Homeಮುಖಪುಟಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

ಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

- Advertisement -
- Advertisement -

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್‌ ಮೇಲೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 8ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಮೇ 27 ರಂದು ಪೋಸ್ಟ್ ಮಾಡಿದ ಟ್ವೀಟ್‌ನಲ್ಲಿ ಹಿಂದುತ್ವ ನಾಯಕರಾದ ಯತಿ ನರಸಿಂಗಾನಂದ, ಮಹಂತ್ ಬಜರಂಗ ಮುನಿ ಮತ್ತು ಆನಂದ್ ಸ್ವರೂಪ್ ಅವರನ್ನು ‘ಹೇಟ್‌ಮಾಂಗರ್ಸ್’ (ಒಂದು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷ ಹಬ್ಬಿಸುವ ವ್ಯಕ್ತಿಗಳು) ಎಂದು ಕರೆದಿದ್ದಕ್ಕಾಗಿ ಜೂನ್ 1 ರಂದು ಉತ್ತರ ಪ್ರದೇಶ ಪೊಲೀಸರು ಖೈರಾಬಾದ್ ಪೊಲೀಸ್ ಠಾಣೆಯಲ್ಲಿ ಜುಬೈರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಜುಬೇರ್‌ ಬಂಧನಕ್ಕೆ ಸಂಬಂಧಿಸಿದಂತೆ ಜುಲೈ 8ರಂದು ನಡೆದ ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ, ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್.ವಿ.ರಾಜು ಅವರು ಸರ್ಕಾರ ಪರವಾಗಿ ಹಾಜರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಜರಂಗ ಮುನಿಯು ಸೀತಾಪುರದಲ್ಲಿ ದೊಡ್ಡ ಸಂಖ್ಯೆಯ ಅನುಯಾಯಿಗಳನ್ನು ಹೊಂದಿರುವ ‘ಗೌರವಾನ್ವಿತ’ ಧಾರ್ಮಿಕ ನಾಯಕ” ಎಂದು ಎಎಸ್‌ಜಿ ವಾದ ಮಾಡಿದ್ದಾರೆ.

“ನೀವು ಧಾರ್ಮಿಕ ಮುಖಂಡರನ್ನು ಹೇಟ್‌ಮಾಂಗರ್‌‌ ಎಂದು ಕರೆದರೆ, ಅದು ಸಮಸ್ಯೆಗಳನ್ನು ಹುಟ್ಟುಹಾಕುತ್ತದೆ” ಎಂದಿದ್ದಾರೆ.

ಎಎಸ್‌ಜಿ ರಾಜು ಅವರು ಯಾರನ್ನು ಗೌರವಾನ್ವಿತ ವ್ಯಕ್ತಿ ಎಂದು ಕರೆದಿದ್ದಾರೋ, ಆ ವ್ಯಕ್ತಿ ಮುಸ್ಲಿಂ ಸಮುದಾಯದ ವಿರುದ್ಧ ಸರಣಿ ದ್ವೇಷ ಭಾಷಣ ಮಾಡಿರುವ ಸುದೀರ್ಘ ಇತಿಹಾಸ ಹೊಂದಿದ್ದಾರೆ. ಬಲಪಂಥೀಯ ಗುಂಪುಗಳು ನಂಬಿರುವ ಪಿತೂರಿ ಸಿದ್ಧಾಂತವಾದ ‘ಲವ್ ಜಿಹಾದ್’ಗೆ ಪ್ರತೀಕಾರವಾಗಿ ಮುಸ್ಲಿಂ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗುವುದಾಗಿ ಪದೇ ಪದೇ ಬೆದರಿಕೆ ಹಾಕಿದ ಕುಖ್ಯಾತಿಯನ್ನು ಭಜರಂಗ ಮುನಿ ಉದಾಸಿನ್ ಪಡೆದಿದ್ದಾರೆ.

