Homeಕರ್ನಾಟಕನಾಳೆ ನಡೆಯಬೇಕಿದ್ದ ಬೆಂಗಳೂರು ಕೃಷಿ ವಿವಿ ಪರೀಕ್ಷೆ ಇಂದು ಮುಂದೂಡಿಕೆ : ಕೃಷಿ ಸಚಿವರ ವಿರುದ್ಧ...

ನಾಳೆ ನಡೆಯಬೇಕಿದ್ದ ಬೆಂಗಳೂರು ಕೃಷಿ ವಿವಿ ಪರೀಕ್ಷೆ ಇಂದು ಮುಂದೂಡಿಕೆ : ಕೃಷಿ ಸಚಿವರ ವಿರುದ್ಧ ಆಕ್ರೋಶ

- Advertisement -
- Advertisement -

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 50 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ನಾಳೆ (ಫೆ.16) ನಡೆಯಬೇಕಿದ್ದ ಪರೀಕ್ಷೆಯನ್ನು ಇಂದು (ಫೆ.15) ಮುಂದೂಡಿಕೆ ಮಾಡಲಾಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಹಠಾತ್ ಪರೀಕ್ಷೆ ಮುಂದೂಡಲಾಗಿದೆ. ಇದರಿಂದ ಪರೀಕ್ಷೆಗಾಗಿ ದೂರದ ಊರುಗಳಿಂದ ಆಗಮಿಸಿದ್ದ ಅಭ್ಯರ್ಥಿಗಳಿಗೆ ತೀವ್ರ ತೊಂದರೆ ಉಂಟಾಗಿದೆ ಎಂದು ರಾಜ್ಯ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ರೈತ ಸಂಘಟನೆಗಳ ಒಕ್ಕೂಟ ಬೆಂಗಳೂರು ಆಕ್ರೋಶ ವ್ಯಕ್ತಪಡಿಸಿದೆ.

ಪರೀಕ್ಷೆಗೆ 950 ಪಿಹೆಚ್‌ಡಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅವರಲ್ಲಿ ಜಪಾನ್, ಜರ್ಮನಿ, ಚೀನಾ, ಕೊರಿಯಾ, ಯುರೋಪ್ ಮತ್ತು ದೇಶದ ಹಲವೆಡೆಯಿಂದ ಬಂದವರು ಇದ್ದಾರೆ. ಹಲವಾರು ಅಭ್ಯರ್ಥಿಗಳು ತಮ್ಮ ಪೋಷಕರೊಂದಿಗೆ ರೈಲು ಮತ್ತು ವಿಮಾನದ ಮೂಲಕ ಬೆಂಗಳೂರು ತಲುಪಿದ್ದಾರೆ. ಒಂದು ದಿನ ಮೊದಲು ಪರೀಕ್ಷೆ ಮುಂದೂಡುವ ಮೂಲಕ ಈ ಪ್ರತಿಭಾವಂತ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಲಾಗಿದೆ ಎಂದಿದೆ.

ಪರೀಕ್ಷೆ ಮುಂದೂಡಿರುವ ಅಧಿಸೂಚನೆ

ಸರ್ಕಾರದ ನೇಮಕಾತಿ ಮತ್ತು ಮೀಸಲಾತಿ ಆದೇಶಗಳ ಅನುಸಾರ ನ್ಯಾಯ ಸಮ್ಮತವಾಗಿ ನೇಮಕಾತಿಗಳನ್ನು ನಡೆಸಲು ತೀರ್ಮಾನಿಸಿದ್ದು, ಅದಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ತನ್ನ ಸ್ವಪ್ರತಿಷ್ಠೆಗೆ ಮತ್ತು ವಿಶ್ರಾಂತ ಕುಲಪತಿ ರಾಜೇಂದ್ರ ಪ್ರಸಾದ್, ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯದ ವಿಶೇಷ ಅಧಿಕಾರಿ ಅರುಣಿಕುಮಾರ್ ಅವರ ಕುತಂತ್ರಗಳಿಗೆ ಕಿವಿಗೊಟ್ಟು ತಡೆಯಾಜ್ಞೆ ನೀಡಿರುವುದು ಸಂವಿಧಾನಬಾಹಿರ ಮತ್ತು ನಿರಂಕುಶವಾದ. ಈ ನಿರ್ಧಾರಗಳು ದಲಿತ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಾಮಾಜಿಕ ನ್ಯಾಯ ಮತ್ತು ಉದ್ಯೋಗವಕಾಶಗಳಲ್ಲಿ ತೀವ್ರ ಅನ್ಯಾಯ ಉಂಟು ಮಾಡಿವೆ ಎಂದು ಒಕ್ಕೂಟ ಆರೋಪಿಸಿದೆ.

