Homeಮುಖಪುಟಭಜರಂಗದಳ ಬ್ಯಾನ್ ಪ್ರಸ್ತಾಪ; ಖರ್ಗೆ ವಿರುದ್ಧ 100 ಕೋಟಿ ರೂ. ಮಾನಹಾನಿ ಮೊಕದ್ದಮೆ

ಭಜರಂಗದಳ ಬ್ಯಾನ್ ಪ್ರಸ್ತಾಪ; ಖರ್ಗೆ ವಿರುದ್ಧ 100 ಕೋಟಿ ರೂ. ಮಾನಹಾನಿ ಮೊಕದ್ದಮೆ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಪಂಜಾಬ್‌ನ ಸಂಗ್ರೂರ್‌ನ ಸ್ಥಳೀಯ ನ್ಯಾಯಾಲಯದಲ್ಲಿ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಕಾಂಗ್ರೆಸ್ ಪಕ್ಷವು ಕರ್ನಾಟಕ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ಪ್ರಸ್ತಾಪಿಸಿದ್ದಕ್ಕಾಗಿ ಈ ಪ್ರಕರಣ ದಾಖಲಿಸಲಾಗಿದೆ.

‘ಹಿಂದೂ ಸುರಕ್ಷಾ ಪರಿಷತ್’ ಹೆಸರಿನ ಬಜರಂಗದಳ ಘಟಕದ ರಾಷ್ಟ್ರೀಯ ಅಧ್ಯಕ್ಷ ಹಿತೇಶ್ ಭಾರದ್ವಾಜ್ ಅವರು ದೂರು ನೀಡಿದ್ದಾರೆ. “ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ [ಪಿಎಫ್‌ಐ] ಥರದ ಕಾನೂನುಬಾಹಿರ ಭಯೋತ್ಪಾದಕ ಸಂಘಟನೆಗಳಿಗೆ ಹೋಲಿಸುವ ಮೂಲಕ ಖರ್ಗೆ ಅವರು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಭಜರಂಗದಳದ ವಿರುದ್ಧ ಮಾನಹಾನಿಕರ ಅಭಿಪ್ರಾಯಗಳನ್ನು ತಾಳಿಸಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿತು. ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವುದಾಗಿ ಆರೋಪ ಹೊರಿಸಲಾಯಿತು.

ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯ ‘ಕಾನೂನು ಮತ್ತು ನ್ಯಾಯ’ ವಿಭಾಗದಲ್ಲಿ ಬಜರಂಗದಳದ ಹೆಸರನ್ನು ಉಲ್ಲೇಖಿಸಿತ್ತು. ಜಾತಿ ಅಥವಾ ಧರ್ಮದ ಆಧಾರದ ಮೇಲೆ ಸಮುದಾಯಗಳ ನಡುವೆ ದ್ವೇಷವನ್ನು ಹರಡುವ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿತ್ತು.

“ಕಾನೂನು ಮತ್ತು ಸಂವಿಧಾನವನ್ನು ಉಲ್ಲಂಘಿಸುವ, ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಮುದಾಯಗಳ ನಡುವೆ ದ್ವೇಷ ಹರಡುವ ಬಜರಂಗದಳ, ಪಿಎಫ್‌ಐದಂತಹ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿತ್ತು.

ಭಜರಂಗದಳದ ಸದಸ್ಯರನ್ನು ಪಿಎಫ್‌ಐ ಜೊತೆಗೆ ಹೋಲಿಕೆ ಮಾಡಿದ್ದರಿಂದ ಖರ್ಗೆ ಅವರು ಪರಿಹಾರವನ್ನು ನೀಡಬೇಕು ಎಂದು ದೂರುದಾರರ ಪರ ವಕೀಲರು ತಿಳಿಸಿದ್ದಾರೆ.

“ಭಜರಂಗ ದಳವನ್ನು ಪಿಎಫ್‌ಐ ಜೊತೆಗೆ ಹೋಲಿಸಿರುವುದರಿಂದ ಕೋಟಿಗಟ್ಟಲೆ ಸಂಖ್ಯೆಯಲ್ಲಿರುವ ಭಜರಂಗದಳ, ಹಿಂದೂ ಸುರಕ್ಷಾ ಪರಿಷತ್ ಸದಸ್ಯರ ಹೆಸರು ಮತ್ತು ಗೌರವಕ್ಕೆ ಧಕ್ಕೆಯುಂಟಾಗಿದೆ. ಭಗವಾನ್ ಹನುಮಂತನ ಅನುಯಾಯಿಗಳನ್ನು ನಿಂದಿಸಲಾಗಿದೆ” ಎಂದು ದೂರುದಾರರು ವಾದಿಸಿದ್ದಾರೆ.

