Homeಮುಖಪುಟಮಹಾರಾಷ್ಟ್ರ| ಸಂವಿಧಾನ ಪ್ರತಿಕೃತಿ ಧ್ವಂಸ ವಿರೋಧಿಸಿ ಬಂದ್; ಪರ್ಭಾನಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಮಹಾರಾಷ್ಟ್ರ| ಸಂವಿಧಾನ ಪ್ರತಿಕೃತಿ ಧ್ವಂಸ ವಿರೋಧಿಸಿ ಬಂದ್; ಪರ್ಭಾನಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

- Advertisement -
- Advertisement -

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಮೆ ಬಳಿ ಇರಿಸಲಾಗಿದ್ದ ಸಂವಿಧಾನದ ಪ್ರತಿಕೃತಿಯನ್ನು ಧ್ವಂಸಗೊಳಿಸಿರುವುದನ್ನು ಪ್ರತಿಭಟಿಸಿ ಬುಧವಾರ ಕರೆ ನೀಡಲಾಗಿದ್ದ ಬಂದ್ ವೇಳೆ ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಪರ್ಭಾನಿ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, 40 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಅಂಗಡಿಗಳ ಮೇಲೆ ಕಲ್ಲು ತೂರಿದರು. ಪೊಲೀಸರು ಅಶ್ರುವಾಯು ಸಿಡಿಸಿದರು. ಅಧಿಕಾರಿಗಳು ಭಾರತೀಯ ನಾಗ್ರಿಕ್ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿದ್ದಾರೆ. ಕೆಲವು ಗಂಟೆಗಳಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತಂದರೂ ಮುನ್ನೆಚ್ಚರಿಕೆಯಾಗಿ ರಾಜ್ಯ ಮೀಸಲು ಪೊಲೀಸ್ ಪಡೆಯ ಎರಡು ತುಕಡಿಗಳನ್ನು ಕರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ಸಂಜೆ ಪರ್ಭಾನಿ ತಹಸಿಲ್‌ನ ಮುರ್ತಿಜಾಪುರ ಗ್ರಾಮದ ನಿವಾಸಿ ಸೋಪಾನ್ ಪವಾರ್ ಅವರು ಜಿಲ್ಲಾಧಿಕಾರಿ ಕಚೇರಿ ಬಳಿಯ ಅಂಬೇಡ್ಕರ್ ಪ್ರತಿಮೆ ಬಳಿ ಗಾಜಿನ ಪೆಟ್ಟಿಗೆಯಲ್ಲಿ ಇರಿಸಲಾಗಿದ್ದ ಸಂವಿಧಾನದ ಸಿಮೆಂಟ್ ಪ್ರತಿಕೃತಿಯನ್ನು ಧ್ವಂಸಗೊಳಿಸಿದ್ದರಿಂದ ಅಶಾಂತಿ ಪ್ರಾರಂಭವಾಯಿತು. ಸ್ಥಳೀಯ ಕಾರ್ಯಕರ್ತರು ಪವಾರ್ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಂಗಳವಾರ ಸಂಜೆ ಪ್ರತಿಭಟನಾಕಾರರು ರಸ್ತೆಗಳನ್ನು ತಡೆದು ಕೆಲವು ವಾಹನಗಳನ್ನು ಧ್ವಂಸಗೊಳಿಸಿದ್ದರಿಂದ ಘಟನೆಯು ಕೋಲಾಹಲಕ್ಕೆ ಕಾರಣವಾಯಿತು. ಬುಧವಾರ ಬಂದ್‌ಗೆ ಕರೆ ನೀಡಿದ್ದರು. ಬುಧವಾರ ಮಧ್ಯಾಹ್ನದವರೆಗೂ ಬಂದ್ ಬಹುತೇಕ ಶಾಂತಿಯುತವಾಗಿಯೇ ಇದ್ದಾಗ, ಮಧ್ಯಾಹ್ನ 1 ಗಂಟೆ ಸುಮಾರಿಗೆ ಹಿಂಸಾಚಾರ ಭುಗಿಲೆದ್ದಿತು. ಗುಂಪು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿತು ಮತ್ತು ಅಂಗಡಿಗಳ ಹೊರಗೆ ವಾಹನಗಳು, ಪಿವಿಸಿ ಪೈಪ್‌ಗಳಿಗೆ ಬೆಂಕಿ ಹಚ್ಚಿತು. ಟ್ರಕ್‌ಗಳು, ನಾಲ್ಕು ಚಕ್ರಗಳು ಮತ್ತು ದ್ವಿಚಕ್ರ ವಾಹನಗಳು ಸೇರಿದಂತೆ 15 ಕ್ಕೂ ಹೆಚ್ಚು ವಾಹನಗಳಿಗೆ ಗುಂಪು ಹಾನಿಗೊಳಿಸಿತು.

ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಮೂಲಕ ಸಿಡಿಸಿದರೆ, ಜಿಲ್ಲಾಧಿಕಾರಿ ರಘುನಾಥ್ ಗಾವಡೆ ಅವರು ಸಾರ್ವಜನಿಕ ಸಭೆಗಳನ್ನು ನಿಷೇಧಿಸಲು ಬಿಎನ್‌ಎಸ್‌ಎಸ್‌ನ ಸೆಕ್ಷನ್ 163 ಅನ್ನು ವಿಧಿಸಿ, ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದರು. ಶಾಂತಿ-ಪುನಃಸ್ಥಾಪನೆ ಕ್ರಮಗಳ ಬಗ್ಗೆ ಚರ್ಚಿಸಲು ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಸಂಸ್ಥೆಗಳೊಂದಿಗೆ ಸಭೆಯನ್ನು ಕರೆದರು. ಆದರೆ, 50ಕ್ಕೂ ಹೆಚ್ಚು ಮಹಿಳಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಧ್ವಂಸಗೊಳಿಸಿದರು.

