Homeಮುಖಪುಟಆಶ್ರಮ್‌-3 ಚಿತ್ರೀಕರಣದ ವೇಳೆ ಬಜರಂಗದಳ ದಾಳಿ: ಮಧ್ಯಪ್ರದೇಶ ಗೃಹಸಚಿವ ಸಮರ್ಥನೆ

ಆಶ್ರಮ್‌-3 ಚಿತ್ರೀಕರಣದ ವೇಳೆ ಬಜರಂಗದಳ ದಾಳಿ: ಮಧ್ಯಪ್ರದೇಶ ಗೃಹಸಚಿವ ಸಮರ್ಥನೆ

‘ಆಶ್ರಮ್‌’ ವೆಬ್‌ ಸೀರೀಸ್‌ ಚಿತ್ರೀಕರಣದ ಮೇಲೆ ಆದ ದಾಳಿಯನ್ನು ಪ್ರೊಡ್ಯೂಸರ್ಸ್ ಗಿಲ್ಡ್‌ ಆಫ್‌ ಇಂಡಿಯಾ ಮತ್ತು ವೆಸ್ಟ್‌ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್‌ ಫೆಡರೇಷನ್‌ ಖಂಡಿಸಿವೆ.

- Advertisement -
- Advertisement -

ಭೋಪಾಲ್‌: ಪ್ರಕಾಶ್‌ ಝಾ ನಿರ್ದೇಶನದ ‘ಆಶ್ರಮ್‌-3’ ವೆಬ್‌ ಸೀರೀಸ್‌ ಚಿತ್ರೀಕರಣ ವೇಳೆ ಬಜರಂಗದಳದ ದುಷ್ಕರ್ಮಿಗಳು ದಾಳಿ ಮಾಡಿದ್ದನ್ನು ಮಧ್ಯಪ್ರದೇಶದ ಗೃಹಸಚಿವರು ಸಮರ್ಥಿಸಿದ್ದಾರೆ.

ಮಧ್ಯಪ್ರದೇಶದ ಗೃಹಸಚಿವ ನರೋತ್ತಮ್‌ ಮಿಶ್ರಾ ಅವರು, ಪ್ರಕಾಶ್‌ ಝಾ ಅವರ ನಿರ್ದೇಶನದ ‘ಆಶ್ರಮ್‌’ ವೆಬ್‌ ಸೀರೀಸ್‌ ಅನ್ನು ವಿರೋಧಿಸಿದ್ದು, ಬಲಪಂಥೀಯ ಗುಂಪುಗಳ ಆಗ್ರಹವನ್ನು ಒಪ್ಪಿ ವೆಬ್‌ ಸಿರೀಸ್‌ನ ಹೆಸರನ್ನು ಬದಲಾಯಿಸಬೇಕು ಎಂದು ಹೇಳಿದ್ದಾರೆ.

ಭೋಪಾಲ್‌ನಲ್ಲಿ ವೆಬ್ ಸರಣಿಯೊಂದರ ಚಿತ್ರೀಕರಣ ನಡೆಸುತ್ತಿದ್ದ ನಿರ್ದೇಶಕ, ನಿರ್ಮಾಪಕ ಪ್ರಕಾಶ್ ಝಾ ಅವರ ಮೇಲೆ ಬಿಜೆಪಿ ಬೆಂಬಲಿತ ಗುಂಪಾದ ಬಜರಂಗ ದಳದ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಅವರ ಮುಖಕ್ಕೆ ಮಸಿ ಬಳಿದಿರುವ ಘಟನೆ ಭಾನುವಾರ ನಡೆದಿದೆ. ಆದರೆ ಈ ಅಮಾನವೀಯ ಘಟನೆಯನ್ನು ರಾಜ್ಯದ ಗೃಹಸಚಿವರೇ ಸಮರ್ಥಿಸಿಕೊಂಡಿದ್ದಾರೆ. “ಈ ರೀತಿಯ ಟೆಲಿವಿಷನ್‌ ಕಟೆಂಟ್‌ಗಳು ಬಹುಸಂಖ್ಯಾತರನ್ನು ಗುರಿಯಾಗಿಸಿಕೊಂಡಿವೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ವಿವಾದವನ್ನು ಹುಟ್ಟುಹಾಕಿರುವ ಕರ್ವಾ ಚೌತ್ ಆಚರಿಸುವ ಸಲಿಂಗ ದಂಪತಿಗಳ ಕುರಿತ ಡಾಬರ್‌ ಸಂಸ್ಥೆಯ ಜಾಹೀರಾತಿನ ವಿರುದ್ಧವೂ ರಾಜ್ಯ ಸರ್ಕಾರ ಕ್ರಮ ಜರುಗಿಸಲಿದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

