Homeಅಂತರಾಷ್ಟ್ರೀಯವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗೆ ನಿಷೇಧ | ಇಸ್ರೇಲ್ ನಿರ್ಧಾರಕ್ಕೆ ಜಾಗತಿಕ ಖಂಡನೆ; ಹೊರಗುಳಿದ ಭಾರತ!

ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗೆ ನಿಷೇಧ | ಇಸ್ರೇಲ್ ನಿರ್ಧಾರಕ್ಕೆ ಜಾಗತಿಕ ಖಂಡನೆ; ಹೊರಗುಳಿದ ಭಾರತ!

- Advertisement -
- Advertisement -

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರನ್ನು ಇಸ್ರೇಲ್ ಭೂಪ್ರದೇಶದಿಂದ ನಿಷೇಧಿಸುವ ಇಸ್ರೇಲ್ ಕ್ರಮವನ್ನು ಖಂಡಿಸುವ ಪತ್ರಕ್ಕೆ ಸಹಿ ಹಾಕುವುದರಿಂದ ದೂರವಿರಲು ಭಾರತ ನಿರ್ಧಾರಿಸಿದೆ. ಭಾರತ ಸರ್ಕಾರದ ಈ ಕ್ರಮವನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ಭಾನುವಾರ ಕಟುವಾಗಿ ಪ್ರಶ್ನಿಸಿದ್ದಾರೆ. ವಿಶ್ವಸಂಸ್ಥೆ ಕಾರ್ಯದರ್ಶಿಗೆ ಇಸ್ರೇಲ್ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚಿದಂಬರಂ ಅವರು ಭಾರತದ ನಿಲುವು “ವಿವರಿಸಲಾಗದ ವಿಚಾರ” ಎಂದು ಬಣ್ಣಿಸಿದ್ದು, ಭಾರತವು BRICSನ ದೇಶಗಳಾದ ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾ ಹಾಗೂ ಹೆಚ್ಚಿನ ಜಾಗತಿಕ ದಕ್ಷಿಣದ ದೇಶಗಳ ನಿಲುವುಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.  

ಇದನ್ನೂ ಓದಿ: ಮತಾಂಧತೆ ಪ್ರಚೋದಿಸುವ ಘಟನೆ ದೇಶದಲ್ಲಿ ಹೆಚ್ಚುತ್ತಿವೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್

“ಬ್ರಿಕ್ಸ್‌ನ ದೇಶಗಳಾದ ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದೊಂದಿಗೆ ಭಾರತವು ತನ್ನ ರ‍್ಯಾಂಕ್‌ಗಳನ್ನು ಮುರಿದುಕೊಂಡಿದೆ. ಭಾರತವು ಸೌಹಾರ್ದ ಮತ್ತು ಸ್ನೇಹಯುತ ಸಂಬಂಧವನ್ನು ಹೊಂದಿರುವ ದಕ್ಷಿಣ ಏಷ್ಯಾ, ಪಶ್ಚಿಮ ಏಷ್ಯಾ ಮತ್ತು ಆಫ್ರಿಕಾದ ಹಲವು ದೇಶಗಳೊಂದಿಗಿನ ರ‍್ಯಾಂಕ್‌ಗಳನ್ನು ಮುರಿದಿದೆ” ಎಂದು ಚಿದಂಬರಂ ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ. ವಿಶ್ವಸಂಸ್ಥೆ ಕಾರ್ಯದರ್ಶಿಗೆ ಇಸ್ರೇಲ್ ನಿಷೇಧ

ವಿಶ್ವಸಂಸ್ಥೆಯ ಮುಖ್ಯಸ್ಥರ ಕಚೇರಿಯ ನಿಷ್ಪಕ್ಷಪಾತತೆಯನ್ನು ಒತ್ತಿ ಹೇಳಿದ ಚಿದಂಬರಂ, “ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಪಕ್ಷಾತೀತ ಕಚೇರಿಯಾಗಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಹೊರಹಾಕಲು ವಿಶ್ವಸಂಸ್ಥೆ ಏಕೈಕ ಅಂತರರಾಷ್ಟ್ರೀಯ ವೇದಿಕೆಯಾಗಿದೆ. ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಅನ್ನು ಇಸ್ರೇಲ್ ಪ್ರವೇಶಿಸದಂತೆ ತಡೆಯುವಲ್ಲಿ ಮಾಡಿರುವ ಇಸ್ರೇಲ್‌ನ ನಿರ್ಧಾರ ಸಂಪೂರ್ಣವಾಗಿ ತಪ್ಪಾಗಿದೆ” ಎಂದು ಹೇಳಿದ್ದಾರೆ.

