Homeಮುಖಪುಟಅಕ್ಷಯ್ ಕುಮಾರ್ ನಟನೆಯ 'ಲಕ್ಷ್ಮಿ' ಚಿತ್ರ ಬ್ಯಾನ್? ಹಿಂದೂಗಳ ಭಾವನೆಗೆ ಧಕ್ಕೆ ಎಂದ ಲಕ್ಷ್ಮಿ 'ಭಕ್ತರು'

ಅಕ್ಷಯ್ ಕುಮಾರ್ ನಟನೆಯ ‘ಲಕ್ಷ್ಮಿ’ ಚಿತ್ರ ಬ್ಯಾನ್? ಹಿಂದೂಗಳ ಭಾವನೆಗೆ ಧಕ್ಕೆ ಎಂದ ಲಕ್ಷ್ಮಿ ‘ಭಕ್ತರು’

'ತಮಿಳಿನ ಕಾಂಚನಾ ಚಿತ್ರದ ಬಾಲಿವುಡ್ ರೀಮೆಕ್ ಚಿತ್ರ 'ಲಕ್ಷ್ಮಿ', ಲವ್ ಜಿಹಾದ್‌ಗೆ ಬೆಂಬಲ ನಿಡುತ್ತದೆ ಮತ್ತು ಹಿಂದೂಗಳ ಭಾವನೆಗೆ ಧಕ್ಕೆ ತರುತ್ತದೆ' ಹಾಗಾಗಿ ಇದನ್ನು ಬ್ಯಾನ್ ಮಾಡಬೇಕು ಎಂದು ಹಲವರು ಒತ್ತಾಯಿಸುತ್ತಿದ್ದಾರೆ.

- Advertisement -
- Advertisement -

ಅಕ್ಷಯ್ ಕುಮಾರ್ ನಟನೆಯ ಬಹುನಿರೀಕ್ಷಿತ ಬಾಲಿವುಡ್ ಚಿತ್ರ ‘ಲಕ್ಷ್ಮಿ’ ಚಲನಚಿತ್ರವನ್ನು ಬ್ಯಾನ್ ಮಾಡಬೇಕೆಂದು ಟ್ವಿಟ್ಟರ್‌ನಲ್ಲಿ ಹಲವರು ಒತ್ತಾಯಿಸುತ್ತಿದ್ದಾರೆ. #Ban_Laxmmi_Movie ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದೆ. ಈ ಹಿಂದೆ ಚಿತ್ರದ ಶೀರ್ಷಿಕೆಯಿಂದ ಮನನೊಂದ ಲಕ್ಷ್ಮಿ ಭಕ್ತರು ಈ ಅಭಿಯಾನವನ್ನು ಹುಟ್ಟುಹಾಕಿದ್ದರು.

ಈ ಚಿತ್ರವು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡುತ್ತದೆ ಎಂಬ ಕಾರಣಕ್ಕೆ ಬ್ಯಾನ್ ಮಾಡಬೇಕು ಎಂಬು ಕೂಗು ಕೇಳಿಬರುತ್ತಿದೆ. ಈ ಚಿತ್ರ ಇದೇ ನವೆಂಬರ್ 9 ರಂದು ಬಿಡುಗಡೆಯಾಗುತ್ತಿದೆ.

 