ಈಗಾಗಲೇ ನಾಳೆ ನಡೆಯಬೇಕಿದ್ದ ಪರೀಕ್ಷೆಗೆ ದೇಶ-ವಿದೇಶಗಳಿಂದ ಆಗಮಿಸಿರುವ ಅಭ್ಯರ್ಥಿಗಳಿಗೆ ಒಂದೇ ವಾರದೊಳಗೆ ಪರೀಕ್ಷೆಯ ದಿನಾಂಕ ನಿಗದಿಪಡಿಸಿ ಪರೀಕ್ಷೆಯನ್ನು ನಡೆಸಬೇಕು. ಇಲ್ಲವಾದಲ್ಲಿ, ರಾಜ್ಯದ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ರೈತ ಸಂಘಟನೆಗಳ ಒಕ್ಕೂಟದಿಂದ ಸರ್ಕಾರದ ವಿರುದ್ಧ ಹಾಗೂ ಸೂತ್ರದಾರರಾದ ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಹೋರಾಟ ನಡೆಸಲಾಗುವುದು ಮತ್ತು ಅವರ ರಾಜೀನಾಮೆಗೆ ಆಗ್ರಹಿಸಲಾಗುವುದು ಎಂದು ಒಕ್ಕೂಟ ಎಚ್ಚರಿಸಿದೆ.

ಜಲ ಜೀವನ್ ಮಿಷನ್ ಬಗ್ಗೆ ಬಿಜೆಪಿ ‘ಸುಳ್ಳು ಹರಡುತ್ತಿದೆ’ – ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...

ಗುರುತು ಬಹಿರಂಗ ಆರೋಪ; ಜೆಫ್ರಿ ಎಪ್ಸ್ಟೀನ್ ಸಂತ್ರಸ್ತರಿಂದ ಗೂಗಲ್‌ ವಿರುದ್ಧ ಮೊಕದ್ದಮೆ

ಜೆಫ್ರಿ ಎಪ್ಸ್ಟೀನ್ ಸಂತ್ರಸ್ತರು ಗೂಗಲ್ ವಿರುದ್ಧ ಯುಎಸ್ ಫೆಡರಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಅದರ ಸರ್ಚ್ ಇಂಜಿನ್ ಮತ್ತು ಎಐ ಪರಿಕರಗಳಲ್ಲಿ ತಮ್ಮ ಹೆಸರುಗಳು, ಇಮೇಲ್‌ಗಳು ಮತ್ತು ಫೋನ್ ಸಂಖ್ಯೆಗಳನ್ನು ಪ್ರಸಾರ ಮಾಡುತ್ತಿವೆ...

ಬೆಂಗಳೂರು : ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಗೆ ‘ಟೆರರಿಸ್ಟ್’ ಎಂದು ನಿಂದಿಸಿದ ಪ್ರಾಧ್ಯಾಪಕ!

ಪ್ರಾಧ್ಯಾಪಕರೊಬ್ಬರು ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಯನ್ನು 'ಟೆರರಿಸ್ಟ್' ಎಂದು ನಿಂದಿಸಿದ ಘಟನೆ ಬೆಂಗಳೂರಿನ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ...

ನೇಪಾಳ : ಹೊಸ ಪ್ರಧಾನಿ ಅಧಿಕಾರ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿಯ ಬಂಧನ!

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ (ಬಾಲೆನ್ ಶಾ) ಪ್ರಮಾಣವಚನ ಸ್ವೀಕರಿಸಿದ ಮರುದಿನವೇ (ಮಾ.28, ಶನಿವಾರ), ಮಾಜಿ ಪ್ರಧಾನಿ ಕೆ. ಪಿ. ಶರ್ಮಾ ಓಲಿ ಅವರ ಬಂಧನವಾಗಿದೆ. ಸೆಪ್ಟೆಂಬರ್ 2025ರಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ...

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...