Homeಕರ್ನಾಟಕಬೆಂಗಳೂರು: ಪಿಎಂ ಕಚೇರಿಯಲ್ಲಿ ಕೆಲಸದಲ್ಲಿದ್ದೇನೆಂದು ನಂಬಿಸಿ ₹89 ಲಕ್ಷ ವಂಚನೆ; ವ್ಯಕ್ತಿ ಬಂಧನ

ಬೆಂಗಳೂರು: ಪಿಎಂ ಕಚೇರಿಯಲ್ಲಿ ಕೆಲಸದಲ್ಲಿದ್ದೇನೆಂದು ನಂಬಿಸಿ ₹89 ಲಕ್ಷ ವಂಚನೆ; ವ್ಯಕ್ತಿ ಬಂಧನ

- Advertisement -
- Advertisement -

ಪ್ರಧಾನ ಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹಿಳೆಗೆ ವೀಸಾ ಕೊಡಿಸುವುದಾಗಿ ಭರವಸೆ ನೀಡಿ ₹89 ಲಕ್ಷ ವಂಚಿಸಿದ ಆರೋಪದ ಮೇಲೆ 33 ವರ್ಷದ ಬೆಂಗಳೂರಿನ ನಿವಾಸಿಯೊಬ್ಬನನ್ನು ಬುಧವಾರ ಪೊಲೀಸರು ಬಂಧಿಸಲಾಗಿದೆ.

ಇಂಟೆಲಿಜೆನ್ಸ್ ಬ್ಯೂರೋ (ಐಬಿ) ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ)ನಲ್ಲಿ ಕೆಲಸ ಮಾಡಿರುವುದಾಗಿ ಹೇಳಿಕೊಂಡಿರುವ ಅರಹಂತ್ ಮೋಹನ್ ಕುಮಾರ್ ಲಕ್ಕವಳ್ಳಿ ಅವರು ಬಿಕಾಂ ಪದವೀಧರರಾಗಿದ್ದು, ಬೆಂಗಳೂರಿನ ರಾಜಾಜಿನಗರದಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಆಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತೆಯು 2019ರ ಜೂನ್‌ನಲ್ಲಿ ಕೌಲಾಲಂಪುರಕ್ಕೆ ಹೋಗುವಾಗ ವಿಮಾನದಲ್ಲಿ ಮೋಹನ್ ಕುಮಾರ್ ಅವರನ್ನು ಭೇಟಿಯಾಗಿದ್ದರು. ಏಪ್ರಿಲ್ 26 ರಂದು ಬೆಳ್ಳಂದೂರು ಪೊಲೀಸರಿಗೆ ಮಹಿಳೆ ದೂರು ನೀಡಿದ್ದಾರೆ.

ಇಟಾಲಿಯನ್ ಮತ್ತು ಜೆಕ್ ರಿಪಬ್ಲಿಕ್ ವೀಸಾಗಳಿಗಾಗಿ ಮಹಿಳೆ ಅರ್ಜಿಯನ್ನು ಸಲ್ಲಿಸಿದಾಗ ತಿರಸ್ಕೃತವಾಗಿದ್ದವು. ಜನವರಿ 2020ರಲ್ಲಿ ಅವರು ವೀಸಾವನ್ನು ಪಡೆದರು. ಆದರೆ ಅರ್ಜಿಯನ್ನು ಮೊದಲು ಏಕೆ ತಿರಸ್ಕರಿಸಲಾಗಿದೆ ಎಂಬುದನ್ನು ತಿಳಿದುಕೊಳ್ಳಲು ಬಯಸಿದ್ದರು.