“ನಾನು ಇದನ್ನು ಬೆಂಬಲಿಸುವೆ. ಅವರು ವೆಬ್‌ ಸಿರೀಸ್‌ಗೆ ಆಶ್ರಮ್‌ ಎಂದು ಹೆಸರು ಏಕೆ ಇಟ್ಟಿದ್ದಾರೆ. ಇತರರಿಗೆ (ಇತರ ಧರ್ಮದವರಿಗೆ) ಸಂಬಂಧಿಸಿದ ಹೆಸರು ಇದ್ದಾಗಿದ್ದರೆ ಅವರು (ಪರಿಣಾಮವನ್ನು) ಅರ್ಥ ಮಾಡಿಕೊಳ್ಳುತ್ತಿದ್ದರು. ನಾಲ್ಕು ಜನರನ್ನು ಬಂಧಿಸಲಾಗಿದೆ. ಮುಂದಿನ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು. ಆದರೆ ಪ್ರಕಾಶ್ ಝಾ ಸಾಹೇಬರು ತಮ್ಮ ತಪ್ಪಿನ ಕುರಿತೂ ಯೋಚಿಸಬೇಕು” ಎಂದು ಮಿಶ್ರಾ ಪ್ರತಿಕ್ರಿಯಿಸಿದ್ದಾರೆ.

“ವೆಬ್‌ ಸರಣಿಯ ಹೆಸರಲ್ಲಿ ದೀರ್ಘಕಾಲಿಕವಾದ ದಾಳಿಯನ್ನು ಹಿಂದುತ್ವದ ಮೇಲೆ ನಡೆಸಲಾಗಿದೆ. ಬಹುಸಂಖ್ಯಾತ ಸಮಾಜದ ಭಾವನೆಗಳನ್ನು ಪರಿಗಣಿಸಿ ಆಶ್ರಮ್‌ ಎಂಬ ಹೆಸರನ್ನು ಪ್ರಕಾಶ್ ಝಾ ಬದಲಾಯಿಸಬೇಕು” ಎಂದಿದ್ದಾರೆ.

ಮಧ್ಯಪ್ರದೇಶದ ಗೃಹಸಚಿವ ನರೋತ್ತಮ್ ಮಿಶ್ರಾ

“ವಿವಾದ ಹಿನ್ನೆಲೆಯಲ್ಲಿ ಆಶ್ರಮ್‌-3 ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಶಾಶ್ವತ ಮಾರ್ಗಸೂಚಿಯನ್ನು ನೀಡಲು ಮುಂದಾಗಿದ್ದೇವೆ. ಯಾವುದೇ ಧರ್ಮದ ಭಾವನೆಗೆ ಧಕ್ಕೆ ತರುವ ವಿಚಾರಗಳ ಚಿತ್ರೀಕರಣಕ್ಕೆ ಹೋಗುವ ಮುನ್ನ ಆಡಳಿತ ವ್ಯವಸ್ಥೆಯಿಂದ ಅನುಮತಿಯನ್ನು ಪಡೆದು ಅವರು ಮುಂದುವರಿಯಬೇಕಾಗುತ್ತದೆ” ಎಂದಿರುವ ಸಚಿವರು, ಅಭಿವ್ಯಕ್ತಿ ಸ್ವತಂತ್ರವನ್ನು ಮೊಟುಕು ಮಾಡಲು ಹೊರಟಿದ್ದಾರೆ.