ಮುಸ್ಲಿಂ ಮಹಿಳೆಯರ ಮೇಲೆ ಅತ್ಯಾಚಾರ ಎಸಗುವುದಾಗಿ ಬಜರಂಗ ಮುನಿ ಬೆದರಿಕೆ ಹಾಕಿರುವ ವೈರಲ್ ವಿಡಿಯೋವನ್ನು ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸುವಂತೆ ಎನ್‌ಸಿಡಬ್ಲ್ಯೂ ಅಧ್ಯಕ್ಷೆ ರೇಖಾ ಶರ್ಮಾ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಮತ್ತೊಂದೆಡೆ ಬೆಂಬಲಿಗರ ದೊಡ್ಡ ಗುಂಪನ್ನು ಉದ್ದೇಶಿಸಿ ಮಾತನಾಡುವಾಗ ಬಜರಂಗಮುನಿ, ಮುಸ್ಲಿಂ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯದ ಬೆದರಿಕೆ ಹಾಕುವುದು ವಿಡಿಯೊದಲ್ಲಿ ದಾಖಲಾಗಿದೆ. ಮುಸ್ಲಿಮರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಾ, “ನಾನು ಸತ್ತರೂ ಇಲ್ಲಿನ ಹಿಂದೂಗಳಿಗೆ ಸಾಕಷ್ಟು ತಾಪವನ್ನು ಬಿಟ್ಟು ಹೋಗುತ್ತೇನೆ. ಹಿಂದೂಗಳು ಖೈರಾಬಾದ್ ಅನ್ನು ಶ್ರೀರಾಮನಗರವನ್ನಾಗಿ ಮಾಡುತ್ತಾರೆ. ನಾನು ಇದನ್ನು ಬಹಿರಂಗವಾಗಿ ಹೇಳುತ್ತೇನೆ- ನೀವು ಒಬ್ಬ ಹಿಂದೂವನ್ನು ಕೊಂದರೆ, ನಾನು 10 ಮುಸ್ಲಿಮರನ್ನು ಕೊಲ್ಲುತ್ತೇನೆ” ಎನ್ನುತ್ತಾರೆ.

ಮುಸ್ಲಿಂ ಮಹಿಳೆಯರನ್ನು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದ ಬಜರಂಗಮುನಿ, “ಒಬ್ಬ ಹಿಂದೂ ಹುಡುಗಿಯನ್ನು ಲವ್ ಜಿಹಾದ್‌ಗೆ ಸಿಲುಕಿಸಿ ದೌರ್ಜನ್ಯ ಎಸಗಿದರೆ, ನಾನು 10 ಮುಸ್ಲಿಂ ಹುಡುಗಿಯರನ್ನು ‘ಲವ್ ಸನಾತನ’ಕ್ಕೆ ಸಿಲುಕಿಸಿ ಕಿರುಕುಳ ನೀಡುತ್ತೇನೆ” ಎಂದು ಹೇಳಿಕೆ ನೀಡಿದ್ದಾರೆ.

ಬಜರಂಗ ಮುನಿಯನ್ನು ಏಪ್ರಿಲ್ 13 ರಂದು ಬಂಧಿಸಿ, ಏಪ್ರಿಲ್ 24 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಬಿಡುಗಡೆಯಾದ ನಂತರ ಬಜರಂಗಮುನಿ, “ನಾನು ನೀಡಿದ ಹೇಳಿಕೆಗಳಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ನನ್ನ ಧರ್ಮಕ್ಕಾಗಿ ನಾನು 1,000 ಬಾರಿ ಜೈಲಿಗೆ ಹೋಗುತ್ತೇನೆ. ನಾನು ನನ್ನ ಧರ್ಮಕ್ಕಾಗಿ ಏನು ಬೇಕಾದರೂ ಮಾಡುತ್ತೇನೆ, ನನ್ನನ್ನೇ ತ್ಯಾಗ ಕೂಡ ಮಾಡುತ್ತೇನೆ” ಎನ್ನುತ್ತಾರೆ.