ಬಜರಂಗದಳದ ಹಿಂಸಾ ಕೃತ್ಯಗಳು; ಕಿರು ಪಟ್ಟಿ

‘ಬಜರಂಗದಳ’ ಬ್ಯಾನ್ ಚರ್ಚೆಯ ಹಿನ್ನೆಲೆಯಲ್ಲಿ ‘ನ್ಯಾಯಪಥ’ ವಾರ ಪತ್ರಿಕೆಯು ಇತ್ತೀಚೆಗೆ ವಿಸ್ತೃತ ವರದಿಯನ್ನು ಪ್ರಕಟಿಸಿದೆ. ಬಜರಂಗದಳದಿಂದ ನಡೆದಿರುವ ಹಿಂಸಾ ಕೃತ್ಯಗಳ ಕಿರುಪಟ್ಟಿಯನ್ನು ವರದಿಯಲ್ಲಿ ಉಲ್ಲೇಖಿಸಿದೆ.

ಬಲವಂತದ ಮತಾಂತರದ ಆರೋಪದಲ್ಲಿ ಚರ್ಚ್‌ಗಳ ಮೇಲೆ ದಾಳಿ, ಹಿಂದೂ-ಮುಸ್ಲಿಂ ಸ್ನೇಹಿತರು ಮಾತನಾಡಿದರೆ ಮಾರಲ್ ಪೊಲೀಸಿಂಗ್, ಗೋರಕ್ಷಣೆ ಹೆಸರಲ್ಲಿ ಹತ್ಯೆ- ಹೀಗೆ ಧಾರ್ಮಿಕ ಮೂಲಭೂತವಾದ ಹಿನ್ನೆಲೆಯಲ್ಲಿ ಬಜರಂಗದಳ ಹಲವು ದಾಳಿಗಳು ನಡೆಸಿರುವುದನ್ನು ’ಇಂಡಿಯಾ ಟುಡೇ’ ವರದಿಯನ್ನಾಧರಿಸಿ ದಾಖಲಿಸಲಾಗಿದೆ.

2008 ಚರ್ಚ್ ದಾಳಿ: 2008ರ ಸೆಪ್ಟೆಂಬರ್‌ನಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಚರ್ಚ್‌ಗಳು ಮತ್ತು ಕ್ರಿಶ್ಚಿಯನ್ ಸಂಸ್ಥೆಗಳ ಮೇಲೆ ಸರಣಿ ದಾಳಿಗಳು ನಡೆದವು. ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರ್ಕಾರ ತನಿಖೆಗಾಗಿ ಜಸ್ಟಿಸ್ ಬಿ.ಕೆ.ಸೋಮಶೇಖರ ಆಯೋಗವನ್ನು ರಚಿಸಿತ್ತು.

2009ರ ಸೆಪ್ಟೆಂಬರ್‌ನಲ್ಲಿ ಆಗಿನ ಸರ್ಕಾರದ ಮುಂದೆ ಮಧ್ಯಂತರ ವರದಿ ಸಲ್ಲಿಕೆಯಾಯಿತು. “ಮಂಗಳೂರು ಪ್ರದೇಶದಲ್ಲಿ ಚರ್ಚ್‌ಗಳ ಮೇಲೆ ನಡೆದ ದಾಳಿಯಲ್ಲಿ ಬಜರಂಗದಳದಂತಹ ಬಲಪಂಥೀಯ ಗುಂಪುಗಳ ಕೈವಾಡವಿದೆ” ಎಂದು ಆಯೋಗ ತಿಳಿಸಿತ್ತು.

ಏಪ್ರಿಲ್ 1, 2022: ’ಹಲಾಲ್ ಉತ್ಪನ್ನಗಳನ್ನು ಬಹಿಷ್ಕರಿಸಿ’ ಎಂಬ ಅಭಿಯಾನವನ್ನು ವಿಎಚ್‌ಪಿ ಮತ್ತು ಬಜರಂಗದಳ ಹಮ್ಮಿಕೊಂಡಿದ್ದವು. ಹಲಾಲ್ ಮಾಂಸವನ್ನು ಮಾರಾಟ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಐವರು ಬಜರಂಗದಳ ಕಾರ್ಯಕರ್ತರನ್ನು ಬಂಧಿಸಲಾಯಿತು.