“ಹಿಂದೂ ಧರ್ಮದ ಮೇಲಷ್ಟೇ ಏಕೆ ಜಾಹೀರಾತುಗಳು, ಸಿನಿಮಾಗಳು ಮೂಡಿಬರುತ್ತವೆ” ಎಂದು ಕೇಳಿರುವ ನರೋತ್ತಮ್‌ ಮಿಶ್ರಾ, “ಈ ರೀತಿಯ ನಡೆಯನ್ನು ನಾವು ಕಟುವಾಗಿ ವಿರೋಧಿಸುತ್ತೇವೆ. ನಿಮಗೆ ಧೈರ್ಯವಿದ್ದರೆ ಇತರ ಧರ್ಮದವರ ಕುರಿತೂ ಚಿತ್ರೀಕರಿಸಿ” ಎಂದು ಪ್ರಚೋದನಕಾರಿಯಾಗಿ ಪ್ರತಿಕ್ರಿಯಿಸಿದ್ದಾರೆ.

ಭೋಪಾಲ್‌ನಲ್ಲಿ ವೆಬ್ ಸರಣಿಯೊಂದರ ಚಿತ್ರೀಕರಣ ನಡೆಸುತ್ತಿದ್ದ ಚಲನಚಿತ್ರ ನಿರ್ಮಾಪಕ ಪ್ರಕಾಶ್ ಝಾ ಅವರ ಮೇಲೆ ಬಿಜೆಪಿ ಬೆಂಬಲಿತ ಗುಂಪಾದ ಬಜರಂಗ ದಳದ ದುಷ್ಕರ್ಮಿಗಳು ಭಾನುವಾರ ದಾಳಿ ನಡೆಸಿದ್ದರು. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ವಿಡಿಯೊದಲ್ಲಿ, ಚಿತ್ರೀಕರಣದ ಸೆಟ್‌ನಲ್ಲಿನ ಸಿಬ್ಬಂದಿಯನ್ನು ಬೆನ್ನಟ್ಟುತ್ತಿರುವುದನ್ನು ಕಾಣಬಹುದಾದಾಗಿತ್ತು. ಸಿಬ್ಬಂದಿಯೊಬ್ಬರನ್ನು ಹಿಡಿದು ಅವರ ಮೇಲೆ ದುಷ್ಕರ್ಮಿಗಳು ಮೆಟಲ್‌ ಲೈಟ್‌ ಸ್ಟ್ಯಾಂಡ್‌ನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದು ವಿಡಿಯೊದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ಬಾಬಿ ಡಿಯೋಲ್ ನಟಿಸಿದ ಪ್ರಕಾಶ್ ಝಾ ಅವರ ವೆಬ್ ಸರಣಿ ‘ಆಶ್ರಮ್‌’ ಹಿಂದೂ ಧರ್ಮದ ಮೇಲಿನ ಆಕ್ರಮಣವಾಗಿದ್ದು, ಶೀರ್ಷಿಕೆಯನ್ನು ಬದಲಾಯಿಸುವವರೆಗೂ ಅದರ ಚಿತ್ರೀಕರಣವನ್ನು ಮಾಡಲು ಬಿಡುವುದಿಲ್ಲ ಎಂದು ಬಜರಂಗ ದಳದ ಕಾರ್ಯಕರ್ತರು ಹೇಳಿದ್ದರು.

ಭಾನುವಾರ ಸಂಜೆ ಅರೆರಾ ಹಿಲ್ಸ್‌ನಲ್ಲಿನ ಓಲ್ಡ್ ಜೈಲ್ ಆವರಣದಲ್ಲಿರುವ ಸೆಟ್‌ನ ಮೇಲೆ ದಾಳಿ ಮಾಡಿರುವ ಬಜರಂಗ ದಳದ ಸದಸ್ಯರು “ಪ್ರಕಾಶ್ ಝಾ ಮುರ್ದಾಬಾದ್”, “ಬಾಬಿ ಡಿಯೋಲ್ ಮುರ್ದಾಬಾದ್” ಮತ್ತು “ಜೈ ಶ್ರೀ ರಾಮ್” ಎಂದು ಘೋಷಣೆಗಳನ್ನು ಕೂಗಿದ್ದರು.

