Homeಕರ್ನಾಟಕರಾಜ್ಯದಲ್ಲಿ ಎಂಇಎಸ್‌ ನಿಷೇಧಿಸಲು ಒತ್ತಾಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲ

ರಾಜ್ಯದಲ್ಲಿ ಎಂಇಎಸ್‌ ನಿಷೇಧಿಸಲು ಒತ್ತಾಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡದ ಬಾವುಟವನ್ನು ಸುಟ್ಟು ಅಪಮಾನ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ರಾಜ್ಯದಲ್ಲಿಯೂ ಶಿವಾಜಿ ಪ್ರತಿಮೆಗೆ ಮಸಿ ಬಳಿಯಲಾಗಿತ್ತು. ವಿವಾದ ಇಲ್ಲಿಗೆ ಮುಗಿಯದೇ ಬೆಳಗಾವಿಯ ಅನಗೋಳದಲ್ಲಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಎಂಇಎಸ್‌ನ ಕಾರ್ಯಕರ್ತರು ವಿರೂಪಗೊಳಿಸಿದ್ದರು. ಹೀಗಾಗಿ ಎಂಇಎಸ್‌ ಸಂಘಟನೆಯನ್ನು ರಾಜ್ಯದಲ್ಲಿ ಬ್ಯಾನ್‌ ಮಾಡಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ. 

ರಾಜ್ಯದಲ್ಲಿ ಕನ್ನಡಪರ ಹೋರಾಟಗಾರರು, ಚಿತ್ರನಟರು ಸೇರಿದಂತೆ ಕನ್ನಡಾಭಿಮಾನಿಗಳು ಎಂಇಎಸ್‌ ಸಂಘಟನೆಯನ್ನು ಬ್ಯಾನ್‌ ಮಾಡಬೇಕು ಒತ್ತಾಯ ಮಾಡಿದ್ದಾರೆ. ಇದಕ್ಕೆ ಸಹಮತ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಎಂಇಎಸ್‌ ಸಂಘಟನೆಯನ್ನು ಬ್ಯಾನ್‌ ಮಾಡಬೇಕು ಎಂದು ಕೇಳಿಬರುತ್ತಿರುವ ಕೂಗಿನ ಬಗ್ಗೆ ಬೆಳಗಾವಿಯಲ್ಲಿ ನಡೆಯುತ್ತಿರುವ ಸದನದಲ್ಲಿ ಧ್ವನಿ ಎತ್ತುತ್ತೇನೆ ಎಂದು ಹೇಳಿದ್ದಾರೆ. 

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಕರ್ನಾಟಕದ ನೆಲ, ಜಲ, ಭಾಷೆ, ಕಾನೂನನ್ನು ಗೌರವಿಸದ ಎಂ.ಇ.ಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂಬ ಕೂಗು ರಾಜ್ಯಾದ್ಯಂತ ಕೇಳಿಬರುತ್ತಿದೆ. ಸದನದಲ್ಲಿ ಈ ಬಗ್ಗೆ ಸರ್ಕಾರದ ಗಮನ ಸೆಳೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ಸಮಾನ ವೇತನ ಕಾನೂನು ಮಾಡಿ ಅಂದರೆ ಮೊಟ್ಟೆ, ಮಾಂಸ ತಿನ್ನಬೇಡಿ ಅಂತ ಕಾನೂನು ಮಾಡ್ತಾರೆ: ಬಾಲನ್‌

“ಸಂಗೊಳ್ಳಿ ರಾಯಣ್ಣ ಯಾವುದೇ ಒಂದು ಜಾತಿ, ಸಮಾಜಕ್ಕೆ ಸೀಮಿತವಾದವರಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗೈದ ಮಹಾನ್ ವ್ಯಕ್ತಿ. ಇಂಥವರ ಪ್ರತಿಮೆಯನ್ನು ವಿರೂಪಗೊಳಿಸೋದು ದೇಶ ದ್ರೋಹದ ಕೆಲಸವಾಗುತ್ತದೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಂದುವರೆದು “ರಾಜ್ಯದಲ್ಲಿ ಗುಪ್ತಚರ ಇಲಾಖೆ ಜೀವಂತವಾಗಿಲ್ಲ, ಕಾನೂನು, ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇಡೀ BJP ಸರ್ಕಾರವೇ ಬೆಳಗಾವಿಯಲ್ಲಿದ್ದರೂ ಎಂ.ಇ.ಎಸ್ ನವರು ಮಾರಕಾಸ್ತ್ರಗಳೊಂದಿಗೆ ಬಂದು ದಾಂಧಲೆ ಮಾಡುತ್ತಾರೆ ಎಂದರೆ ಏನರ್ಥ?” ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ #BanMES #BanShivasene ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಲಾಗುತ್ತಿದೆ.


ಇದನ್ನೂ ಓದಿ: ಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಸರ್ಕಾರ 5ಜಿ ಮೆಗಾ ಹಗರಣವನ್ನು ರೂಪಿಸುತ್ತಿದೆ: ಎಎಪಿ ಮುಖಂಡ ಸಂಜಯ್ ಸಿಂಗ್

0
2ಜಿ ಸ್ಪೆಕ್ಟ್ರಮ್ ಪ್ರಕರಣದಲ್ಲಿ 2012ರ ತೀರ್ಪನ್ನು ಮಾರ್ಪಾಡು ಮಾಡುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ...