Homeಚಳವಳಿಮ್ಯಾನ್ ಹೋಲ್ ನಲ್ಲಿ ಸತ್ತವರ ಪರವಾಗಿ ಟ್ವೀಟ್ ಮಾಡಿದ ಉದ್ಯಮಿ, ಯಂತ್ರಗಳಿಗಾಗಿ ಹಣ ಸಹಾಯ ಮಾಡಲು...

ಮ್ಯಾನ್ ಹೋಲ್ ನಲ್ಲಿ ಸತ್ತವರ ಪರವಾಗಿ ಟ್ವೀಟ್ ಮಾಡಿದ ಉದ್ಯಮಿ, ಯಂತ್ರಗಳಿಗಾಗಿ ಹಣ ಸಹಾಯ ಮಾಡಲು ಮುಂದೆ ಬಂದ ಆನಂದ್ ಮಹೀಂದ್ರ

ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು 200 ಯಂತ್ರಗಳನ್ನು ಅಲ್ಲಿನ ಪೌರಕಾರ್ಮಿಕರಿಗೆ ಹಸ್ತಾಂತರಿಸಿದ್ದರು. ಕೇರಳದಲ್ಲಿಯೂ ಸಹ ಅಲ್ಲಿನ ಸಿಪಿಎಂನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಮ್ಯಾನ್ ಹೋಲ್ ಕ್ಲೀನ್ ಮಾಡಲು ರೋಬೋಟ್ ಒಂದನ್ನು ಅನ್ವೇಷಣೆ ಮಾಡಲು ಪ್ರೇರಣೆ ನೀಡಿ ಮಾಡಿಸಿದ್ದರು. 

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುಜರಾತಿನ ವಡೋದರಾದ ಫಾರ್ತಿಕುಯಿ ಎಂಬ ಊರಿನ ಹೊಟೆಲ್ ಒಂದರ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಬ್ರಿಜೇಶ್ ಹರಿಜನ್ (23), ಮಹೇಶ್ ಹರಿಜನ್ (25), ವಿಜಯ್ ಚೌಧುರಿ (22), ಸಹದೇವ್ ವಾಸವಾ (22), ಅಜಯ್ ವಾಸವಾ (22), ಮಹೇಶ್ ಪಟಾನ್‍ವಾಡಿಯಾ (47), ಅಶೋಕ್ ಹರಿಜನ್ (45) ಎನ್ನುವ ನಾಲ್ಕು ಮಂದಿ ಪೌರಕಾರ್ಮಿಕರು ಮತ್ತು 3 ಜನ ಹೊಟೇಲ್ ಸಿಬ್ಬಂದಿ ಸೇರಿ ಒಟ್ಟು 7 ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿರುವುದು ದುರಂತದ ಸಂಗತಿ.

ಈ ದುರಂತದ ನಂತರ ಘಟನೆಯನ್ನು ಖಂಡಿಸಿ, ಈ ರೀತಿಯ ಮ್ಯಾನುವಲ್ ಸ್ಕ್ಯಾವೆಜಿಂಗ್ ಬಿಟ್ಟು ಸಂಪೂರ್ಣ ಯಾಂತ್ರಿಕೃತ ವ್ಯವಸ್ಥೆ ಜಾರಿಗೆ ಬರಬೇಕೇಂದು ಹಲವರು ದನಿಯೆತ್ತಿದ್ದರೆ, ಆನಂದ್ ಮಹಿಂದ್ರ, ಅಮಿತಾಬ್ ಬಚ್ಚನ್ ಸೇರಿದಂತೆ ಹಲವರು ಸಹಾಯ ಮಾಡಲು ಮುಂದೆ ಬಂದಿದ್ದಾರೆ.

