ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಥರದ ಸಂಘಟನೆಗಳನ್ನು ನಿಷೇಧಿಸಬೇಕೆಂಬ ನಿರ್ಣಯವನ್ನು ಅಖಿಲ ಭಾರತ ಸೂಫಿ ಸಜ್ಜದನಾಶಿನ್ ಕೌನ್ಸಿಲ್ (ಎಐಎಸ್‌ಎಸ್‌ಸಿ) ಸೇರಿದಂತೆ ಧಾರ್ಮಿಕ ಮುಖಂಡರು ತಾಳಿದ್ದಾರೆ.
“ಪಿಎಫ್‌ಐ ಥರದ ಸಂಘಟನೆಗಳು ವಿಭಜಕ ಅಜೆಂಡಾ ಹೊಂದಿವೆ. ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ” ಎಂಬ ಅಭಿಪ್ರಾಯ ನವದೆಹಲಿಯಲ್ಲಿ ಶನಿವಾರ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ವ್ಯಕ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ, ವಿಭಜಕ ಕಾರ್ಯಸೂಚಿಯನ್ನು ಅನುಸರಿಸುವ, ನಮ್ಮ ನಾಗರಿಕರ ನಡುವೆ ವೈಷಮ್ಯವನ್ನು ಸೃಷ್ಟಿಸುವ ಪಿಎಫ್‌ಐ ಮತ್ತು ಅಂತಹ ಯಾವುದೇ ಸಂಘಟನೆಗಳನ್ನು ನಿಷೇಧಿಸಬೇಕು. ದೇಶದ ಕಾನೂನಿನ ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಎಐಎಸ್‌ಎಸ್‌ಸಿ ಅಭಿಪ್ರಾಯ ತಾಳಿದೆ ಎಂದು ‘ದಿ ವೈರ್’ ವರದಿ ಮಾಡಿದೆ.
ಯಾವುದಾದರೂ ಚರ್ಚೆಯ ವೇಳೆ ಯಾರಾದರೂ ಯಾವುದೇ ದೇವರುಗಳನ್ನು, ಪ್ರವಾದಿಗಳನ್ನು ಟಾರ್ಗೆಟ್ ಮಾಡಿ ಮಾತನಾಡಿದರೆ ಜನರು ಆ ಹೇಳಿಕೆಗಳನ್ನು ಖಂಡಿಸಬೇಕು ಎಂದು ಸೂಫಿಗಳು ಒತ್ತಾಯಿಸಿದ್ದಾರೆ.
ಎಐಎಸ್‌ಎಸ್‌ಸಿ ಮುಖ್ಯಸ್ಥ ಸೈಯದ್ ನಾಸಿರುದ್ದೀನ್ ಚಿಶ್ತಿ ಮಾತನಾಡಿ, “ಭಾರತದ ಜವಾಬ್ದಾರಿಯುತ ನಾಗರಿಕರಾಗಲು ತಮ್ಮ ಸಮುದಾಯವನ್ನು, ವಿಶೇಷವಾಗಿ ಯುವಜನರಿಗೆ ಮಾರ್ಗದರ್ಶನ ನೀಡುವ ಜವಾಬ್ದಾರಿಯನ್ನು ಎಲ್ಲಾ ಧಾರ್ಮಿಕ ಮುಖಂಡರು ಹೊಂದಿದ್ದಾರೆ ಎಂಬ ಸಂದೇಶವನ್ನು ನಾವು ನೀಡಲು ಬಯಸುತ್ತೇವೆ” ಎಂದಿದ್ದಾರೆ. (ಇಂಡಿಯಾ ಟುಡೇ ವರದಿ)
“ಧರ್ಮಗಳು ಮತ್ತು ಅವುಗಳ ಅನುಯಾಯಿಗಳ ವಿರುದ್ಧ ದ್ವೇಷವನ್ನು ಪ್ರಚೋದಿಸಲು ಸಾಮಾಜಿಕ ಮಾಧ್ಯಮಗಳನ್ನು ಬಳಸಲಾಗುತ್ತಿದೆ ಎಂಬುದನ್ನು ಗಮನಿಸಿದ್ದೇವೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಗಳನ್ನು ಕೈಗೊಂಡು ಅಹಿತಕರ ಘಟನೆಗಳ ತಡೆಗೆ ಕ್ರಮ ಕೈಗೊಳ್ಳಬೇಕು” ಎಂದು ಅವರು ಮನವಿ ಮಾಡಿದ್ದಾರೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ. “ದೇಶದ ಮೇಲೆ ಪ್ರತಿಕೂಲ ಪರಿಣಾಮ ಬೀರುವ, ಅಂತರರಾಷ್ಟ್ರೀಯ ಪರಿಣಾಮಗಳನ್ನು ಉಂಟು ಮಾಡುವ, ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿರುವ ತೀವ್ರಗಾಮಿ ಶಕ್ತಿಗಳನ್ನು ಎದುರಿಸಲು ವಿವಿಧ ಧರ್ಮಗಳ ನಾಯಕರು ಕ್ರಮ ವಹಿಸಬೇಕು” ಎಂದು ಆಶಿಸಿದರು.
