Homeಮುಖಪುಟಇವಿಎಂ ವಿರೋಧಿಸಿ 100 ದಿನದಲ್ಲಿ 3000 ಕಿ.ಮೀ ನಡೆದ ಓಂಕಾರ್ ಸಿಂಗ್ ಬೆಂಗಳೂರಿಗೆ ಆಗಮನ

ಇವಿಎಂ ವಿರೋಧಿಸಿ 100 ದಿನದಲ್ಲಿ 3000 ಕಿ.ಮೀ ನಡೆದ ಓಂಕಾರ್ ಸಿಂಗ್ ಬೆಂಗಳೂರಿಗೆ ಆಗಮನ

ಅವರು ಮಧ್ಯಾಹ್ನ 3:30ಕ್ಕೆ ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಚನ್ನೈ ಕಡೆ ತಮ್ಮ ಪಾದಾಯಾತ್ರೆ ಮುಂದುವರೆಸಲಿದ್ದಾರೆ

- Advertisement -
- Advertisement -

‘ಇವಿಎಂ ಹಟಾವೋ; ದೇಶ್‌ ಬಚಾವೋ’ ಎಂಬ ಆಗ್ರಹದೊಂದಿಗೆ ಉತ್ತರಾಖಂಡ್ ರಾಜ್ಯದ ರುದ್ರಪುರದಿಂದ ಪಾದಯಾತ್ರೆ ಮೂಲಕ ಹೊರಟಿರುವ ಸಾಮಾಜಿಕ ಕಾರ್ಯಕರ್ತ ಓಂಕಾರ್‌ ಸಿಂಗ್‌ ದಿಲ್ಹಾನ್‌ ಗುರುವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: ಇವಿಯಂ ವಿರೋಧಿಸಿ ರಾಷ್ಟ್ರ ಸುತ್ತುವ ವಿಭಿನ್ನ ಮತ್ತು ಏಕಾಂಗಿ ಹೋರಾಟವೊಂದು ಇಲ್ಲಿದೆ ನೋಡಿ

ಸುಮಾರು 6500 ಕಿ.ಮೀ. ಪಾದಯಾತ್ರೆ ಹಮ್ಮಿಕೊಂಡಿರುವ ಸಿಂಗ್ ಅವರು ಈಗಾಗಲೇ 103 ದಿನಗಳನ್ನು ಪೂರೈಸಿ 3000 ಕಿ.ಮೀ. ದೂರ ಕ್ರಮಿಸಿ ಜನರಲ್ಲಿ ಇವಿಎಂ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದ್ದಾರೆ.

ಆಗಸ್ಟ್ 18ರಂದು ಉತ್ತರಾಖಂಡ್ ರಾಜ್ಯದ ರುದ್ರಪುರದಿಂದ ಪಾದಯಾತ್ರೆ ಆರಂಭಿಸಿರುವ ಅವರು, ಈಗಾಗಲೇ ಉತ್ತರಾಖಂಡ, ದೆಹಲಿ, ಉತ್ತರ ಪ್ರದೇಶ, ಗುಜರಾತ, ರಾಜಸ್ತಾನ, ಮಹಾರಾಷ್ಟ್ರ  ರಾಜ್ಯಗಳಲ್ಲಿ ಕ್ರಮಿಸಿ ಇದೀಗ ಕರ್ನಾಟಕದ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ ಇವಿಎಂ ಬಗ್ಗೆ ಜಾಗೃತಿ ಮೂಡಿಸಿ ಇಲ್ಲಿಂದ ತಮಿಳುನಾಡು, ಆಂಧ್ರಪ್ರದೇಶ, ಒಡಿಸ್ಸಾ, ಅಸ್ಸಾಂ, ಪಶ್ಚಿಮಬಂಗಾಳ, ಬಿಹಾರ, ಉತ್ತರಾಖಂಡ ಮೂಲಕ
ದೆಹಲಿಗೆ ತೆರಳಿ ಅಲ್ಲಿ ತಮ್ಮ ಪಾದಯಾತ್ರೆ ಮುಕ್ತಾಯಗೊಳಿಸಲಿದ್ದಾರೆ.

