Homeಕರ್ನಾಟಕಜಾಮೀನಿನ ಮೇಲೆ ಬಿಡುಗಡೆಯಾದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ

ಜಾಮೀನಿನ ಮೇಲೆ ಬಿಡುಗಡೆಯಾದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ

- Advertisement -
- Advertisement -

ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ಅವರು ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಈ ವೇಳೆ ಅವರ ತಲೆಗೆ ಮೊಟ್ಟೆ ಎಸೆದ ಘಟನೆ ಬುಧವಾರ ನಡೆದಿದೆ. ಘಟನೆ ಈಗ ನಾಟಕೀಯ ತಿರುವು ಪಡೆದುಕೊಂಡಿದೆ.

ಲಗ್ಗೆರೆಯ ಲಕ್ಷ್ಮೀದೇವಿ ನಗರದಲ್ಲಿ ನಡೆದ ಮಾಜಿ ಪ್ರಧಾನಿ ವಾಜಪೇಯಿ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ತಮ್ಮ ಕಾರಿನ ಕಡೆಗೆ ತೆರಳುತ್ತಿದ್ದಾಗ ಬೆಳಗ್ಗೆ 11.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲವಾದರೂ, ನಂದಿನಿ ಲೇಔಟ್ ಪೊಲೀಸರು ದಾಳಿಗೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಬಂಧಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಉಪ ಪೊಲೀಸ್ ಆಯುಕ್ತ (ಉತ್ತರ) ಸೈದುಲು ಅದಾವತ್ ಮಾತನಾಡಿ, ಶಾಸಕರು ತಮ್ಮ ಕಚೇರಿಯಿಂದ ಸುಮಾರು 50 ಮೀಟರ್ ದೂರದಲ್ಲಿದ್ದ ತಮ್ಮ ಕಾರಿನ ಬಳಿಗೆ ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬರು ಮೊಟ್ಟೆಯನ್ನು ಎಸೆದಿದ್ದಾರೆ. ಈ ಘಟನೆಯನ್ನು ಕನ್ನಡ ಟಿವಿ ಪತ್ರಕರ್ತರು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಘಟನೆ ಬಳಿಕ ಮುನಿರತ್ನ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಂಗಳೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದ ನಂತರ ಮುನಿರತ್ನ ಅವರ ಮೊದಲ ಪ್ರಮುಖ ಸಾರ್ವಜನಿಕ ಕಾರ್ಯಕ್ರಮ ಇದಾಗಿತ್ತು. ವಿಕಾಸ ಸೌಧದ ತನ್ನ ಕಚೇರಿ ಮತ್ತು ಇತರ ಸ್ಥಳಗಳಲ್ಲಿ ಮಹಿಳೆಯೊಬ್ಬರ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದಲ್ಲಿ ಅವರನ್ನು ಮೊದಲಿಗೆ ಬಂಧಿಸಲಾಗಿತ್ತು. ಅದರ ನಂತರ ಮಾಜಿ ಬಿಬಿಎಂಪಿ ಕಾರ್ಪೊರೇಟರ್ ವಿರುದ್ಧ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಬಂಧಿಸಲಾಯಿತು.

ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಎಸ್‌ಐಟಿ ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದೆ.

ನನ್ನನ್ನು ಕೊಲ್ಲಲು ಹೊರಟಿದ್ದಾರೆ: ಮುನಿರತ್ನ

ಘಟನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಅವರನ್ನು (2024 ರ ಲೋಕಸಭೆ ಚುನಾವಣೆಯಲ್ಲಿ) ಸೋಲಿಸಿದ ಕಾರಣ ತನ್ನನ್ನು ಕೊಲ್ಲಲು “ಯೋಜನೆ ರೂಪಿಸಲಾಗಿದೆ” ಎಂದು ಆರೋಪಿಸಿದ್ದಾರೆ.

“ನನ್ನನ್ನು ಕೊಲ್ಲುವುದು ಖಚಿತ. ಮಹಿಳೆಯೊಬ್ಬರ ಕಾರಣದಿಂದ ನಾನು ಕೊಲ್ಲಲ್ಪಡುತ್ತೇನೆ. ಆ ಮಹಿಳೆ ಬೇರೆ ಯಾರೂ ಅಲ್ಲ, ದಿವಂಗತ ಐಎಎಸ್ ಅಧಿಕಾರಿ ಡಿ ಕೆ ರವಿ ಅವರ ಪತ್ನಿ ಕುಸುಮಾ (ಹನುಮಂತರಾಯಪ್ಪ)” ಎಂದು ಮುನಿರತ್ನ ಹೇಳಿದ್ದಾರೆ. 2023 ರ ಆರ್‌ಆರ್ ನಗರ ವಿಧಾನಸಭಾ ಚುನಾವಣೆಯಲ್ಲಿ ಕುಸುಮಾ ಅವರು ತಮ್ಮ ವಿರುದ್ಧ ಸೋತಿದ್ದರಿಂದ “ರಾಜಕೀಯ ದ್ವೇಷ”ದಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಮಹತ್ವದ ತಿರುವು : ಪೊಲೀಸ್ ಇನ್‌ಸ್ಪೆಕ್ಟರ್ ಬಂಧನ

ಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಮಹತ್ವದ ತಿರುವು : ಪೊಲೀಸ್ ಇನ್‌ಸ್ಪೆಕ್ಟರ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...