ಈ ಕುರಿತ ಟ್ವೀಟ್ ಮಾಡಿರುವ ಆನಂದ್ ಮಹಿಂದ್ರ “ಮಾನವ ಜೀವನದ ಈ ಅಧಃಪತನ ಸಾಕು, ಯುವ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಸ್ವಯಂಚಾಲಿತ ಸ್ಕ್ಯಾವೆಂಜಿಂಗ್ ಯಂತ್ರ-ಬ್ಯಾಂಡಿಕೂಟ್ ಬಗ್ಗೆ ನಾನು ಈ ಹಿಂದೆ ಬಹಳಷ್ಟು ಸಲ ಹೇಳಿದ್ದೇನೆ. ಅವುಗಳನ್ನು ವ್ಯಾಪಕ ಪ್ರಮಾಣದಲ್ಲಿ ತಯಾರಿಸುವುದಾದರೆ ಹಣದ ವಿಷಯದಲ್ಲಿ ನನ್ನನ್ನು ಪರಿಗಣಿಸಿ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಖ್ಯಾತ ಬಾಲಿವುಟ್  ನಟ ಅಮಿತಾಬ್ ಬಚ್ಚನ್ “ಆನಂದ್ .. ನಾನು ಬಿಎಂಸಿಗೆ 25 ಯಂತ್ರಗಳನ್ನು ಮತ್ತು ಅವರಿಗೆ ಒಂದು ಟ್ರಕ್ ಅನ್ನು ಉಡುಗೊರೆಯಾಗಿ ನೀಡಿದ್ದೇನೆ .. ಯಂತ್ರಗಳನ್ನು ವ್ಯಕ್ತಿಗಳಿಗೆ, ಟ್ರಕ್ ಅನ್ನು ಬಿಎಂಸಿಗೆ ನೀಡಲಾಯಿತು. ರಂಗಾಬಾದ್‌ನ ಒಂದು ಕಂಪನಿಯು ಅವುಗಳನ್ನು ಮಾಡುತ್ತದೆ.” ಎಂದು ರೀಟ್ವೀಟ್ ಮಾಡಿದ್ದಾರೆ.

ಈ ಹಿಂದೆ ದೆಹಲಿಯಲ್ಲಿ ಈ ರೀತಿಯ ಪೌರಕಾರ್ಮಿಕರ ಸಾವುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಅಲ್ಲಿನ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು 200 ಯಂತ್ರಗಳನ್ನು ಅಲ್ಲಿನ ಪೌರಕಾರ್ಮಿಕರಿಗೆ ಹಸ್ತಾಂತರಿಸಿದ್ದರು. ಈ ಮೊದಲು ಕೇರಳದಲ್ಲಿಯೂ ಸಹ ಅಲ್ಲಿನ ಸಿಪಿಎಂನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಮ್ಯಾನ್ ಹೋಲ್ ಕ್ಲೀನ್ ಮಾಡಲು ರೋಬೋಟ್ ಒಂದನ್ನು ಅನ್ವೇಷಣೆ ಮಾಡಲು ಪ್ರೇರಣೆ ನೀಡಿ ಮಾಡಿಸಿದ್ದರು.

ಈ ರೀತಿ ಮ್ಯಾನ್ ಹೋಲ್ ನಲ್ಲಿ ಇಳಿದು ಸಾವನಪ್ಪುವ ಪೌರ ಕಾರ್ಮಿಕರ ಪರವಾಗಿ ದಶಕಗಳಿಂದ ಹೋರಾಡುತ್ತಾ ಬಂದಿರುವ ಬೆಜವಾಡ ವಿಲ್ಸನ್ ರವರು ದಶಕಗಳಿಂದಲೂ ಈ ರೀತಿಯ ಯಂತ್ರಗಳನ್ನು ತಯಾರಿಸಿ ನೀಡಬೇಕೆಂದು ಒತ್ತಾಯ ಮಾಡುತ್ತಲೇ ಬಂದಿದ್ದಾರೆ. ಹಲವು ಹೋರಾಟಗಳನ್ನು ಮಾಡಿಸಿದ್ದಾರೆ. ಆದರೆ ಆಳುವ ಸರ್ಕಾರಗಳು ತಮ್ಮ ಇದಕ್ಕೆ ಗಮನಹರಿಸಿಲ್ಲ.

