Homeಕರ್ನಾಟಕಲಂಚಾರೋಪಿ ಮಾಡಾಳ್‌ಗೆ ಜಾಮೀನು ವಿಚಾರ: ವಕೀಲರ ಸಂಘದಿಂದ ತೀವ್ರ ಕಳವಳ ವ್ಯಕ್ತ; ಸಿಜೆಐಗೆ ಪತ್ರ

ಲಂಚಾರೋಪಿ ಮಾಡಾಳ್‌ಗೆ ಜಾಮೀನು ವಿಚಾರ: ವಕೀಲರ ಸಂಘದಿಂದ ತೀವ್ರ ಕಳವಳ ವ್ಯಕ್ತ; ಸಿಜೆಐಗೆ ಪತ್ರ

- Advertisement -
- Advertisement -

ಲಂಚ ಪ್ರಕರಣದ ಆರೋಪಿಯಾಗಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯ ವೇಗದ ಬಗ್ಗೆ ಬೆಂಗಳೂರು ವಕೀಲರ ಸಂಘ ತೀವ್ರ ಕಳವಳ ವ್ಯಕ್ತಪಡಿಸಿದೆ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಒಂದೇ ದಿನದಲ್ಲಿ ವಿಚಾರಣೆ ನಡೆಸಿ ಮಾನ್ಯ ಮಾಡಿರುವ ನ್ಯಾಯಾಂಗ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೆಂಗಳೂರು ವಕೀಲರ ಸಂಘ ಮಂಗಳವಾರ ತುರ್ತು ಸಭೆ ನಡೆಸಿತು. ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಟಿ.ಜಿ.ರವಿ ಮತ್ತು ಖಜಾಂಚಿ ಎಂ.ಟಿ.ಹರೀಶ್ ಅವರು, ”ಮಾ.7ರಂದು ನ್ಯಾ.ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ನಡೆಸಿರುವ ಪ್ರಕ್ರಿಯೆ ನ್ಯಾಯಾಂಗದ ಬಗ್ಗೆ ಶ್ರೀಸಾಮಾನ್ಯರಿಗಿರುವ ನಂಬಿಕೆಯನ್ನು ಹುಸಿ ಮಾಡಿದೆ” ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ  ಪತ್ರ ಬರೆದಿದ್ದಾರೆ.

ನಿರೀಕ್ಷಣಾ ಜಾಮೀನಿನಂತಹ ಹೊಸ ಪ್ರಕರಣಗಳು ದಾಖಲಾದರೆ, ಅವುಗಳ ವಿಚಾರಣೆಯು ಒಂದು ವಾರ ಸಮಯ ತೆಗೆದುಕೊಳ್ಳುತ್ತವೆ ಎಂಬುದು ಕರ್ನಾಟಕದ ಹೈಕೋರ್ಟ್‌ನಲ್ಲಿ ಸಾಮಾನ್ಯ ಅಭ್ಯಾಸವಾಗಿದೆ. ಆದರೆ, ದೊಡ್ಡವರ ಪ್ರಕರಣಗಳನ್ನು ಮಾತ್ರ ಒಂದೇ ದಿನದೊಳಗೆ ಮಾನ್ಯ ಮಾಡಲಾಗುತ್ತಿದೆ. ಈ ಪದ್ಧತಿಯಿಂದ ಸಾಮಾನ್ಯ ಜನರು ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಕಳೆದುಕೊಳ್ಳುತ್ತಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಆರೋಪಿತ ಶಾಸಕರನ್ನ ಸಾಮಾನ್ಯ ವ್ಯಕ್ತಿಯಾಗಿ ಪರಿಗಣಿಸುವುದು ಅತ್ಯಂತ ಮಹತ್ವದ್ದಾಗಿದೆ. ಇಲ್ಲವಾದರೆ, ಮಂಗಳವಾರ ಶಾಸಕ ವಿರೂಪಾಕ್ಷಪ್ಪ ಅವರ ಅರ್ಜಿ ವಿಚಾರಣೆಯಲ್ಲಿ ಕೈಗೊಂಡ ನಿಲುವನ್ನೇ ಶ್ರೀಸಾಮಾನ್ಯರ ವಿಷಯದಲ್ಲೂ ಅನುಸರಿಸುವಂತಾಗಬೇಕು. ಸದ್ಯ ಹೈಕೋರ್ಟ್‍ನಲ್ಲಿ ವಿಚಾರಣೆಗೆ ಬಾಕಿ ಇರುವ ಎಲ್ಲ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಒಂದೇ ದಿನದಲ್ಲಿ ನ್ಯಾಯಪೀಠದ ಎದುರು ವಿಚಾರಣೆಗೆ ನಿಗದಿಯಾಗುವಂತೆ ಮಾಡಲು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ರಿಜಿಸ್ಟ್ರಾರ್ ಕಚೇರಿಗೆ ನಿರ್ದೇಶಿಸುವಂತಾಗಬೇಕು ಎಂದು ಸಂಘವು ಮನವಿ ಮಾಡಿದೆ.

