Homeಕರ್ನಾಟಕಬೆಂಗಳೂರು: ನೈಸ್ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ- ನಾಲ್ವರ ದುರ್ಮರಣ

ಬೆಂಗಳೂರು: ನೈಸ್ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ- ನಾಲ್ವರ ದುರ್ಮರಣ

- Advertisement -
- Advertisement -

ಬೆಂಗಳೂರಿನ ಬನ್ನೇರುಘಟ್ಟ- ತುಮಕೂರು ನೈಸ್ ರಸ್ತೆಯಲ್ಲಿ ಲಾರಿ ಮತ್ತು ಕಾರಿನ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಲಾರಿ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಸರಣಿ ಅಪಘಾತಗಳಿಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

“ಬೆಂಗಳೂರಿನ ಪುರವಂಕರ ಅಪಾರ್ಟ್‌ಮೆಂಟ್ ಬಳಿಯ ನೈಸ್ ರಸ್ತೆಯಲ್ಲಿ ಲಾರಿ ವಾಹನಗಳಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದಂತೆ ಎಲ್ಲಾ ನಾಲ್ವರು ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ” ಎಂದು ಪಶ್ಚಿಮ ವಿಭಾಗದ ಸಂಚಾರ ಡಿಸಿಪಿ ಕುಲದೀಪ್ ಜೈನ್ ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್‌ ಭದ್ರತಾ ಲೋಪ ಆರೋಪ: ಹೊಸ ವಿಡಿಯೊ ವೈರಲ್ ನೊಂದಿಗೆ ಮತ್ತಷ್ಟು ಪ್ರಶ್ನೆಗಳು

ಸರಣಿ ಅಪಘಾತದಲ್ಲಿ ಒಂದು ಕಾರಿನಲ್ಲಿದ್ದ ಮೊಹಮ್ಮದ್ ಫಾದಿಲ್ (25), ಅಭಿಲಾಷ್(25), ಶಿಲ್ಪಾ(30) ಮತ್ತೊರ್ವ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕ್ವಾಲಿಸ್ ಕಾರಿನಲ್ಲಿದ್ದ ಆರು ಜನರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಿಫ್ಟ್ ವಾಹನದಲ್ಲಿದ್ದವರಿಗೂ ಸಣ್ಣ-ಪುಟ್ಟ ಗಾಯಗಳಾಗಿವೆ.

ದುರಂತ ನಡೆದ ತಕ್ಷಣ ಲಾರಿ ಚಾಲಕ ಪರಾರಿಯಾಗಿದ್ದು, ಘಟನೆ ಸಂಬಂಧ ಕುಮಾರಸ್ವಾಮಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ಕೊರೊನಾ ಆತಂಕ: ಶುಕ್ರವಾರ ರಾತ್ರಿ 8 ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...