ದೇವಸ್ಥಾನದ ಕಾಣಿಕೆ ಡಬ್ಬಿ ಮತ್ತು ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ಸಂಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ಭಾನುವಾರ ರಾತ್ರಿ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಮೊಂಟೆಪದವು ನಿವಾಸಿ ತಾರಾವಾಥ್ ಮೋಹನ್ ಎಂದು ಗುರುತಿಸಲಾಗಿದೆ.
ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಂಜನಾಡಿ ದೇವಸ್ಥಾನದಿಂದ ಕಾಣಿಕೆ ಡಬ್ಬಿ ಕಳವು ಮತ್ತು ಮೊಂಟೆಪದವು ಬಳಿಯ ಮೆನೆಯೊಂದರಿಂದ ಬೈಕ್ ಕಳವು ಮಾಡಿರುವ ಬಗ್ಗೆ ಹಿಂದೆಯೆ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳಿಂದ ದೊರೆತ ಮಾಹಿತಿಯ ಆಧಾರದಲ್ಲಿ ಭಾನುವಾರ ಮಧ್ಯರಾತ್ರಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರ ಹೇಳಿಕೆಯನ್ನು ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ.
ಇದನ್ನೂ ಓದಿ: ಚುನಾವಣೆಯಿರುವ ರಾಜ್ಯಗಳಿಂದ ಆನ್‌ಲೈನ್ ಶಾಪಿಂಗ್ ಮಾಡಿದ ಮೋದಿ!
ಆರೋಪಿಯು ಮೊಂಟೆಪದವಿನ ಮನೆಯೊಂದರ ಅಂಗಳದಲ್ಲಿದ್ದ ಸ್ಕೂಟರ್ ಕಳವು ಮಾಡಿ ಪರಾರಿಯಾದ್ದನು. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದಾಗ ಆರೋಪಿಯ ಬಗ್ಗೆ ಸುಳಿವು ಸಿಕ್ಕಿತ್ತು. ಈ ಬಗ್ಗೆ ಆತನಲ್ಲಿ ಕೇಳಲು ಆತನ ಮನೆಯ ಬಳಿ ಹೋದಾಗ ಆರೋಪಿಯು ಪರಾರಿಯಾಗಲು ಯತ್ನಿಸಿದ್ದು, ಸಾರ್ವಜನಿಕರು ಬೆನ್ನಟ್ಟಿ ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ ಎಂದು ವಾತಾಭಾರತಿ ವರದಿ ಮಾಡಿದೆ. ಆರೋಪಿ ತಾರಾನಾಥ್ ಈ ಹಿಂದೆಯು ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ ಎಂದು ಪತ್ರಿಕೆ ವರದಿ ಮಾಡಿದೆ.
ಆರೋಪಿ ತಾರನಾಥ ಮೊಂಟೆಪದವು ಶಾರದಾನಗರದ ವಿಶ್ವ ಹಿಂದೂ ಪರಿಷತ್, ಬಜರಂಗದಳ ವೀರಾಂಜನೇಯ ಶಾಖೆಯ ಸಂಚಾಲಕನೂ ಆಗಿದ್ದು, ಸ್ಥಳೀಯವಾಗಿ ಸಂಘಪರಿವಾರ ಸಂಘಟನೆಯ ನೇತೃತ್ವದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Karnataka Budget-2021 | ರಾಜ್ಯದ ಸಾಲ 3 ಲಕ್ಷ ಕೋಟಿ; 2.5 ಲಕ್ಷ ಕೋಟಿ…!