“ಅವರು ಆಶ್ರಮ 1, ಆಶ್ರಮ 2 ಅನ್ನು ಮಾಡಿದ್ದಾರೆ. ಇಲ್ಲಿ ಆಶ್ರಮ 3ರ ಚಿತ್ರೀಕರಣ ಮಾಡುತ್ತಿದ್ದರು. ಗುರುಗಳು ಮಹಿಳೆಯರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಪ್ರಕಾಶ್ ಜಾ ಅದರಲ್ಲಿ ತೋರಿಸಿದ್ದಾರೆ. ಚರ್ಚ್ ಅಥವಾ ಮದ್ರಸದ ಬಗ್ಗೆ ಅಂತಹ ಚಲನಚಿತ್ರವನ್ನು ಮಾಡಲು ಅವರಿಗೆ ಧೈರ್ಯವಿದೆಯೇ?” ಎಂದು ಭಜರಂಗದಳದ ನಾಯಕ ಸುಶೀಲ್ ಸುರ್ಹೆಲೆ ಕೇಳಿದ್ದಾರೆ.

“ಭಜರಂಗದಳದ ಮೂಲಕ ಅವರಿಗೆ ಸವಾಲು ಹಾಕುತ್ತಿದ್ದೇವೆ. ಈಗ ಪ್ರಕಾಶ್ ಝಾ ಅವರ ಮುಖಕ್ಕೆ ಮಾತ್ರ ಮಸಿ ಬಳಿದಿದ್ದೇವೆ. ನಾವು ಬಾಬಿ ಡಿಯೋಲ್‌ ಅವರನ್ನು ಕೂಡಾ ಹುಡುಕುತ್ತಿದ್ದೇವೆ. ಅವರು ತನ್ನ ಸಹೋದರ ಸನ್ನಿ ಡಿಯೋಲ್‌ ಮೂಲಕ ಆದರೂ ಕಲಿಯಬೇಕು. ಅವರು ಎಂತಹ ದೇಶಭಕ್ತಿಯ ಚಲನಚಿತ್ರಗಳನ್ನು ಮಾಡಿದ್ದಾರೆ” ಎಂದು ಬೆದರಿಕೆ ಹಾಕಿದ್ದರು.

ಪ್ರಕಾಶ್ ಝಾ ತಂಡದಿಂದ ಯಾರೊಬ್ಬರೂ ಆರೋಪಗಳನ್ನು ಮಾಡದಿದ್ದರೂ, ಸಂಬಂಧಪಟ್ಟವರನ್ನು ಗುರುತಿಸಿ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

“ಚಿತ್ರೀಕರಣದ ಸೆಟ್‌ ಮೇಲೆ ದಾಳಿ ಮಾಡಿ ಅಲ್ಲಿನ ಆಸ್ತಿಗಳನ್ನು ಧ್ವಂಸ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಮತ್ತು ಅವರನ್ನು ಬಂಧಿಸಲಾಗುವುದು. ಸಾಮಾಜಿಕ ವಿರೋಧಿಗಳು ವಾಹನಗಳನ್ನು ಕೊಂಡೋಯ್ದು ತೊಂದರೆ ಮಾಡಿದ್ದಾರೆ. ಚಿತ್ರ ನಿರ್ಮಾಣಕ್ಕೆ ಭದ್ರತೆ ನೀಡಲಾಗುವುದು ಮತ್ತು ಈ ರೀತಿಯ ಘಟನೆ ಮತ್ತೆ ಸಂಭವಿಸದಂತೆ ನೋಡಿಕೊಳ್ಳಲಾಗುವುದು” ಎಂದು ಹಿರಿಯ ಪೊಲೀಸ್ ಅಧಿಕಾರಿ ಇರ್ಷಾದ್ ವಾಲಿ ಹೇಳಿದ್ದಾರೆ.

