Homeಮುಖಪುಟಮುಸ್ಲಿಂ ಮಹಿಳೆಯರ ಅತ್ಯಾಚಾರಕ್ಕೆ ಕರೆ ನೀಡಿದ್ದ ಬಜರಂಗ ಮುನಿಗೆ ಜಾಮೀನು: ಪಶ್ಚಾತಾಪವಿಲ್ಲವೆಂದ ಭೂಪ

ಮುಸ್ಲಿಂ ಮಹಿಳೆಯರ ಅತ್ಯಾಚಾರಕ್ಕೆ ಕರೆ ನೀಡಿದ್ದ ಬಜರಂಗ ಮುನಿಗೆ ಜಾಮೀನು: ಪಶ್ಚಾತಾಪವಿಲ್ಲವೆಂದ ಭೂಪ

- Advertisement -
- Advertisement -

ಮುಸ್ಲಿಂ ಮಹಿಳೆಯರ ಮೇಲೆ ಅತ್ಯಾಚಾರ ಬೆದರಿಕೆ ಹಾಕಿದ್ದ, ಉತ್ತರ ಪ್ರದೇಶದ ಸೀತಾಪುರದ ಖೈರಾಬಾದ್‌ನಲ್ಲಿರುವ ಮಹರ್ಷಿ ಶ್ರೀ ಲಕ್ಷ್ಮಣ್ ದಾಸ್ ಉದಾಸಿನ್ ಆಶ್ರಮದ ಮುಖ್ಯಸ್ಥ ಬಜರಂಗ ಮುನಿ ದಾಸ್‌‌‌ಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಭಾನುವಾರ ಬಿಡುಗಡೆಯಾದ ಆತ ತನ್ನ ಕೃತ್ಯಕ್ಕೆ ಯಾವ ಪಶ್ಚಾತಾಪವೂ ಇಲ್ಲ ಎಂದಿದ್ದಾರೆ.

ಎಪ್ರಿಲ್ 2 ರಂದು ನಡೆದ ರ್‍ಯಾಲಿಯಲ್ಲಿ ಬಜರಂಗ ಮುನಿ ದ್ವೇಷ ಭಾಷಣ ಮಾಡುವ ಎರಡು ನಿಮಿಷಗಳ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರ ವಿರುದ್ದ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು ಮತ್ತು ಪ್ರತಿಭಟನೆಗಳೂ ದಾಖಲಾಗಿದ್ದವು. ಭಾಷಣದಲ್ಲಿ ಆತ ಮುಸ್ಲಿಂ ಮಹಿಳೆಯರನ್ನು ಅತ್ಯಾಚಾರ ಮಾಡುವಂತೆ ಕರೆ ನೀಡಿದ್ದನು. ಅವನ ಈ ಹೇಳಿಕೆಗೆ ಅಲ್ಲಿ ಸೇರಿದ್ದ ಜನರು ಜೈಶ್ರೀರಾಂ ಎಂಬ ಘೋಷಣೆ ಹಾಕಿದ್ದರು. ಇದರ ವಿರುದ್ಧ ರಾಮನರೇಶ್ ಎಂಬುವವರು ದೂರು ನೀಡಿದ ನಂತರ ದಾಸ್ ಅವರನ್ನು ಏಪ್ರಿಲ್ 13 ರಂದು ಬಂಧಿಸಲಾಗಿತ್ತು.

ನಾನು ಸಾವಿರ ಬಾರಿ ಜೈಲಿಗೆ ಹೋಗಲು ಮತ್ತು ಅನೇಕ ದಾಳಿಗಳನ್ನು ಎದುರಿಸಲು ಸಿದ್ಧನಿದ್ದೇನೆ, ಆದರೆ ನನ್ನ ಧರ್ಮ ಮತ್ತು ಮಹಿಳೆಯರನ್ನು ರಕ್ಷಿಸುವುದನ್ನು ಮುಂದುವರಿಸುತ್ತೇನೆ. ನನ್ನ ಹೇಳಿಕೆಗಳಿಗೆ ಯಾವುದೇ ಪಶ್ಚಾತಾಪವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ಅತ್ಯಾಚಾರಕ್ಕೆ ಕರೆ ನೀಡಿದ್ದ ದುಷ್ಕರ್ಮಿ ‘ಬಜರಂಗ ಮುನಿ’ ಅರೆಸ್ಟ್‌‌

ಆದರೆ ಈ ಹಿಂದೆ ಬಜರಂಗ ಮುನಿ ದಾಸ್‌ ವಿರುದ್ದ ಐಪಿಸಿಯ ದ್ವೇಷ ಭಾಷಣ, ಅವಹೇಳನಕಾರಿ ಹೇಳಿಕೆಗಳು ಮತ್ತು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಾದಾಗ ಅವರು ಉಲ್ಟಾ ಹೊಡೆದಿದ್ದರು. ಪ್ರಕರಣ ದಾಖಲಾದ ಕೆಲವೇ ಗಂಟೆಗಳ ನಂತರ, ಸಾಮಾಜಿಕ ಮಾಧ್ಯಮದಲ್ಲಿ ಬಜರಂಗ ಮುನಿ ಕ್ಷಮೆ ಯಾಚಿಸುತ್ತಿರುವ ವೀಡಿಯೋ ಕಾಣಿಸಿಕೊಂಡಿತ್ತು. “ನನ್ನ ಹೇಳಿಕೆಯನ್ನು ತಪ್ಪು ರೀತಿಯಲ್ಲಿ ಪ್ರಸ್ತುತಪಡಿಸಲಾಗಿದೆ. ಅದಕ್ಕಾಗಿ ನಾನು ಬೇಷರತ್ ಕ್ಷಮೆಯಾಚಿಸುತ್ತೇನೆ” ಎಂದು ಅವರು ಹೇಳಿದ್ದರು. ಆದರೆ ಈಗ ಎರಡು ವಾರಗಳ ಜೈಲುವಾಸದ ನಂತರ ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಳ್ಳುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...