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ಅರ್ಚನಾ ಘಾನ್ವತ್ ಎಂಬುವವರು ಟ್ವೀಟ್ ಮಾಡಿ, “#LaxmmiBomb ಅನ್ನು ಸ್ವೀಕರಿಸಲಾಗುವುದಿಲ್ಲ! ಅಥವಾ ದೇವತೆ “# ಲಕ್ಷ್ಮಿ” ಹೆಸರು ಸ್ವೀಕಾರಾರ್ಹವಲ್ಲ !!. ಈ ಚಿತ್ರವನ್ನು ಬ್ಯಾನ್ ಮಾಡಿ. ಇದು ಹಿಂದೂಗಳ ಭಾವನೆಗೆ ಧಕ್ಕೆಯುಂಟುಮಾಡುತ್ತದೆ ಮತ್ತು ಇದು ಲವ್ ಜಿಹಾದ್‌ ಅನ್ನು ಬೆಂಬಲಿಸುತ್ತದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಈ ಚಿತ್ರವು ತಮಿಳು ಆವೃತ್ತಿಯಲ್ಲಿ ‘ಕಾಂಚನಾ’, ನಾಯಕ-ರಾಘವ, ನಾಯಕಿ-ಪ್ರಿಯಾ ಆಗಿದ್ದಾರೆ. ಆದರೆ ಹಿಂದಿಯಲ್ಲಿ ನಾಯಕ-ಆಸಿಫ್, ನಾಯಕಿ-ಪ್ರಿಯಾ ಎಂದು ಬದಲಾಗಿದೆ. ಇದು ಕಾಕತಾಳೀಯವಲ್ಲ. ಇದು ಲವ್ ಜಿಹಾದ್‌ ಅನ್ನು ಪ್ರಚಾರ ಮಾಡುವ ಸ್ಪಷ್ಟ ಗುರಿಯನ್ನು ಹೊಂದಿದೆ. ಹಾಗಾಗಿ ಈ ಚಿತ್ರವನ್ನು ಬ್ಯಾನ್ ಮಾಡಿ ಎಂದು ಎಲ್ಲಾ ಹಿಂದೂಗಳಲ್ಲಿಯೂ ನಾನು ಮನವಿ ಮಾಡಿಕೊಳ್ಳುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಸಖ ವೀರ್ ಎಂಬುವವರು ಟ್ವೀಟ್ ಮಾಡಿ, “ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ‘ಲಕ್ಷ್ಮಿ’ ಚಿತ್ರದ ವಿರುದ್ಧ ಮುಂಬೈನಲ್ಲಿ ದೂರು ದಾಖಲಿಸಲಾಗಿದೆ. ಈಗ ಹಿಂದೂಗಳು ಸಾಂವಿಧಾನಿಕವಾಗಿ ಇದನ್ನು ವಿರೋಧಿಸಲಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆಯೂ ಈ ಚಿತ್ರದ ಟೈಟಲ್‌ ಅನ್ನು ಬದಲಾಯಿಸಬೇಕು ಎಂದು ಹಲವರು ಒತ್ತಾಯಿಸಿದ್ದರು. ಇದಕ್ಕೆ ಮಣಿದ ಚಿತ್ರ ತಂಡ ‘ಲಕ್ಷ್ಮಿ ಬಾಂಬ್’ ಟೈಟಲ್‌ನಲ್ಲಿ ಬಾಂಬ್ ಅನ್ನು ಸಿಡಿಸಿ ಬರೀ ‘ಲಕ್ಷ್ಮಿ’ ಎಂದು ಮರುನಾಮಕರಣ ಮಾಡಿಕೊಂಡಿತ್ತು. ಇದೀಗ ಈ ಚಿತ್ರಕ್ಕೆ ಮತ್ತೊಂದು ಕಂಟಕ ಎದುರಾಗಿದೆ.

ನವೆಂಬರ್ 9 ರಂದು ತೆರೆಗೆ ಬರಲಿರುವ ಚಿತ್ರಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ವಿರೋಧ ವ್ಯಕ್ತಪಡಿಸಿತ್ತು. ಈ ಚಿತ್ರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುತ್ತದೆ ಎಂದು ರಾಜ್ಯ ಕಾರ್ಯಕಾರಿ ಅಧ್ಯಕ್ಷ ರಾಜೇಶ್ ಪವಿತ್ರನ್ ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂಗಳ ಭಾವನೆಗಳನ್ನು ಈ ಚಿತ್ರ ಅವಮಾನಿಸಿದೆ. ಈ ಚಿತ್ರದಲ್ಲಿ ನಾಯಕನ ಹೆಸರು ಆಸಿಫ್, ನಾಯಕಿಯ ಹೆಸರು ಪ್ರಿಯಾ ಯಾದವ್ ಆಗಿದೆ. ಚಿತ್ರ “ಲವ್ ಜಿಹಾದ್” ಅನ್ನು ಪ್ರಚಾರ ಪಡಿಸುತ್ತದೆ ಹಾಗಾಗಿ ಚಲನಚಿತ್ರವನ್ನು ನಿಷೇಧಿಸುವಂತೆ ಈ ಹಿಂದೆಯೇ ಸರ್ಕಾರಕ್ಕೆ ಕರೆ ನೀಡಿದ್ದರು.

