HomeಮುಖಪುಟPFI ಮೇಲಿನ ನಿಷೇಧ: ರಾಜಕೀಯ ನಾಯಕರು ಏನಂತಾರೆ?

PFI ಮೇಲಿನ ನಿಷೇಧ: ರಾಜಕೀಯ ನಾಯಕರು ಏನಂತಾರೆ?

- Advertisement -
- Advertisement -

ಕೇಂದ್ರ ಸರ್ಕಾರವು ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಿಎಫ್‌ಐ ಮತ್ತು ಅದರ ಅಂಗಸಂಘಟನೆಗಳನ್ನು 5 ವರ್ಷ ನಿಷೇಧಿಸಿದೆ. ಈ ಕುರಿತು ಪರ-ವಿರೋಧದ ಪ್ರತಿಕ್ರಿಯಗಳು ಕೇಳಿಬಂದಿವೆ. ರಾಜಕೀಯ ನಾಯಕರು ಏನು ಹೇಳುತ್ತಾರೆ ಎಂಬುದರ ವರದಿ ಇಲ್ಲಿದೆ.

ಮೊದಲು ಆರ್‌ಎಸ್‌ಎಸ್‌ ನಿಷೇಧಿಸಿ: ಲಾಲೂ ಪ್ರಸಾದ್ ಯಾದವ್

ಪಿಎಫ್‌ಐನಂತೆ, ಆರ್‌ಎಸ್‌ಎಸ್ ಸೇರಿದಂತೆ ದ್ವೇಷ ಹರಡುವ ಎಲ್ಲಾ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು. ಮೊದಲನೆಯದಾಗಿ ಆರ್‌ಎಸ್‌ಎಸ್ ಅನ್ನು ನಿಷೇಧಿಸಬೇಕು. ಏಕೆಂದರೆ ಅದು ಪಿಎಫ್‌ಐಗಿಂತ ಕೆಟ್ಟ ಸಂಘಟನೆಯಾಗಿದೆ ಎಂದು ಆರ್‌ಜೆಡಿಯ ಹಿರಿಯ ಮುಖಂಡ ಲಾಲೂ ಪ್ರಸಾದ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.

ಆರ್‌ಎಸ್‌ಎಸ್ ಅನ್ನು ಈ ಹಿಂದೆ ಎರಡು ಬಾರಿ ನಿಷೇಧಿಸಲಾಗಿದೆ. ನೆನಪಿಡಿ, ಆರ್‌ಎಸ್‌ಎಸ್ ಅನ್ನು ಮೊದಲು ನಿಷೇಧಿಸಿದ್ದು ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪಿಎಫ್‌ಐ ನಿಷೇಧವನ್ನು ಬೆಂಬಲಿಸುವುದಿಲ್ಲ- ಅಸಾದುದ್ದೀನ್ ಓವೈಸಿ

ನಾನು ಯಾವಾಗಲೂ ಪಿಎಫ್‌ನ ಕಾರ್ಯವಿಧಾನವನ್ನು ವಿರೋಧಿಸುತ್ತೇನೆ ಮತ್ತು ಪ್ರಜಾತಾಂತ್ರಿಕ ವಿಧಾನದ ನಂಬಿಕೆ ಇಟ್ಟಿದ್ದೇನೆ. ಆದರೆ PFI ಮೇಲಿನ ಈ ನಿಷೇಧವನ್ನು ಬೆಂಬಲಿಸಲಾಗುವುದಿಲ್ಲ ಎಂದು AIMIM ಪಕ್ಷದ ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚುನಾವಣಾ ತಂತ್ರ – ಸಾಗರೀಕ ಘೋಷ್

ಕಳೆದ 8 ವರ್ಷಗಳಿಂದ PFI ತನ್ನ ಚಟುವಟಿಕೆಗಳನ್ನು ನಡೆಸುತ್ತಿದೆ. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಮಾತನಾಡಲಿಲ್ಲ. ಈಗ ಗುಜರಾತ್‌ ಮತ್ತು ಕರ್ನಾಟಕದ ಚುನಾವಣೆ ಮುಂದಿರುವಾಗ ಇದ್ದಕ್ಕಿದ್ದಂತೆ PFI ಅನ್ನು ನಿಷೇಧಿಸಲಾಗಿದೆ. ಇದರಿಂದ ಏನು ಬದಲಾಗುತ್ತದೆ ಎಂದು ಪತ್ರಕರ್ತೆ ಸಾಗರೀಕ ಘೋಷ್ ಪ್ರಶ್ನಿಸಿದ್ದಾರೆ.

ಪಿಎಫ್‌ಐ ಕಚೇರಿಗಳನ್ನು ಮುಚ್ಚಿಸುತ್ತಿದ್ದೇವೆ – ಹಿಮಂತ ಬಿಸ್ವಾ ಶರ್ಮಾ

ಅಸ್ಸಾಂ ಸರ್ಕಾರವು ಈಗಾಗಲೇ ಮುಂದಿನ ಕ್ರಮಗಳನ್ನು ಪ್ರಾರಂಭಿಸಿದೆ. ನಾವು ಕಮ್ರೂಪ್, ಬಕ್ಸಾ ಮತ್ತು ಕರೀಮ್‌ಗಂಜ್‌ನಲ್ಲಿರುವ ಪಿಎಫ್‌ಐ ಮತ್ತು ಸಿಎಫ್‌ಐ ಕಚೇರಿಗಳನ್ನು ಬಂದ್ ಮಾಡಿದ್ದೇವೆ. ಪಿಎಫ್‌ಐ ಮುಖಂಡರನ್ನು ಬಂಧಿಸುತ್ತಿದ್ದೇವೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