“ಕೆಲವರು ಧರ್ಮದ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಾರೆ. ಅದು ಇಡೀ ದೇಶದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಸಹ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಅವರು ಹೇಳಿದರು.
ಇದನ್ನೂ ಓದಿರಿ: ಸುರತ್ಕಲ್ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು
“ಈ ಘಟನೆಗಳನ್ನು ನೋಡಿ ನಾವು ಮೂಕ ಪ್ರೇಕ್ಷಕರಾಗಲು ಸಾಧ್ಯವಿಲ್ಲ. ಧಾರ್ಮಿಕ ದ್ವೇಷವನ್ನು ಎದುರಿಸಲು, ನಾವು ಒಟ್ಟಾಗಿ ಕೆಲಸ ಮಾಡಬೇಕು. ಪ್ರತಿಯೊಂದು ಧಾರ್ಮಿಕ ಸಂಸ್ಥೆಯನ್ನು ಭಾರತದ ಭಾಗವಾಗಿ ಭಾವಿಸಬೇಕು. ಇದರಲ್ಲಿ ನಾವು ಒಟ್ಟಿಗೆ ಸಾಗಬೇಕು” ಎಂದು ದೋವಲ್ ಹೇಳಿದ್ದಾರೆ. ಭಾರತದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರ ಹೇಳಿಕೆ ಹೊರಬಿದ್ದಿದೆ.
ಹೆಚ್ಚುತ್ತಿರುವ ಧಾರ್ಮಿಕ ಅಸಹಿಷ್ಣುತೆಗೆ ಸಂಬಂಧಿಸಿದಂತೆ ಗಂಭೀರವಾದ ಚರ್ಚೆಯನ್ನು ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಸೇರಿದಂತೆ ವಿವಿಧ ಧರ್ಮಗಳ ಪ್ರತಿನಿಧಿಗಳ ನಡುವೆ ನಡೆಸುವುದು ಸಮ್ಮೇಳನದ ಉದ್ದೇಶವಾಗಿದೆ ಎಂದು ಸಂಘಟಕರು ಪಿಟಿಐಗೆ ಪ್ರತಿಕ್ರಿಯಿಸಿದ್ದಾರೆ.
ಶಾಂತಿ, ಸೌಹಾರ್ದತೆಯ ಸಂದೇಶವನ್ನು ಸಾರಲು, ಮೂಲಭೂತವಾದಿ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲಾ ಧರ್ಮಗಳನ್ನು ಒಳಗೊಂಡಂತೆ ಹೊಸ ಸಂಸ್ಥೆಯನ್ನು ರಚಿಸುವ ನಿರ್ಣಯವನ್ನು ಸಮ್ಮೇಳನದಲ್ಲಿ ಪ್ರಸ್ತಾಪಿಸಲಾಗಿದೆ.



Even ban RSS
Better ban RSS. It’s good for India