Homeಅಂತರಾಷ್ಟ್ರೀಯಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

- Advertisement -
- Advertisement -

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಗುರುವಾರ ಮತ್ತು ಶುಕ್ರವಾರದಂದು ಭಯೋತ್ಪಾದಕರು ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ವಿವಿಧ ಸ್ಥಳಗಳಲ್ಲಿ ಕಾರ್ಯಚರಣೆ ನಡೆಸಿದ್ದರು. ಶನಿವಾರ ನಡೆದ ಕಾರ್ಯಚರಣೆಯಲ್ಲಿ 70 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು ಎಂದು ಸೇನೆ ತಿಳಿಸಿದೆ. ಕ್ವೆಟ್ಟಾ, ಮಾಸ್ತುಂಗ್, ನುಷ್ಕಿ, ದಲ್ಬಂದಿನ್, ಖರನ್, ಪಂಜ್‌ಗುರ್, ಟಂಪ್, ಗ್ವಾದರ್ ಮತ್ತು ಪಾಸ್ನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಿಂಸಾಚಾರ ನಡೆದ ವರದಿಯಾಗಿದೆ.

“ನಮ್ಮ ಸೇನಾ ಪಡೆಗಳು ಭಯೋತ್ಪಾದಕರನ್ನು ಧೈರ್ಯವಾಗಿ ಎದುರಿಸಿದವು ಮತ್ತು ಬಲೂಚಿಸ್ತಾನದಾದ್ಯಂತ ತೀವ್ರವಾದ ಕಾರ್ಯಾಚರಣೆಯಿಂದ ಮೂವರು ಆತ್ಮಾಹುತಿ ಬಾಂಬರ್‌ಗಳು ಸೇರಿದಂತೆ 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಯಿತು” ಎಂದು ಸೇನೆ ತಿಳಿಸಿದೆ.

ಬಲೂಚಿಸ್ತಾನ ಪ್ರಾಂತ್ಯದಲ್ಲಿ ಭಯೋತ್ಪಾದಕರು ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಮಹಿಳೆಯರು, ಮಕ್ಕಳು, ವೃದ್ಧರು ಮತ್ತು ಕಾರ್ಮಿಕರು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ. ಭಯೋತ್ಪಾದಕರ ತೆರವು ಕಾರ್ಯಾಚರಣೆಯ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಹದಿನೈದು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ತುರ್ತು ಯೋಜನೆಯಡಿಯಲ್ಲಿ ಫೆಡರಲ್ ಅಪೆಕ್ಸ್ ಸಮಿತಿಯಿಂದ ಅನುಮೋದಿಸಲ್ಪಟ್ಟ ಭಯೋತ್ಪಾದನಾ ನಿಗ್ರಹ ಅಭಿಯಾನವು ತ್ವರಿತ ವೇಗದಲ್ಲಿ ನಡೆಯಲಿದೆ ಎಂದು ಸೇನೆ ತಿಳಿಸಿದೆ.

ಇತ್ತೀಚಿನ ವರ್ಷಗಳಲ್ಲಿ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಹಿಂಸಾಚಾರ ತೀವ್ರವಾಗಿ ಹೆಚ್ಚಾಗಿದೆ. ಸಂಶೋಧನಾ ಮತ್ತು ಭದ್ರತಾ ಅಧ್ಯಯನ ಕೇಂದ್ರದ ಪ್ರಕಾರ, ಕಳೆದ ವರ್ಷ ಸಾವು-ನೋವುಗಳು 787 ರಿಂದ 956 ಕ್ಕೆ ಏರಿದೆ. ಇದು ಸುಮಾರು 22 ಪ್ರತಿಶತದಷ್ಟು ಹೆಚ್ಚಾಗಿದೆ.

ಇಸ್ಲಾಮಾಬಾದ್ ಮೂಲದ ಪಾಕ್ ಇನ್ಸ್ಟಿಟ್ಯೂಟ್ ಫಾರ್ ಪೀಸ್ ಸ್ಟಡೀಸ್ ನಡೆಸಿದ ತನಿಖೆಯ ಪ್ರಕಾರ, ‘2025 ರಲ್ಲಿ ಪಾಕಿಸ್ತಾನದಾದ್ಯಂತ ನಡೆದ ಭಯೋತ್ಪಾದಕ ದಾಳಿಗಳು ಮತ್ತು ಹಿಂಸಾಚಾರವು ಶೇ34 ರಷ್ಟು ಹೆಚ್ಚಾಗಿದೆ ಹಾಗೂ ದೇಶದಾದ್ಯಂತ 699 ಘಟನೆಗಳು ದಾಖಲಾಗಿವೆ’ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...