ಕೇರಳದಲ್ಲಿನ ರೋಬೋಟ್

ಚುನಾವಣೆಗೆ ಮುನ್ನ ನರೇಂದ್ರ ಮೋದಿಯವರು ಕುಂಭಮೇಳದಲ್ಲಿ ಐವರು ಪೌರಕಾರ್ಮಿಕರ ಪಾದ ತೊಳೆಯುವ ಮೂಲಕ ಸುದ್ದಿಯಾಗಿದ್ದರು. ಆದರೆ ಅವರ ಬದುಕನ್ನು ಹಸನು ಮಾಡುವ ಕೆಲಸಕ್ಕೆ ಮುಂದಾಗಿಲ್ಲ ಎಂದು ಬೆಜವಾಡ ವಿಲ್ಸನ್ ರವರು ಕಿಡಿಕಾರಿದ್ದರು.

ಇದನ್ನೂ ಓದಿ: ಸ್ವಚ್ಛ ಭಾರತ – ಎಲ್ಲರೂ ಉತ್ತರದಾಯಿಗಳೇ

ಚಂದ್ರಯಾನ ಮಾಡಿದ್ದೇವೆ, ಬಾಹ್ಯಕಾಶದಲ್ಲಿ ನಿಲ್ದಾಣ ಸ್ಥಾಪಿಸುತ್ತೇವೆ ಎಂದೆಲ್ಲಾ ನಾವು ಹೆಮ್ಮೆಯಿಂದ ಕೊಚ್ಚಿಕೊಳ್ಳುವ ದೇಶದಲ್ಲಿ ಇಂದಿಗೂ ಒಂದೂವರೆ ಲಕ್ಷದಷ್ಟು ಜನ ಮಲ ಹೋರುವ ಅನಿಷ್ಟ ಕೆಲಸವನ್ನು ಮಾಡುತ್ತಿರುವುದು ನಮಗೆ ನಾಚಿಕೆಯೆನಿಸಬೇಕಲ್ಲವೇ? ಈ ಕುರಿತು ನಾವು ಮಾತಾಡಿದ್ದೇವೆಯೇ ಎಂದು ಬೆಜವಾಡರವರು ಪ್ರಶ್ನಿಸುತ್ತಾರೆ.

ಮ್ಯಾನ್ ಹೋಲ್ ಗೆ ಇಳಿಯಬಾರದು, ಆ ರೀತಿ ಕೆಲಸ ಮಾಡಿಸಬಾರದು ಎಂಬು ಕಾಯ್ದೆಯಿದ್ದರೂ ಯಾರು ಅದನ್ನು ಜಾರಿಗೊಳಿಸುತ್ತಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ದೇಶದ ಆರೋಗ್ಯ ಕಾಪಾಡುತ್ತಿರುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಸಮಾಜ ನಿರ್ಲಕ್ಷ್ಯ ವಹಿಸಿರುವುದು ದುರಂತವೇ ಸರಿ.

ಇದನ್ನೂ ಓದಿ: ಗಂಗೆ ತೊಳೆಯಬಲ್ಲಳೇ ಈ ಪಾಪವನ್ನು?

ಇಂತಹ ವಿಷಮ ಪರಿಸ್ಥಿತಿಯಲ್ಲಿಯೂ ಕೆಲ ರಾಜ್ಯಗಳು ಇದರ ಬಗ್ಗೆ ಎಚ್ಚೆತ್ತುಕೊಂಡು ಯಂತ್ರೋಪಕರಣಗಳನ್ನು ಬಳಸುತ್ತಿರುವುದು ಮಾದರಿ ನಡೆ. ಕೆಲ ಆನಂದ್ ಮಹಿಂದ್ರ ಮತ್ತು ಅಮಿತಾಬ್ ಬಚ್ಚನ್ ಸಹಾಯಹಸ್ತ ಚಾಚಿರುವುದು ಆಶಾದಾಯಕ ಬೆಳವಣಿಗೆ. ಇಂತಹ ಕೈಗಳು ನೂರು, ಸಾವಿರವಾಗಲಿ. ನಮ್ಮ ತೆರಿಗೆ ಹಣದಿಂದ ನಡೆಯುವ ಸರ್ಕಾರ ಈ ಕುರಿತು ಬೇಗ ಕಾರ್ಯಪ್ರವೃತ್ತರಾಗಲಿ ಎಂದು ಹಾರೈಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...