Homeಮುಖಪುಟಬ್ಯಾಲೆಟ್‌ ಪೇಪರ್‌ ಮತದಾನ | ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಬ್ಯಾಲೆಟ್‌ ಪೇಪರ್‌ ಮತದಾನ | ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ದೇಶದ ಚುನಾವಣೆಗಳನ್ನು ಮತ್ತೆ ಬ್ಯಾಲೆಟ್ ಪೇಪರ್ ಮೂಲಕ ನಡೆಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. “ನೀವು ಚುನಾವಣೆಯಲ್ಲಿ ಗೆದ್ದಾಗ ಇವಿಎಂಗಳನ್ನು (ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್) ಟ್ಯಾಂಪರ್ ಮಾಡುವುದಿಲ್ಲ. ನೀವು ಚುನಾವಣೆಯಲ್ಲಿ ಸೋತಾಗ, ಇವಿಎಂಗಳನ್ನು ಟ್ಯಾಂಪರ್ ಮಾಡಲಾಗುತ್ತದೆಯೆ” ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪಿ.ಬಿ. ವರಾಳೆ ಅವರ ಪೀಠವು ಟೀಕಿಸಿದೆ. ಬ್ಯಾಲೆಟ್‌ ಪೇಪರ್‌ ಮತದಾನ

ಬ್ಯಾಲೆಟ್ ಪೇಪರ್ ಮತದಾನದ ಹೊರತಾಗಿ, ಮತದಾನದ ಸಮಯದಲ್ಲಿ ಮತದಾರರಿಗೆ ಹಣ, ಮದ್ಯ ಅಥವಾ ಇತರ ವಸ್ತು ಪ್ರಚೋದನೆಗಳನ್ನು ವಿತರಿಸಿದ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕನಿಷ್ಠ ಐದು ವರ್ಷಗಳವರೆಗೆ ಅಭ್ಯರ್ಥಿಗಳನ್ನು ಅನರ್ಹಗೊಳಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ಸೇರಿದಂತೆ ಹಲವಾರು ನಿರ್ದೇಶನಗಳನ್ನು ಮನವಿಯಲ್ಲಿ ಕೋರಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಿಐಎಲ್ ಸಲ್ಲಿಸಿದ್ದೇನೆ ಎಂದು ಅರ್ಜಿದಾರ ಕೆ.ಎ. ಪೌಲ್ ಹೇಳಿದಾಗ, ಪೀಠವು, “ನಿಮ್ಮ ಬಳಿ ಆಸಕ್ತಿದಾಯಕ ಪಿಐಎಲ್‌ಗಳಿವೆ. ಈ ಅದ್ಭುತ ವಿಚಾರಗಳನ್ನು ನೀವು ಹೇಗೆ ಪಡೆಯುತ್ತೀರಿ?” ಎಂದು ಕೇಳಿತು. ಅರ್ಜಿದಾರರು ಮೂರು ಲಕ್ಷಕ್ಕೂ ಹೆಚ್ಚು ಅನಾಥರು ಮತ್ತು 40 ಲಕ್ಷ ವಿಧವೆಯರನ್ನು ರಕ್ಷಿಸಿದ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ.

“ನೀವು ಈ ರಾಜಕೀಯ ಕ್ಷೇತ್ರಕ್ಕೆ ಏಕೆ ಬರುತ್ತಿದ್ದೀರಿ? ನಿಮ್ಮ ಕೆಲಸದ ಕ್ಷೇತ್ರವು ತುಂಬಾ ವಿಭಿನ್ನವಾಗಿದೆ,” ಎಂದು ಪೀಠವು ಮರುಪ್ರಶ್ನೆ ಹಾಕಿದೆ.

ಪೌಲ್ ಅವರು 150 ಕ್ಕೂ ಹೆಚ್ಚು ದೇಶಗಳಿಗೆ ಹೋಗಿದ್ದಾರೆ ಎಂಬುವುದನ್ನು ಬಹಿರಂಗಪಡಿಸಿದ ನಂತರ, ಪ್ರತಿಯೊಂದು ರಾಷ್ಟ್ರಗಳು ಬ್ಯಾಲೆಟ್ ಪೇಪರ್ ಮೂಲಕ ಮತದಾನವನ್ನು ಮಾಡಲಾಗುತ್ತವೆಯೆ ಅಥವಾ ಎಲೆಕ್ಟ್ರಾನಿಕ್ ಮತದಾನವನ್ನು ಬಳಸುತ್ತವೆಯೇ ಎಂದು ಪೀಠವು ಅವರನ್ನು ಕೇಳಿತು. ಇದಕ್ಕೆ ಉತ್ತರಿಸಿದ ಅವರು, ವಿದೇಶಿ ರಾಷ್ಟ್ರಗಳು ಬ್ಯಾಲೆಟ್ ಪೇಪರ್ ಮತದಾನವನ್ನು ಅಳವಡಿಸಿಕೊಂಡಿದ್ದು, ಭಾರತವೂ ಇದನ್ನು ಅನುಸರಿಸಬೇಕು ಎಂದು ಅರ್ಜಿದಾರರು ಹೇಳಿದ್ದಾರೆ. ಬ್ಯಾಲೆಟ್‌ ಪೇಪರ್‌ ಮತದಾನ