ಇಸ್ರೇಲ್ ನಿರ್ಧಾರವನ್ನು ಖಂಡಿಸುವ ಪತ್ರಕ್ಕೆ ಚಿಲಿ ಸಹಿಹಾಕಿದ್ದು, ಜೊತೆಗೆ ಯುರೋಪಿಯನ್ ಮತ್ತು ಆಫ್ರಿಕನ್ ರಾಷ್ಟ್ರಗಳು ಸೇರಿದಂತೆ 104 ದೇಶಗಳು ಕೂಡಾ ಸಹಿ ಹಾಕಿದೆ. ಈ ಪತ್ರಕ್ಕೆ ಸಹಿ ಹಾಕಿದ ಮೊದಲ ಪಟ್ಟಿಯಲ್ಲಿ ಭಾರತವೂ ಸೇರಿರಬೇಕು ಎಂದು ಚಿದಂಬರಂ ವಾದಿಸಿದ್ದಾರೆ. ಇಸ್ರೇಲ್ ಅನ್ನು ಟೀಕಿಸುವ ನಿರ್ಣಯಗಳ ಮೇಲೆ ಭಾರತವು ಈ ಹಿಂದೆ ಕೂಡಾ ಗೈರುಹಾಜರಾಗಿದ್ದು, ಈ ಪ್ರಕರಣ ತೀರಾ ಇತ್ತೀಚಿನದಗಿದೆ.

ಇದನ್ನೂ ಓದಿ: ಬಿಜೆಪಿ ಭಯೋತ್ಪಾದಕ ಪಕ್ಷ; ದಲಿತರ ಮೇಲಿನ ದಾಳಿಗೆ ಬೆಂಬಲಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಇಸ್ರೇಲ್‌ನ ನಿರ್ಧಾರವನ್ನು ಖಂಡಿಸಿರು ಪತ್ರವು, ಅಂತಹ ಕ್ರಮಗಳು ಸಂಘರ್ಷಗಳಿಗೆ ಮಧ್ಯಸ್ಥಿಕೆ ವಹಿಸುವ ಮತ್ತು ಮಾನವೀಯ ನೆರವು ನೀಡುವ ವಿಶ್ವಸಂಸ್ಥೆಯ ಸಾಮರ್ಥ್ಯವನ್ನು ದುರ್ಬಲಗೊಳಿಸುತ್ತದೆ ಎಂದು ಪ್ರತಿಪಾದಿಸಿದೆ.

ಇತ್ತೀಚೆಗೆ ಇಸ್ರೇಲ್ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಯನ್ನು “ನಿಸ್ಸಂದಿಗ್ಧವಾಗಿ ಖಂಡಿಸಲು” ವಿಶ್ವಸಂಸ್ಥೆ ವಿಫಲವಾಗಿದೆ ಎಂದು ಉಲ್ಲೇಖಿಸಿ ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಅವರು ಗುಟೆರಸ್ ಅವರನ್ನು ‘ಪರ್ಸನಾ ನಾನ್ ಗ್ರಾಟಾ’ ಎಂದು ಘೋಷಿಸುವ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ದಾಳಿ ಮಾಡಿದಾಗ ಹಮಾಸ್ ಮಾಡಿದ ದೌರ್ಜನ್ಯವನ್ನು ಖಂಡಿಸದ ಯುಎನ್ ಮುಖ್ಯಸ್ಥರನ್ನು ಕಾಟ್ಜ್ ಖಂಡಿಸಿದ್ದಾರೆ. “ಇಸ್ರೇಲ್‌ನ ಮೇಲೆ ಇರಾನ್‌ನ ಘೋರ ದಾಳಿಯನ್ನು ನಿಸ್ಸಂದಿಗ್ಧವಾಗಿ ಖಂಡಿಸಲು ಸಾಧ್ಯವಾಗದ ಯಾರಾದರೂ, ಪ್ರಪಂಚದ ಪ್ರತಿಯೊಂದು ದೇಶಗಳು ಮಾಡಿದಂತೆ, ಇಸ್ರೇಲಿ ನೆಲದಲ್ಲಿ ಕಾಲಿಡಲು ಅರ್ಹರಲ್ಲ” ಎಂದು ಅವರು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ವಿಡಿಯೊ ನೋಡಿ: ರಾಯಚೂರಿನಲ್ಲಿ AIIMS ಸ್ಥಾಪಿಸದೆ ವಂಚನೆ ಮಾಡುತ್ತಿರುವ ಸರ್ಕಾರ: ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿಭಟನೆಯ ದನಿ

ವಿಡಿಯೊ ನೋಡಿ: ರಾಯಚೂರಿನಲ್ಲಿ AIIMS ಸ್ಥಾಪಿಸದೆ ವಂಚನೆ ಮಾಡುತ್ತಿರುವ ಸರ್ಕಾರ: ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿಭಟನೆಯ ದನಿ

ವಿಡಿಯೊ ನೋಡಿ: ರಾಯಚೂರಿನಲ್ಲಿ AIIMS ಸ್ಥಾಪಿಸದೆ ವಂಚನೆ ಮಾಡುತ್ತಿರುವ ಸರ್ಕಾರ: ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿಭಟನೆಯ ದನಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...