HomeUncategorizedದಿಲ್ಜಿತ್ ದೋಸಾಂಜ್ ಸಂಗೀತ ಕಚೇರಿಯಲ್ಲಿ ಮದ್ಯ ಮತ್ತು ಮಾಂಸದೂಟ: ಬಜರಂಗದಳ ಪ್ರತಿಭಟನೆ

ದಿಲ್ಜಿತ್ ದೋಸಾಂಜ್ ಸಂಗೀತ ಕಚೇರಿಯಲ್ಲಿ ಮದ್ಯ ಮತ್ತು ಮಾಂಸದೂಟ: ಬಜರಂಗದಳ ಪ್ರತಿಭಟನೆ

- Advertisement -
- Advertisement -

ಇಂದೋರ್‌: ಮಧ್ಯಪ್ರದೇಶದ ಇಂದೋರ್‌ನಲ್ಲಿ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಚೇರಿಯಲ್ಲಿ ಮದ್ಯ ಮತ್ತು ಮಾಂಸಾಹಾರದ ಮಳಿಗೆಗಳಿರುವುದನ್ನು ವಿರೋಧಿಸಿ ಬಲಪಂಥೀಯ ಗುಂಪುಗಳಾದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕಾರ್ಯಕರ್ತರು ಕಾರ್ಯಕ್ರಮ ಪ್ರಾರಂಭವಾಗುವ ಕೆಲವೇ ಗಂಟೆಗಳ ಮೊದಲು ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ವರದಿಯಾಗಿದೆ.

ಭಜರಂಗದಳ ಮತ್ತು ವಿಎಚ್‌ಪಿ ಕಾರ್ಯಕರ್ತರು ಸಂಗೀತ ಕಚೇರಿಯ ಸ್ಥಳದಲ್ಲಿ ಮದ್ಯ ಮತ್ತು ಮಾಂಸಾಹಾರಿ ಮಳಿಗೆಗಳನ್ನು ಇಡದಂತೆ ಸಂಘಟಕರಿಗೆ ಎಚ್ಚರಿಕೆ ನೀಡಿದರು. ಇಂತಹ ವ್ಯವಸ್ಥೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಗುಂಪು ಆರೋಪಿಸಿದೆ.

ಸಂಗೀತ ಕಚೇರಿ ನಡೆಯುವ ಸ್ಥಳಕ್ಕೆ ಗುಂಪೊಂದು ತಲುಪಿ ತಮ್ಮ ಆಕ್ಷೇಪಣೆಗಳನ್ನು ಎತ್ತುತ್ತಿರುವ ಘಟನೆಯ ದೃಶ್ಯಾವಳಿಗಳು ಬಿತ್ತರವಾಗುತ್ತಿವೆ. ಮದ್ಯ ಮಾರಾಟದ ಟಿಕೆಟ್ ಕೌಂಟರ್ ಮತ್ತು ಕೆಎಫ್‌ಸಿ ಮಳಿಗೆಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ.

ದೋಸಾಂಜ್  ಅವರ ಸಂಗೀತ ಕಚೇರಿಯನ್ನು ಇಂದು (ಭಾನುವಾರ) ಸಂಜೆ 7 ಗಂಟೆಗೆ ಇಂದೋರ್‌ನಲ್ಲಿ ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಆದಾಗ್ಯೂ, ಉಪ ಪೊಲೀಸ್ ಆಯುಕ್ತ (ಡಿಸಿಪಿ) ಅಮರೇಂದ್ರ ಸಿಂಗ್ ಅವರು ಕಾರ್ಯಕ್ರಮಕ್ಕೆ ಇನ್ನೂ ಅನುಮತಿ ನೀಡಿಲ್ಲ ಮತ್ತು ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುವ ಮೊದಲು ಎಲ್ಲಾ ಅಂಶಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

“ನಾವು ಸ್ಥಳವನ್ನು ಪರಿಶೀಲಿಸಿದ್ದೇವೆ. ಕೆಲವರು ಈ ಮಳಿಗೆಗಳನ್ನು ವಿರೋಧಿಸುತ್ತಿದ್ದಾರೆ. ನಾವು ಇನ್ನೂ ಎಲ್ಲಾ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ. ಎಲ್ಲವನ್ನೂ ಅರ್ಥಮಾಡಿಕೊಂಡ ನಂತರವೇ ನಾವು ಅನುಮತಿ ನೀಡುತ್ತೇವೆ. ನಾವು  ಸಂಗೀತ ಕಚೇರಿಯ ಪ್ರದರ್ಶನದ ಷರತ್ತುಗಳನ್ನು ಶೀಘ್ರದಲ್ಲೇ ನಿರ್ಧರಿಸುತ್ತೇವೆ ಎಂದು ಡಿಸಿಪಿ ಸಿಂಗ್ ಹೇಳಿದರು.

ಸ್ಥಳದಲ್ಲಿ ವಿವಾದಕ್ಕೆ ಸಂಬಂಧಿಸಿದಂತೆ ಆಡಳಿತ ಮತ್ತು ಸಂಘಟಕರ ನಡುವೆ ಮಾತುಕತೆ ನಡೆಯುತ್ತಿದೆ. ದಿಲ್ಜಿತ್ ದೋಸಾಂಜ್ ಅವರ ‘ದಿಲ್-ಲುಮಿನಾಟಿ’ ಕಾರ್ಯಕ್ರಮವು ಮದ್ಯ ಸೇವನೆಯನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿ  ಮದ್ಯ ಮಾರಾಟದ ವಿರುದ್ಧ ಕೆಲವು ಗುಂಪುಗಳಿಂದ ಆಕ್ಷೇಪಣೆಗಳಿಂದ ವಿವಾದಗಳನ್ನು ಎದುರಿಸುತ್ತಲೇ ಇದೆ.

ಇಂತಹ ವಿರೋಧದ  ಪ್ರಥಮ ಘಟನೆಯು ಹೈದರಾಬಾದ್‌ನಲ್ಲಿ ಸಂಭವಿಸಿತ್ತು. ಅಲ್ಲಿ ಗಾಯಕನಿಗೆ ಮದ್ಯ ಉಲ್ಲೇಖಿಸುವ ಹಾಡುಗಳನ್ನು ಹಾಡದಂತೆ ನೋಟಿಸ್ ನೀಡಲಾಗಿತ್ತು. ಅವರು ತಮ್ಮ ಒಂದು ಹಾಡಿನಲ್ಲಿ “ಮದ್ಯ” ಪದವನ್ನು “ಕೋಕ್” ನೊಂದಿಗೆ ಬದಲಿಸುವ ಮೂಲಕ ಪ್ರತಿಕ್ರಿಯಿಸಿದ್ದರು.

ಪುಣೆಯಲ್ಲಿ, ಮಹಾರಾಷ್ಟ್ರದ ಅಬಕಾರಿ ಇಲಾಖೆಯು ಸ್ಥಳೀಯ ನಾಯಕರ ಆಕ್ಷೇಪದ ನಂತರ ಅವರ ಸಂಗೀತ ಕಚೇರಿಯಲ್ಲಿ ಮದ್ಯ ಪೂರೈಸುವ ಅನುಮತಿಯನ್ನು ರದ್ದುಗೊಳಿಸಿತ್ತು.

ಇದೇ ರೀತಿಯ ವಿರೋಧವು ಅಹಮದಾಬಾದ್‌ನಲ್ಲಿ ಉದ್ಭವಿಸಿತ್ತು. ಅಲ್ಲಿ ದೋಸಾಂಜ್ ಅವರು ಇಂತಹ ನಿರ್ಬಂಧಗಳ ಬಗ್ಗೆ ವ್ಯಂಗ್ಯವಾಡಿದ್ದರು. “ನಾವು ಶುಷ್ಕ ರಾಷ್ಟ್ರ ಚಳವಳಿಯನ್ನು ಪ್ರಾರಂಭಿಸೋಣ” ಎಂಬ ಶೀರ್ಷಿಕೆಯೊಂದಿಗೆ ಟ್ವಿಟರ್ ನಲ್ಲಿ ಸಂಗೀತ ಕಚೇರಿಯ ತುಣುಕನ್ನು ಹಂಚಿಕೊಂಡಿದ್ದರು. “ನೀವು ಯುವಕರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ. ಮದ್ಯವನ್ನು ಸಂಪೂರ್ಣ ನಿಷೇಧವಲ್ಲದಿದ್ದರು, ಕೊನೆಪಕ್ಷ ನನ್ನ ಪ್ರದರ್ಶನದ ದಿನದಂದು ನಿಮ್ಮ ರಾಜ್ಯದಲ್ಲಿ ಮದ್ಯ ನಿಷೇಧ ಘೋಷಿಸಿ. ಆಗ ನಾನು ಯಾವುದೇ ಮದ್ಯ-ಸಂಬಂಧಿತ ಹಾಡುಗಳನ್ನು ಹಾಡುವುದನ್ನು ನಿಲ್ಲಿಸುತ್ತೇನೆ ಎಂದು ದೋಸಾಂಜ್ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ…ವಿಪಕ್ಷಗಳಿಂದ ಇವಿಎಂ ಟ್ಯಾಂಪರಿಂಗ್ ಆರೋಪ; ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಲ್ಲಿ ಭುಗಿಲೆದ್ದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...