“ನೀವು ಪ್ರಪಂಚದ ಇತರ ಭಾಗಗಳಿಗಿಂತ ಭಿನ್ನವಾಗಿರಲು ಏಕೆ ಬಯಸುವುದಿಲ್ಲ?” ಎಂದು ಪೀಠ ಕೇಳಿತು. ಅದಕ್ಕೆ ಪ್ರತಿಕ್ರಿಯಿಸಿದ ಪೌಲ್, “ಚುನಾವನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಈ ವರ್ಷ (2024) ಜೂನ್‌ನಲ್ಲಿ ಚುನಾವಣಾ ಆಯೋಗವು 9,000 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿರುವುದಾಗಿ ಘೋಷಿಸಿದೆ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, “ಆದರೆ ನೀವು ಇಲ್ಲಿ ಹೇಳುತ್ತಿರುವ ನಿಮ್ಮ ಪರಿಹಾರವನ್ನು ಅದು ಹೇಗೆ ಪ್ರಸ್ತುತವಾಗಿಸುತ್ತದೆ? ನೀವು ಬ್ಯಾಲೆಟ್‌ ಪೇಪರ್‌ ಮತದಾನ ನಡೆದರೆ ಭ್ರಷ್ಟಾಚಾರ ನಡೆಯುವುದಿಲ್ಲವೇ” ಎಂದು ಪೀಠ ಪ್ರಶ್ನಿಸಿತು.

“ಟೆಸ್ಲಾದ ಸಿಇಒ ಮತ್ತು ಸಹ-ಸಂಸ್ಥಾಪಕ ಎಲೋನ್ ಮಸ್ಕ್ ಅವರು ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಬಹುದು ಎಂದು ಹೇಳಿದ್ದಾರೆ. ಆಂಧ್ರಪ್ರದೇಶದ ಪ್ರಸ್ತುತ ಮುಖ್ಯಮಂತ್ರಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ಇವಿಎಂಗಳನ್ನು ಟ್ಯಾಂಪರ್‌ ಮಾಡಬಹುದು ಎಂದು ಹೇಳಿದ್ದರು” ಎಂದು ಪೌಲ್ ಕೋರ್ಟ್‌ಗೆ ಹೇಳಿದ್ದಾರೆ.

“ಚಂದ್ರಬಾಬು ನಾಯ್ಡು ಸೋತಾಗ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಬಹುದು ಎಂದು ಹೇಳಿದ್ದರು. ಈಗ ಈ ಬಾರಿ ಜಗನ್ ಮೋಹನ್ ರೆಡ್ಡಿ ಸೋತರು. ಹಾಗಾಗಿ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಬಹುದು ಎಂದು ಹೇಳಿದ್ದಾರೆ” ಎಂದು ಪೀಠ ಹೇಳಿತು.

ಚುನಾವಣೆಯಲ್ಲಿ ಹಣ ಹಂಚುವುದು ಎಲ್ಲರಿಗೂ ತಿಳಿದಿದೆ ಎಂದು ಅರ್ಜಿದಾರರು ಹೇಳಿದಾಗ, ಪೀಠವು, “ನಾವು ಯಾವುದೇ ಚುನಾವಣೆಗೆ ಹಣವನ್ನು ಪಡೆದಿಲ್ಲ” ಎಂದು ಹೇಳಿದೆ.

ಚುನಾವಣಾ ಪ್ರಚಾರದ ಸಮಯದಲ್ಲಿ ಹಣ ಮತ್ತು ಮದ್ಯದ ಬಳಕೆಯನ್ನು ನಿಯಂತ್ರಿಸಲು ಮತ್ತು ಅಂತಹ ಅಭ್ಯಾಸಗಳನ್ನು ಕಾನೂನಿನಡಿಯಲ್ಲಿ ನಿಷೇಧಿಸಲಾಗಿದೆ ಮತ್ತು ಶಿಕ್ಷಾರ್ಹವಾಗಿದೆ. ಇದನ್ನು ಖಚಿತಪಡಿಸಿಕೊಳ್ಳಲು ಸಮಗ್ರ ಚೌಕಟ್ಟನ್ನು ರೂಪಿಸುವುದು ತನ್ನ ಮನವಿಯ ಮತ್ತೊಂದು ಆಗ್ರಹವಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...