೆಹಲಿ ಪೊಲೀಸರು ಜೂನ್ 28 ರಂದು ಬಂಧಿಸಿದ್ದರು. ಉತ್ತರ ಪ್ರದೇಶದಲ್ಲಿ ಅವರ ವಿರುದ್ಧ ಇನ್ನೂ ಏಳು ಎಫ್‌ಐಆರ್‌ಗಳು ದಾಖಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...