ನ್ಯಾಯಾಲಯವು ಎಲ್ಲರಿಗೂ ಸಮಾನವಾಗಿರಬೇಕು ಮತ್ತು ಯಾವುದೇ ವಿಐಪಿ ಕೂಡ ನ್ಯಾಯಾಲಯದ ಎದುರು ಸಾಮಾನ್ಯರಂತೆ ಕಾಯಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ. ಮಾಡಾಳ್ ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಒಂದೇ ದಿನದಲ್ಲಿ ವಿಚಾರಣೆ ನಡೆಸಿ ಮಾನ್ಯ ಮಾಡಿರುವ ನ್ಯಾಯಾಂಗ ಪ್ರಕ್ರಿಯೆ ಬಗ್ಗೆ ಬೆಂಗಳೂರು ವಕೀಲರ ಸಂಘ ಕಳವಳ ವ್ಯಕ್ತಪಡಿಸಿದೆ.

ವಿಶೇಷ ಎಂದರೆ ವಕೀಲರ ಸಂಘದ ಅಧ್ಯಕ್ಷರಾಗಿರುವ ವಿವೇಕ್ ಸುಬ್ಬಾರೆಡ್ಡಿ ಬಿಜೆಪಿಯ ಸದಸ್ಯರಾಗಿದ್ದಾರೆ. ಆರೋಪಿ ಕೂಡ ಬಿಜೆಪಿ ಪಕ್ಷದ ಶಾಸಕರಾಗಿದ್ದಾರೆ. ಬಿಜೆಪಿಯಲ್ಲಿನ ಎರಡು ಬಣಗಳ ಕದನ ಜೋರಾಗಿದೆ ಎನ್ನುವ ಸುದ್ದಿ ರಾಜಕೀಯವಲಯದಿಂದ ಕೇಳಿಬರುತ್ತಿದೆ.

ಇದನ್ನೂ ಓದಿ: ಬಿಜೆಪಿ ಶಾಸಕನ ಪುತ್ರನ ಲಂಚದ ಬೇಡಿಕೆಯನ್ನು ಸೆರೆ ಹಿಡಿದ ಸ್ಮಾರ್ಟ್‌ ವಾಚ್: ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದು ಹೀಗೆ..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Legal Luminaries should always remain impartial irrespective of caste, creed & status to protect the real fabric of Indian Constitution . The Advocates Association Bangalore (AAB) has reacted timely . Every right thinking person should try to keep the most important pillar of our Constitution on track to keep the Democracy intact. It’s now the turn of Legal Luminaries to raise their voices so as to keep the Indian Judiciary Independent without any fear or favour . Hope every legal fraternity would support the view taken by the AAB to nail down any sort of discrimination in the eye of Law & Justice 🙏🏼

LEAVE A REPLY

Please enter your comment!
Please enter your name here

- Advertisment -

Must Read

ಹುಬ್ಬಳ್ಳಿ : ಕೈ ಕೈ ಮಿಲಾಯಿಸಿಕೊಂಡ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು

0
ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯ ಖಾಸಗಿ ಹೋಟೆಲ್ ಮುಂಭಾಗ ಇಂದು (ಏ.30) ಮಧ್ಯಾಹ್ನ ನಡೆದಿದೆ. ಜೆಡಿಎಸ್‌ ಪಕ್ಷ ಖಾಸಗಿ ಹೋಟೆಲ್‌ನಲ್ಲಿ ಉತ್ತರ ಕರ್ನಾಟಕದ 14...