“ಚಲನಚಿತ್ರ ನಿರ್ಮಾಪಕರು ಕೋಮು ಗಲಭೆಗಳನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಲಕ್ಷ್ಮೀ ಬಾಂಬ್ ಎಂಬ ಚಲನಚಿತ್ರವನ್ನು ನಿರ್ಮಿಸುವವರು ಎಂದಾದರೂ ತಸ್ಲೀಮಾ ಬಾಂಬ್ ಎಂಬ ಚಿತ್ರ ಮಾಡಲು ಧೈರ್ಯ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು.

ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರವನ್ನು ಬ್ಯಾನ್ ಮಾಡಬೇಕು ಎನ್ನುವ ಅಭಿಯಾನವನ್ನು ಆರಂಭಿಸಲಾಗಿದೆ. ಈ ಚಿತ್ರವನ್ನು ಒಪ್ಪಿಕೊಂಡಿರುವುದಕ್ಕೆ ಅಕ್ಷಯ್ ಕುಮಾರ್ ವಿರುದ್ಧವೂ ಹಲವರು ತಿರುಗಿಬಿದ್ದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ಇತ್ತೀಚೆಗೆ ಲವ್ ಜಿಹಾದ್ ಎನ್ನುವ ಪದ ಬಹಳಷ್ಟು ಚಾಲ್ತಿಯಲ್ಲಿದ್ದು, ಈ ಹಿಂದೆ ಇದೇ ಕಾರಣ ನೀಡಿ ತನಿಷ್ಕ್ ಜಾಹೀರಾತನ್ನು ನಿಷೇಧಿಸಲಾಗಿತ್ತು.

ಆದರೆ ಕೇಂದ್ರ ಸರ್ಕಾರ ‘ಲವ್ ಜಿಹಾದ್’ ಎಂಬುದು ಎಲ್ಲಿಯೂ ವರದಿಯಾಗಿಲ್ಲ ಎಂದು ಹೇಳಿತ್ತು. ಬಿಜೆಪಿ ಮುಖಂಡ ಮತ್ತು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿ ಅವರು ‘ಲವ್ ಜಿಹಾದ್ ’ಎಂಬ ಪದವನ್ನು ಈಗಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ಅಲ್ಲದೇ ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ” ಎಂದು ಲೋಕಸಭೆಗೆ ತಿಳಿಸಿದ್ದರು.

ಇದಲ್ಲದೆ, “ಸಂವಿಧಾನದ 25 ನೇ ವಿಧಿಯು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಧರ್ಮವನ್ನು ಪ್ರಚಾರ ಮಾಡಲು, ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡಲು ಸ್ವಾತಂತ್ರ್ಯವನ್ನು ಒದಗಿಸುತ್ತದೆ. ಕೇರಳ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಈ ಅಭಿಪ್ರಾಯವನ್ನು ಎತ್ತಿಹಿಡಿದಿವೆ” ಎಂದು ಹೇಳಿದ್ದರು.


ಇದನ್ನೂ ಓದಿ: ಟೀಕೆಗೆ ಬೆದರಿದ ಚಿತ್ರತಂಡ: ಲಕ್ಷ್ಮೀ ಬಾಂಬ್ ಚಿತ್ರದ ಟೈಟಲ್‌ನಲ್ಲಿ ‘ಬಾಂಬ್’ ನಿಷ್ಕ್ರಿಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...