ಜನವರಿ 18, 2022: ಬಜರಂಗದಳದ ಸದಸ್ಯರನ್ನು ಒಳಗೊಂಡ ಗುಂಪು ಗದಗ ಜಿಲ್ಲೆಯಲ್ಲಿ 20 ವರ್ಷದ ಮುಸ್ಲಿಂ ಯುವಕನನ್ನು ಚಾಕುವಿನಿಂದ ಇರಿದು ಕೊಂದಿತ್ತು.

ಏಪ್ರಿಲ್ 1, 2021: ತನ್ನ ಹಿಂದೂ ಸ್ನೇಹಿತೆಯೊಂದಿಗೆ ಖಾಸಗಿ ಬಸ್‌ನಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಮಂಗಳೂರಿನ ಪಂಪ್‌ವೆಲ್ ಬಳಿ ಬಜರಂಗದಳದವರು ಗುಂಪು ಹಲ್ಲೆ ನಡೆಸಿದ್ದರು. ಮಂಗಳೂರು ನಗರ ಪೊಲೀಸರು ಬಜರಂಗದಳದ ನಾಲ್ವರನ್ನು ಏಪ್ರಿಲ್ 2ರಂದು ಬಂಧಿಸಿ ಗಲಭೆ, ಕೋಮು ದ್ವೇಷ, ಹಲ್ಲೆ ಮತ್ತು ಕೊಲೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಿದ್ದರು.

ನವೆಂಬರ್ 28, 2021: ಬೇಲೂರು ಪಟ್ಟಣದಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಮಾಡುತ್ತಿದ್ದ ಕ್ರಿಶ್ಚಿಯನ್ನರಿಗೆ ಬಜರಂಗದಳದ ಕಾರ್ಯಕರ್ತರು ಅಡ್ಡಿಪಡಿಸಿದ್ದರು. ಆ ಕಾರ್ಯಕರ್ತರು “ಬಲವಂತದ ಧಾರ್ಮಿಕ ಮತಾಂತರಗಳು ನಡೆಯುತ್ತಿವೆ” ಎಂದು ಆರೋಪಿಸಿದ್ದರು. ಸ್ಥಳದಲ್ಲಿದ್ದ ಮಹಿಳೆಯರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು.

ಜೂನ್ 1, 2018: ಜಾನುವಾರು ಸಾಗಾಟ ಮಾಡುತ್ತಿದ್ದ ಹುಸೇನಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಜರಂಗದಳ ಕಾರ್ಯಕರ್ತರನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್ 19, 2013: ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ಕ್ರೈಸ್ತರ ಪ್ರಾರ್ಥನಾ ಮಂದಿರದ ಮೇಲೆ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದರು.

ಏಪ್ರಿಲ್ 5, 2023: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಬಳಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನೊಬ್ಬ ಹಿಂದೂ ಸ್ನೇಹಿತೆಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ಬಜರಂಗದಳದ ಗ್ಯಾಂಗ್ ಹಲ್ಲೆ ಮಾಡಿತ್ತು.

ಮಾರ್ಚ್ 17, 2023: ಶಿವಮೊಗ್ಗದಲ್ಲಿನ ಹೋಟೆಲ್‌ವೊಂದರಲ್ಲಿ ಮಹಿಳೆಯರು ನೈಟ್ ಔಟ್ ಪಾರ್ಟಿಗಾಗಿ ಸೇರಿದ್ದರು. ಇಂತಹ ಪಾರ್ಟಿಗಳು ನಮ್ಮ ಸಂಸ್ಕೃತಿಗೆ ವಿರುದ್ಧವಾಗಿದ್ದು, ಹೋಟೆಲ್ ಒಳಗೆ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಹೋಟೆಲ್ ಹೊರಗೆ ಬಜರಂಗದಳ ಪ್ರತಿಭಟನೆ ನಡೆಸಿತ್ತು.

ನವೆಂಬರ್ 24, 2022: ಮಂಗಳೂರಿನಲ್ಲಿ ಹಿಂದೂ ಯುವತಿಯೊಂದಿಗೆ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿತು. ಬಜರಂಗದಳದ ಸದಸ್ಯರು ದಾಳಿ ಮಾಡಿದ್ದಾರೆಂಬ ವರದಿಗಳಿದ್ದರೂ, ಅದನ್ನು ಬಜರಂಗದಳ ತಳ್ಳಿಹಾಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 28, 2021: ವಿವಿಧ ಧರ್ಮದ ಹಿನ್ನೆಲೆಯ ಸ್ನೇಹಿತರು ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದರು. ಅವರು ಮಲ್ಪೆ ಬೀಚ್‌ಗೆ ಭೇಟಿ ನೀಡಿದ್ದರು. ಆದರೆ ಸುರತ್ಕಲ್ ಟೋಲ್ ಬಳಿ ಅವರಿಗೆ ಬಜರಂಗದಳ ಸದಸ್ಯರು ಅಡ್ಡಿಪಡಿಸಿದ್ದರು.

