Homeಕರ್ನಾಟಕನಾಳೆ ಬೆಂಗಳೂರಿನಲ್ಲಿ ಮದ್ಯ ನಿಷೇಧಕ್ಕಾಗಿ ಬಡ ತಾಯಂದಿರ ಸತ್ಯಾಗ್ರಹ...

ನಾಳೆ ಬೆಂಗಳೂರಿನಲ್ಲಿ ಮದ್ಯ ನಿಷೇಧಕ್ಕಾಗಿ ಬಡ ತಾಯಂದಿರ ಸತ್ಯಾಗ್ರಹ…

- Advertisement -
- Advertisement -

ಮದ್ಯನಿಷೇದದ ಕುರಿತು ಸರ್ಕಾರ ತನ್ನ ನೀತಿ ಪ್ರಕಟಿಸುವಂತೆ ಒತ್ತಾಯಿಸಿ ’ಮದ್ಯ ನಿಷೇಧ ಆಂದೋಲನ ಕರ್ನಾಟಕ’ ನೇತೃತ್ವದಲ್ಲಿ ನಾಳೆ ಬೆಂಗಳೂರಿನ ರೈಲ್ವೈ ನಿಲ್ದಾಣದ ಎದುರು ನೂರಾರು ತಾಯಂದಿರು ಸತ್ಯಾಗ್ರಹ ನಡೆಸಲಿದ್ದಾರೆ…

ಕರ್ನಾಟಕದಲ್ಲಿ ಮದ್ಯ ನಿಷೇಧಿಸುವಂತೆ ಒತ್ತಾಯಿಸಿ ದಿನಾಂಕ 12/11/2019 ರಂದು ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾದ ನಂತರ ಚುನಾವಣಾ ನೀತಿ ಸಂಹಿತೆ ಜಾರಿಯಾಗುತ್ತದೆ. ಆದರೆ ಈ ಹೋರಾಟ ನಿಲ್ಲಿಸಲು ನಾವು ಸಿದ್ದರಿಲ್ಲ. ಹಾಗಾಗಿ 07/11/2019ರ ಗುರುವಾರ ನಮ್ಮ ಹಕ್ಕೊತ್ತಾಯಗಳನ್ನು ಸತ್ಯಾಗ್ರಹದ ಮೂಲಕ ಮುಖ್ಯಮಂತ್ರಿಯವರಿಗೆ ಸಲ್ಲಿಸಬೇಕಾಗಿದೆ ಹಾಗಾಗಿ ಸತ್ಯಾಗ್ರಹ ನಡೆಸಲಿದ್ದೆವೆ ಎಂದು ಮದ್ಯ ನಿಷೇಧ ಆಂದೋಲನದ ಸ್ವರ್ಣ ಭಟ್, ವಿರುಪಮ್ಮ, ಮೋಕ್ಷಮ್ಮ, ಅಭಯ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಸರಕಾರ ಇದರ ಮೇಲೆ ಯಾವುದು ಕ್ರಮ ಜರುಗಿಸದಿದ್ದಲ್ಲಿ ಡಿಸೆಂಬರ್ ತಿಂಗಳಲ್ಲಿ ಮುಂದಿನ ಭಾರೀ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದೇವೆ ಎಂದೂ ಸಹ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್ 25 ರಿಂದ ಪೋಲಿಸ್ ಇಲಾಖೆಯ ಅನುಮತಿ ಪಡೆಯಲು ಪ್ರಯತ್ನಿಸಲಾಗಿದೆ. ಈ ಕ್ಷಣಕ್ಕೂ ಪೋಲಿಸ್ ಇಲಾಖೆ ಈ ಹೋರಾಟ ಹತ್ತಿಕ್ಕಲು ಇನ್ನೂ ಅನುಮತಿ ನೀಡಿರುವುದಿಲ್ಲ. ಆದ್ದರಿಂದ ಮದ್ಯ ನಿಷೇಧ ಆಂದೋಲನ ದಿನಾಂಕ ನವೆಂಬರ್ 07ರ ಗುರುವಾರದಂದು ಬೆಂಗಳೂರಿನಲ್ಲಿ ಸತ್ಯಾಗ್ರಹ ಮಾಡಲು ತೀರ್ಮಾನಿಸಲಾಗಿದೆ. ಆದ್ದರಿಂದ ರೈಲ್ವೆ ನಿಲ್ದಾಣದಲ್ಲಿ ಸೇರಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ನಮ್ಮ ಹಕ್ಕೊತ್ತಾಯಗಳು
ಸಂವಿಧಾನದ 73ನೇ ತಿದ್ದುಪಡಿಯ ಆಶಯದಂತೆ ಅನುಷ್ಠಾನಗೊಳಿಸುವುದು (ಗ್ರಾಮಗಳ ಭವಿಷ್ಯವನ್ನು ನಿರ್ಧರಿಸುವ ಅಧಿಕಾರವನ್ನ ಗ್ರಾಮ ಸಭೆಗೆ ನೀಡುವುದು) ಉದಾ: ಗ್ರಾಮ ಪಂಚಾಯತಿಗಳು ಗ್ರಾಮ ಸಭೆಯ ಮೂಲಕ ಪಂಚಾಯತಿ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳು ಇರಬಾರದೆಂದು ನಿರ್ಧಾರ ತೆಗೆದುಕೊಳ್ಳಬಹುದು. (ಕಾನೂನು ಬಾಹಿರ, ಖಾಸಗಿ ಅಥವಾ ಸರಕಾರಿ ಮಳಿಗೆಗಳಾಗಿರಬಹುದು) ಈಗಾಗಲೇ ಗ್ರಾಮಸಭೆಗಳಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಗ್ರಾಮ ಪಂಚಾಯತಿಗಳಲ್ಲಿ ತಕ್ಷಣ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಬೇಕು.