PFI ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತದೆ – ಏಕನಾಥ್ ಶಿಂಧೆ

ಪಾಕಿಸ್ತಾನ್ ಜಿಂದಾಬಾದ್’ ಎನ್ನುವ ಪಿಎಫ್‌ಐಗೆ ದೇಶದಲ್ಲಿ ಅಂತಹ ಘೋಷಣೆಗಳನ್ನು ಕೂಗುವ ಹಕ್ಕು ಇಲ್ಲ. ಈ ಬಗ್ಗೆ ಗೃಹ ಸಚಿವಾಲಯ ಕ್ರಮ ಕೈಗೊಳ್ಳಲಿದೆ. ಕೇಂದ್ರ ಸರ್ಕಾರ ಸರಿಯಾದ ನಿರ್ಧಾರ ತೆಗೆದುಕೊಂಡಿದೆ. ಇದು ದೇಶಭಕ್ತರ ದೇಶ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಪ್ರತಿಕ್ರಿಯಿಸಿದ್ದಾರೆ.

RSS ಅನ್ನೂ ನಿಷೇಧಿಸಲಾಗುವುದೇ? – ಎಂ.ವಿ ಗೋವಿಂದನ್

ಎಲ್ಲಾ ರೀತಿಯ ಕೋಮುವಾದಗಳು ಅಪಾಯಕಾರಿ. ಬಹುಸಂಖ್ಯಾತ ಕೋಮುವಾದ ಮತ್ತು ಅಲ್ಪಸಂಖ್ಯಾತ ಕೋಮುವಾದ ಸಹ ಸಮಾನವಾಗಿ ಅಪಾಯಕಾರಿಯಾಗಿವೆ. ಸಂಘಟನೆಯನ್ನು ನಿಷೇಧಿಸುವುದರಿಂದ ಅದರ ಸಿದ್ಧಾಂತ ಕೊನೆಗೊಳ್ಳುವುದಿಲ್ಲ. ಅವರು ಹೊಸ ಹೆಸರು ಅಥವಾ ಗುರುತಿನೊಂದಿಗೆ ಹಿಂತಿರುಗುತ್ತಾರೆ. ನೀವು ಎಲ್ಲಾ ಕೋಮುವಾದಿ ಸಂಘಟನೆಗಳನ್ನು ನಿಷೇಧಿಸುವ ತರ್ಕವನ್ನು ಅನುಸರಿಸಿದರೆ, RSS ಮೊದಲು ಬರುತ್ತದೆ. ಅದನ್ನೂ ನಿಷೇಧಿಸಲಾಗುವುದೇ?” ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್ ಪ್ರಶ್ನಿಸಿದ್ದಾರೆ.

ಪಿಎಫ್‌ಐ ನಿಷೇಧ ಸ್ವಾಗತಾರ್ಹ – ಬಸವರಾಜ ಬೊಮ್ಮಾಯಿ

ಪಿಎಫ್‌ಐ ಸಂಘಟನೆ ಮೇಲಿನ ನಿಷೇಧವನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾಗತಿಸಿದ್ದಾರೆ. “ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.

ಪಿ.ಎಫ್.ಐ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ. ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ. ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ. ವಿರೋಧಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿ.ಪಿ.ಎಂ ಎಲ್ಲರೂ ಕೂಡ ಪಿ.ಎಫ್.ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ಹಾಗಾಗಿ ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

RSS ಅನ್ನು ಕೂಡ ನಿಷೇಧಿಸಬೇಕು – ಕೋಡಿಕುನ್ನಿಲ್ ಸುರೇಶ್

ಕೇಂದ್ರ ಸರ್ಕಾರವು ಮಂಗಳವಾರ ಸಂಜೆ ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಅಂಗಸಂಘಟನೆಗಳನ್ನು 5 ವರ್ಷ ನಿಷೇಧಿಸಿರುವುದರ ಕುರಿತು ಪ್ರತಿಕ್ರಿಯಿಸಿರುವ ಕೇರಳದ ಮಲಪ್ಪುರಂ ಸಂಸದ ಕೋಡಿಕುನ್ನಿಲ್ ಸುರೇಶ್, RSS ಅನ್ನು ಕೂಡ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪಿಎಫ್‌ಐ ಒಂದನ್ನೇ ಬ್ಯಾನ್ ಮಾಡಿದರೆ ಪರಿಹಾರ ಸಿಗುವುದಿಲ್ಲ. ಆರ್‌ಎಸ್‌ಎಸ್‌ ಅನ್ನು ಸಹ ಬ್ಯಾನ್ ಮಾಡಬೇಕು. ಏಕೆಂದರೆ ಆರ್‌ಎಸ್‌ಎಸ್‌ ಸಹ ಇಡೀ ದೇಶಾದ್ಯಂತ ಹಿಂದೂ ಕೋಮುವಾದವನ್ನು ಹರಡುತ್ತಿದೆ. ಆರ್‌ಎಸ್‌ಎಸ್‌ ಮತ್ತು ಪಿಎಫ್‌ಐ ಎರಡೂ ಸಹ ಸಮಾನವಾಗಿದ್ದು ಎರಡನ್ನು ನಿಷೇಧಿಸಬೇಕು, ಆದರೆ ಕೇವಲ ಪಿಎಫ್‌ಐ ಅನ್ನು ನಿಷೇಧಿಸುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...