ಇದನ್ನೂ ಓದಿರಿ: ಆಲ್ಟ್‌ ನ್ಯೂಸ್‌ ವಿದೇಶಿ ದೇಣಿಗೆ ಸ್ವೀಕರಿಸಿಲ್ಲ: ರೋಜರ್‌ಪೇ ಸ್ಪಷ್ಟನೆ

ಆ ಸಮಯದಲ್ಲಿ ವೀಡಿಯೊವನ್ನು ಟ್ವೀಟ್ ಮಾಡಿದ ಜುಬೈರ್ ಅವರನ್ನು “ಹಿಂದೂ ವಿರೋಧಿ” ಎಂದು ಆರೋಪಿಸುತ್ತಾರೆ. “ನೀವು ಅವರ ಪ್ರೊಫೈಲ್ ಅನ್ನು ಪರಿಶೀಲಿಸಿದರೆ, ಹಿಂದೂ ವಿರೋಧಿಯಲ್ಲದ ಒಂದೇ ಒಂದು ಪೋಸ್ಟ್ ಇಲ್ಲ. ಅವರು ಮಾನವತಾವಾದಿ ಅಥವಾ ಜಾತ್ಯತೀತ ವ್ಯಕ್ತಿಯಾಗಿದ್ದರೆ, ಹಿಂದೂಗಳ ಮೇಲೆ ಮುಸ್ಲಿಮರು ನಡೆಸಿದ ದೌರ್ಜನ್ಯ ಅಥವಾ ಅವರ ದ್ವೇಷದ ಭಾಷಣಗಳ ಬಗ್ಗೆ ಪೋಸ್ಟ್ ಮಾಡುತ್ತಿದ್ದರು. ಆದರೆ ಅವರು ಹಿಂದೂಗಳನ್ನು ಆಕ್ರಮಣಕಾರಿ ಎಂದು ತೋರಿಸುವ ಟ್ವೀಟ್‌ಗಳನ್ನು ಮಾತ್ರ ಪೋಸ್ಟ್ ಮಾಡಿದ್ದಾರೆ” ಎಂದು ದೂರುತ್ತಾರೆ.

ದ್ವೇಷ ಭಾಷಣ ಪ್ರಕರಣಗಳ ಹೊರತಾಗಿ ಭಜರಂಗ ಮುನಿ 2021ರಲ್ಲಿ ಮೂವರು ಮುಸ್ಲಿಂ ಸಹೋದರರಿಂದ ಹಿಂಸಾತ್ಮಕವಾಗಿ ಭೂಕಬಳಿಕೆ ಮಾಡಿದ ಆರೋಪ ಹೊಂದಿದ್ದಾರೆ. ಭಜರಂಗ ಮುನಿಯು ಮುಸ್ಲಿಂ ಸಹೋದರರ  ವಿರುದ್ಧ ಪ್ರತಿ ಪ್ರಕರಣವನ್ನು ದಾಖಲಿಸಿದ ನಂತರ ಮೂವರು ಸಹೋದರರು ಐದು ತಿಂಗಳು ಜೈಲಿನಲ್ಲಿ ಕಳೆಯುತ್ತಾರೆ. ಆದರೆ ಈ ಪ್ರಕರಣದಲ್ಲಿ ಮಹಂತ್ ಅವರನ್ನು ಇಂದಿಗೂ ಬಂಧಿಸಲಾಗಿಲ್ಲ.

ಮೂಲ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಪಂಚದ ಎಲ್ಲ ಪ್ರಜಾಪ್ರಭುತ್ವ, ಸಾಂವಿಧಾನಿಕ ದೇಶಗಳು ನಮ್ಮ ದೇಶಕ್ಕೆ ಛಿಮಾರಿ ಹಾಕಿದ್ರು ಇನ್ನು ಇವರ ಕೋಮು ಭಾವನೆ ಕುಗ್ಗಲೇ ಇಲ್ಲ ಇಲ್ಲಿ ಬೇಲಿ ಹೊಲ ಮೆಯುತ್ತಿಲ್ಲ ಇಡೀ ಹೊಲವನ್ನೇ ಅಕ್ರಮಿಸಿಕೊಂಡಿದೆ ಇದೆ ನಮ್ಮ ನಿಜವಾದ ಭಾರತೀಯರ ವಿಪರ್ಯಾಸ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...