ಇದನ್ನೂ ಓದಿರಿ: ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ತಮ್ಮ ‘ಗುರು’ ಬಾಲಚಂದರ್‌ಗೆ ಅರ್ಪಿಸಿದ ಸೂಪರ್‌ಸ್ಟಾರ್‌

2017ರಲ್ಲಿ, ಮತ್ತೊಂದು ಬಲಪಂಥೀಯ ಗುಂಪಾದ ಕರ್ಣಿ ಸೇನೆಯು ದೀಪಿಕಾ ಪಡುಕೋಣೆ ಅಭಿನಯದ ‘ಪದ್ಮಾವತ್’ ಚಿತ್ರದ ಸೆಟ್‌ಗಳ ಮೇಲೆ ದಾಳಿ ಮಾಡಿ, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಮತ್ತು ಇತರ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿತ್ತು. ಜೊತೆಗೆ ಚಿತ್ರದ ದೃಶ್ಯಗಳನ್ನು ಮಾರ್ಪಡಿಸಲು ಮತ್ತು ಅದರ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು.

 ನಿರ್ಮಾಪಕರ ಖಂಡನೆ

‘ಆಶ್ರಮ್‌’ ವೆಬ್‌ ಸೀರೀಸ್‌ ಚಿತ್ರೀಕರಣದ ಮೇಲೆ ಆದ ದಾಳಿಯನ್ನು ಪ್ರೊಡ್ಯೂಸರ್ಸ್ ಗಿಲ್ಡ್‌ ಆಫ್‌ ಇಂಡಿಯಾ ಮತ್ತು ವೆಸ್ಟ್‌ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್‌ ಫೆಡರೇಷನ್‌ (ಎಫ್‌ಡಬ್ಲ್ಯೂಐಸಿಇ) ಖಂಡಿಸಿವೆ. ಈ ದುಷ್ಕೃತ್ಯವನ್ನು ನಡೆಸಲು ಕಾರಣವಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ನಿರ್ಮಾಪಕರ  ಸಂಘವು ಆತಂಕ ವ್ಯಕ್ತಪಡಿಸಿದ್ದು, ಚಿತ್ರರಂಗದ ಸಿಬ್ಬಂದಿ ಎದುರಿಸುತ್ತಿರುವ ಹಿಂಸಾಚಾರ, ಕಿರುಕುಳ ಮತ್ತು ವಿಧ್ವಂಸಕ ಕೃತ್ಯಗಳನ್ನು ಬಲವಾಗಿ ಖಂಡಿಸಿದೆ.

“ಒಂದು ಚಿತ್ರೀಕರಣ ಸ್ಥಳೀಯ ಆರ್ಥಿಕತೆಗಳಿಗೆ ಗಮನಾರ್ಹ ಕೊಡುಗೆ ನೀಡುತ್ತದೆ. ಉದ್ಯೋಗವನ್ನು ಸೃಷ್ಟಿಸುತ್ತದೆ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ. ಅದಕ್ಕಾಗಿಯೇ ಭಾರತದಲ್ಲಿ ಮತ್ತು ಪ್ರಪಂಚದಾದ್ಯಂತದ ಅಧಿಕರಿ ವರ್ಗವು ನಿರ್ಮಾಪಕರನ್ನು ತಮ್ಮ ಪ್ರದೇಶಗಳಿಗೆ ಆಕರ್ಷಿಸಲು ನೀತಿಗಳನ್ನು ರೂಪಿಸುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

“ಈ ಹಿಂಸಾತ್ಮಕ ಕೃತ್ಯಗಳನ್ನು ಎಸಗಿದವರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ಅವರನ್ನು ಬಂಧಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸುತ್ತೇವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿರಿ: 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....