ರಾಜ್ಯಗಳಲ್ಲಿ ಮದ್ಯ ಸೇವನೆ ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತದ ಸಂವಿಧಾನದ ಅನುಚ್ಛೇದ 47ರಲ್ಲಿ ರಾಜ್ಯಗಳಿಗೆ ನೀಡಲಾದ ನಿರ್ದೇಶನದಂತೆ “ಮದ್ಯ ಮುಕ್ತ ಕರ್ನಾಟಕ ನೀತಿಯತ್ತ” ಸಾಗುವ ಸಲುವಾಗಿ ಮೂರು ತಿಂಗಳೊಳಗೆ ಸಮಿತಿ ರಚಿಸಿ ಸರಕಾರದ ನೀತಿಯನ್ನು ಜಾರಿಗೊಳಿಸಬೇಕು.

ಈ ಕುರಿತು ಚರ್ಚಿಸಲು ಮಾನ್ಯ ಮುಖ್ಯಮಂತ್ರಿಗಳು ಮದ್ಯ ನಿಷೇಧ ಆಂದೋಲನದ ಸಂಘಟಕರೊಂದಿಗೆ ಕೂಡಲೇ ಸಭೆ ಕರೆಯಬೇಕು.

ಹಾಗಾಗಿ ಬಡಜನರು ತಮ್ಮ ಜೀವನ ಉಳಿಸಿಕೊಳ್ಳಲು ನಡೆಸುತ್ತಿರುವ ಈ ಹೋರಾಟಕ್ಕೆ ಬಂದು ನಮ್ಮ ದನಿ ಸರ್ಕಾರಕ್ಕೆ ಕೇಳುವಂತಾಗಲು ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಹಾರದಲ್ಲಿ ಜೆಡಿಯು ಮುಖಂಡನ ಗುಂಡಿಟ್ಟು ಹತ್ಯೆ: ಭುಗಿಲೆದ್ದ ಪ್ರತಿಭಟನೆ

0
ಜೆಡಿಯು ಯುವ ಮುಖಂಡನನ್ನು ಅಪರಿಚಿತ ದಾಳಿಕೋರರು ಗುಂಡಿಕ್ಕಿ  ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಸೌರಭ್ ಕುಮಾರ್ ಹತ್ಯೆಗೀಡಾದ ಜೆಡಿಯು ಯುವ ಮುಖಂಡ....