ಬೆಂಗಳೂರಿನ ಹಲವು ಪ್ರಮುಖ ಬೀದಿಗಳಲ್ಲಿ ಸುತ್ತಾಡುತ್ತಾ ಅರಿವು ಮೂಡಿಸಲಿರುವ ಅವರು ಮಧ್ಯಾಹ್ನ 3:30ಕ್ಕೆ ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಚನ್ನೈ ಕಡೆ ತಮ್ಮ ಪಾದಾಯಾತ್ರೆ ಮುಂದುವರೆಸಲಿದ್ದಾರೆ. ಪ್ರಜ್ಞಾವಂತರೆಲ್ಲರೂ ಅವರ ಏಕಾಂಗಿ ಹೋರಾಟಕ್ಕೆ ಬೆಂಬಲೂ ಸೂಚಿಸುತ್ತಿದ್ದೇವೆ ಎಂದು ಸಾಮಾಜಿಕ ಕಾರ್ಯಕರ್ತ ತನ್ವೀರ್‌ರವರು ತಿಳಿಸಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ದಿಲ್ಹಾನ್ ಅವರನ್ನು ಸಾಮಾಜಿಕ ಕಾರ್ಯಕರ್ತರು, ಎನ್‌ಜಿಒಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಸ್ವಾಗತಿಸಿ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಸಿಂಗ್, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿದ್ಯುನ್ಮಾನ ಮತಯಂತ್ರ (ಇವಿಎಂ) ಸರಿ ಹೊಂದುವುದಿಲ್ಲ. ದೊಡ್ಡ ದೊಡ್ಡ ಶ್ರೀಮಂತ ಹಾಗೂ ಮುಂದುವರಿದ ರಾಷ್ಟ್ರಗಳೇ ಈಗ ಇವಿಎಂ ಕೈಬಿಟ್ಟು ಹಳೆಯ ಪದ್ಧತಿಗೆ ಮರಳಿವೆ. ಆದ್ದರಿಂದ ನಮ್ಮ ದೇಶದಲ್ಲಿ ಇವಿಎಂ ಕೈಬಿಡಬೇಕು ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದರು.

ಇದನ್ನೂ ಓದಿ: ಇವಿಯಂ ವಿರೋಧಿಸಿ ಏಕಾಂಗಿಯಾಗಿ 3 ತಿಂಗಳಿಂದ ರಾಷ್ಟ್ರ ಸುತ್ತುತ್ತಿರುವ ದೇಶಪ್ರೇಮಿ ಕರ್ನಾಟಕಕ್ಕೆ: ವಿಡಿಯೋ ನೋಡಿ

ಈ ಹಿಂದೆ ಬ್ಯಾಲೆಟ್‌ ವೊಟಿಂಗ್‌ ವ್ಯವಸ್ಥೆ  ದೇಶದಲ್ಲಿ ಜಾರಿಯಲ್ಲಿತ್ತು. ಆಗ ಜನರಿಗೆ ಯಾವುದೇ ಸಂಶಯವಿರುತ್ತಿರಲಿಲ್ಲ. ಅದರಲ್ಲಿ ಅಕ್ರಮವೆಸಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಇವಿಎಂನಲ್ಲಿ ಅಕ್ರಮವೆಸಗಲು ಸಾಧ್ಯವಿದೆ ಎಂಬುದು ಹಲವು ತಜ್ಞರ ಅಭಿಪ್ರಾಯವಾಗಿದೆ. ಆದ್ದರಿಂದ ಜನರ ಸಂಶಯ ನಿವಾರಣೆಗಾಗಿ ಹಳೆಯ ಪದ್ಧತಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಮೋದಿ ನೇತೃತ್ವದ ಎನ್‌ಡಿಯ ಸರ್ಕಾರದಲ್ಲಿ ಯಾವುದೇ ಜನಪರ ಕೆಲಸಗಳು ಆಗದೇ ಇದಿದ್ದರೂ ಇವಿಎಂ ದುರ್ಬಳಕೆಯಿಂದ ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದು, ಅಧಿಕಾರಕ್ಕೆ ಬರುವಂತೆ ಆಯಿತು. ವಿದ್ಯುನ್ಮಾನ ಮತಯಂತ್ರ ಬೇಡವೆಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ, ಸುಬ್ರಮಣಿಯನ್‌ ಸ್ವಾಮಿ ಅವರೇ ಆಕ್ಷೇಪ ಎತ್ತಿದ್ದರು. ಆದರೆ ಈಗ ಈ ಬಗ್ಗೆ  ಮೌನವಹಿಸಿದ್ದಾರೆ ಎಂದು ಅವರು ದೂರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವಿಎಂಗೆ ಬಳಸುವ ಬ್ಯಾಟರಿಗಳು ಹಳತಾದಂತೆ ಇವುಗಳನ್ನು ಡಿಸ್ಪೋಸ್ ಮಾಡಿದಾಗ ಪರಿಸರದ ಮೇಲೆ ಅಪಾರ ಹಾನಿಯಾಗುತ್ತದೆ.
    ಇಸಿ ನಿಯಮದಂತೆ ಒಂದು ರಾಜ್ಯದಲ್ಲಿ ಒಂದು ಸಾರಿ ಎಲೆಕ್ಷನ್ ಗೆ ಬಳಸಿದ ತರುವಾಯ ಅವನ್ನು ಮತ್ತದೇ ರಾಜ್ಯದಲ್ಲಿ ಬಳಸುವಂತಿಲ್ಲ. ಇವುಗಳ ಸಾಗಣೆಗೆ ಅಪಾರ ದುಡಿಮೆ,ಹಣ ಪೋಲಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...