ಮಹಿಳೆಗೆ ಸಹಾಯ ಮಾಡಲು ಮುಂದಾಗಿ ವಿಮಾನದಲ್ಲಿ ಮಹಿಳೆಯನ್ನು ಭೇಟಿಯಾದಾಗ ತನ್ನನ್ನು IB ಅಧಿಕಾರಿ ಎಂದು ಪರಿಚಯಿಸಿಕೊಂಡ ಕುಮಾರ್, ನಿಮ್ಮ ಪಾಸ್‌ಪೋರ್ಟ್ ಅನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ನಿಮ್ಮನ್ನು “ಶಂಕಿತ ಭಯೋತ್ಪಾದಕ ಚಟುವಟಿಕೆಗಳ ಕಾಯ್ದೆ”ಯಡಿ ಹೆಸರಿಸಲಾಗಿದೆ ಎಂದು ನಂಬಿಸಿದ್ದನು.

ಇದನ್ನೂ ಓದಿರಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ಪೊಲೀಸರ ಪ್ರಕಾರ, ಮಹಿಳೆ ತನ್ನ ಹೆಸರನ್ನು ತೆರವುಗೊಳಿಸಲು ಕುಮಾರ್‌ನ ಸಹಾಯವನ್ನು ಕೋರಿದ್ದರು. ಆಸ್ಟ್ರಿಯಾ ಮತ್ತು ಜೆಕ್ ರಿಪಬ್ಲಿಕ್‌ನ ಅಧಿಕಾರಿಗಳಿಗೆ 5 ಲಕ್ಷ ಯುರೋ (ಅಂದಾಜು ₹ 4 ಕೋಟಿ) ಮತ್ತು 2 ಲಕ್ಷ ಯೂರೋ (ಅಂದಾಜು ₹ 2 ಕೋಟಿ) ಪಾವತಿಸಬೇಕಾಗುತ್ತದೆ ಎಂದು ಮೋಹನ್‌ ಬಂಬಿಸಿದ್ದನು. 2021ರ ಫೆಬ್ರವರಿ ಮತ್ತು ಸೆಪ್ಟೆಂಬರ್‌ನಲ್ಲಿ, ಈ ಉದ್ದೇಶಕ್ಕಾಗಿ ಮಹಿಳೆ ₹89 ಲಕ್ಷವನ್ನು ಮೋಹನ್‌ಗೆ ವರ್ಗಾಯಿಸಿರುವುದಾಗಿ ಹೇಳಿಕೊಂಡಿದ್ದಾರೆ. ಆತನಿಂದ ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದಾಗ ಸಂತ್ರಸ್ತ ಮಹಿಳೆ ಪೊಲೀಸರ ಮೊರೆ ಹೋಗಿದ್ದಾರೆ.

ಇದರ ಬೆನ್ನಲ್ಲೇ ಮರುದಿನ ಪೊಲೀಸರು ಆತನನ್ನು ಬಂಧಿಸಿದ್ದು, ಮಹಿಳೆಯಿಂದ ಸಾಕಷ್ಟು ದಾಖಲೆಗಳನ್ನು ಕೂಡ ಸಂಗ್ರಹಿಸಿರುವುದು ತಿಳಿದುಬಂದಿದೆ ಎಂದು ಹಿಂದೂಸ್ತಾನ್‌ ಟೈಮ್ಸ್ ವರದಿ ಮಾಡಿದೆ.

ಉಪ ಪೊಲೀಸ್ ಕಮಿಷನರ್ (ವೈಟ್‌ಫೀಲ್ಡ್) ಎಸ್ ಗಿರೀಶ್ ಪ್ರತಿಕ್ರಿಯೆ ನೀಡಿದ್ದು, “ಆತ ಯುರೋಪ್ ಮತ್ತು ಇತರ ದೇಶಗಳಲ್ಲಿ ಪ್ರಯಾಣಿಸಿದ್ದು, ತನಿಖೆಗೆ ಸಹಕರಿಸುತ್ತಿಲ್ಲ. ಇತರರಿಗೆ ಆತ ಮೋಸ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಆತನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದೇವೆ. ಹಣವನ್ನು ವಾಪಸ್ ಪಡೆಯುತ್ತೇವೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...