ಅಕ್ಟೋಬರ್ 6, 2021: ಸಂತ ಅಲೋಷಿಯಸ್ ಕಾಲೇಜು ಆಡಳಿತ ಮಂಡಳಿಯು ತಮ್ಮ ವ್ಯಾಪ್ತಿಯಲ್ಲಿನ ಪಾರ್ಕ್ ಒಂದಕ್ಕೆ ಫಾದರ್ ಸ್ವಾಮಿಯವರ ಹೆಸರನ್ನು ಇಡಲು ಮುಂದಾಗಿತ್ತು. ಇದನ್ನು ವಿರೋಧಿಸಿದ ಎಬಿವಿಪಿ, ವಿಎಚ್‌ಪಿ ಮತ್ತು ಬಜರಂಗದಳದ ಮುಖ್ಯಸ್ಥರು ಕಾಲೇಜಿಗೆ ಎಚ್ಚರಿಕೆಯನ್ನು ನೀಡಿದ್ದರು. ಯಾವುದೇ ಅಹಿತಕರ ಘಟನೆ ನಡೆದರೆ ಕಾಲೇಜಿನ ಆಡಳಿತ ಮಂಡಲಿಯೇ ಕಾರಣ ಎಂದಿದ್ದರು.

ಇದನ್ನೂ ಓದಿರಿ: ಬಜರಂಗದಳ ಬ್ಯಾನ್ ಚರ್ಚೆಯ ಸುತ್ತ

ಅಕ್ಟೋಬರ್ 17, 2021: ಬಜರಂಗದಳ ಮತ್ತು ವಿಎಚ್‌ಪಿ ಕಾರ್ಯಕರ್ತರು ಹುಬ್ಬಳ್ಳಿಯ ತಾತ್ಕಾಲಿಕ ಚರ್ಚ್ ಮೇಲೆ ಅಟ್ಯಾಕ್ ಮಾಡಿದ್ದರು. ಮತಾಂತರ ನಡೆಯುತ್ತಿದೆ ಎಂದು ದೂರಿದ್ದ ಇವರು, ಭಜನೆ ಮತ್ತು ಹಿಂದೂ ಪಾರ್ಥನೆಗಳನ್ನು ಮೈಕ್‌ನಲ್ಲಿ ಹಾಕಿ ಕಲಹ ಹುಟ್ಟುಹಾಕಿದ್ದರು.

ಎಂಟು ತಿಂಗಳಲ್ಲಿ 71 ಕೋಮುದ್ವೇಷ ಪ್ರಕರಣ

ಪೀಪಲ್ಸ್ ಯೂನಿಯನ್ ಫಾರ್ ಲಿಬರ್ಟೀಸ್ ಕರ್ನಾಟಕ (ಪಿಯುಸಿಎಲ್-ಕ) ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್ (ಎಐಎಲ್‌ಎಜೆ), ಆಲ್ ಇಂಡಿಯಾ ಪೀಪಲ್ಸ್ ಫೋರಮ್ (ಎಐಪಿಎಫ್) ಮತ್ತು ಗೌರಿ ಲಂಕೇಶ್ ನ್ಯೂಸ್.ಕಾಂ (gaurilankeshnews.com) ಬಿಡುಗಡೆ ಮಾಡಿರುವ ವರದಿಯು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ’ಕೋಮುದ್ವೇಷ ಅಪರಾಧ’ಗಳ ಕುರಿತು ಆತಂಕ ವ್ಯಕ್ತಪಡಿಸಿದೆ.

ಈ ವರದಿಯು ದಕ್ಷಿಣ ಕನ್ನಡದಲ್ಲಿ ಜನವರಿ 2021ರಿಂದ ಸೆಪ್ಟೆಂಬರ್ 2021ರವರೆಗೆ ನಡೆದ ಮತೀಯ ಗೂಂಡಾಗಿರಿ ಮತ್ತು ದ್ವೇಷದ ಅಪರಾಧಿ ಘಟನೆಗಳನ್ನು ವಿಶ್ಲೇಷಿಸಿದೆ. ಎಂಟು ತಿಂಗಳಲ್ಲಿ 71 ಕೋಮುದ್ವೇಷ ಪ್ರಕರಣಗಳು ಜಿಲ್ಲೆಯಲ್ಲಿ ಘಟಿಸಿವೆ ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...