ನಾಂದೇಡ್ ವಲಯದ ಉಪ ಮಹಾನಿರೀಕ್ಷಕರಾದ ಶಹಾಜಿ ಉಮಾಪ್ ಅವರು ಬುಧವಾರ ಪರ್ಭಾನಿಗೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಸಂಜೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 40 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ತಿಳಿಸಿದರು.

ಆನಂದರಾಜ್ ಅಂಬೇಡ್ಕರ್ ನೇತೃತ್ವದ ರಿಪಬ್ಲಿಕನ್ ಸೇನೆಯ ಉಪಾಧ್ಯಕ್ಷ ವಿಜಯ್ ವಾಕೋಡೆ, ಆರೋಪಿ ಪವಾರ್ ಅವರನ್ನು ಮಾನಸಿಕ ಅಸ್ವಸ್ಥ ಎಂದು ಘೋಷಿಸುವ ಮೂಲಕ ಪೊಲೀಸರು ವಿಷಯವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

“ಈ ವಿಷಯಗಳನ್ನು ಪರಿಶೀಲಿಸುವುದು ಮತ್ತು ಪ್ರಮಾಣೀಕರಿಸುವುದು ವೈದ್ಯರ ಕೆಲಸ. ಪೊಲೀಸರು ಯಾಕೆ ಈ ಸರ್ಟಿಫಿಕೇಟ್ ಕೊಡುತ್ತಿದ್ದಾರೆ? ಈ ವಿಷಯವನ್ನು ಮುಚ್ಚಿಹಾಕಲು ಜನರು ಈ ಕ್ರಮದಿಂದ ಕೋಪಗೊಂಡಿದ್ದರು. ಅವರಲ್ಲಿ ಕೆಲವರು ಈ ಅಶಾಂತಿಯನ್ನು ಹಿಂಸೆಯನ್ನು ಹರಡಲು ಬಳಸಿಕೊಂಡರು. ನಗರದಲ್ಲಿ ಶಾಂತಿ ನೆಲೆಸುವಂತೆ ನಾವು ಜನರಿಗೆ ಮನವಿ ಮಾಡಿದ್ದೇವೆ” ಎಂದು ವಾಕೋಡೆ ಹೇಳಿದರು.

“ನಮ್ಮ ಕಾರ್ಯಕರ್ತರು ಅವನನ್ನು ಹಿಡಿದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದರಿಂದ, ಅವರು ಮಾನಸಿಕವಾಗಿ ಅಸ್ಥಿರವಾಗಿಲ್ಲ ಎಂದು ನಾವು ಭಾವಿಸುತ್ತೇವೆ. ಅಶಾಂತಿ ಹರಡಲು ಯಾರೋ ಅವನನ್ನು ಕಳುಹಿಸಿದ್ದಾರೆ. ಪೊಲೀಸರು ನಾರ್ಕೋ ಅನಾಲಿಸಿಸ್ ಪರೀಕ್ಷೆ ಮೂಲಕ ಯಾರು ಎಂಬುದನ್ನು ಪತ್ತೆ ಮಾಡಬೇಕು. ನಾವು ಅವರನ್ನು ಸಿವಿಲ್ ಆಸ್ಪತ್ರೆಗೆ ಕಳುಹಿಸಿರುವುದರಿಂದ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವಂತೆ ಒತ್ತಾಯಿಸಿದರು” ಎಂದು ಅವರು ಹೇಳಿದರು.

ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಮುನ್ನೆಚ್ಚರಿಕೆಯಾಗಿ ರಾಜ್ಯ ಮೀಸಲು ಪೊಲೀಸ್ ಪಡೆಯ (ಎಸ್‌ಆರ್‌ಪಿಎಫ್) ಎರಡು ಹೆಚ್ಚುವರಿ ತುಕಡಿಗಳನ್ನು ಕರೆಸಲಾಗಿದೆ ಎಂದು ಪರ್ಭಾನಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ರಘುನಾಥ್ ಗಾವಡೆ ತಿಳಿಸಿದ್ದಾರೆ.

“ಪ್ರಾಥಮಿಕವಾಗಿ, ಆರೋಪಿಯು ಕುಡಿದು ಮಾನಸಿಕವಾಗಿ ಅಸ್ಥಿರನಾಗಿದ್ದನು. ಆದರೆ, ಸಿವಿಲ್ ಆಸ್ಪತ್ರೆಯಲ್ಲಿ ವೈದ್ಯರು ವೈದ್ಯಕೀಯ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ” ಎಂದು ಗಾವಡೆ ಹೇಳಿದರು.

ಇದನ್ನೂ ಓದಿ; ರಾಜಸ್ಥಾನ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದು 5 ವರ್ಷದ ಬಾಲಕ ಸಾವು, 56 ಗಂಟೆಗಳ ಕಾರ್ಯಾಚರಣೆ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...