Homeಕರ್ನಾಟಕಹನಿ ಟ್ರ್ಯಾಪ್‌ಗೆ ಸಿಲುಕಿ ಜೀವ ಕಳೆದುಕೊಂಡ ಬೆಂಗಳೂರು BJP ಮುಖಂಡ ಅನಂತರಾಜು: ಪೊಲೀಸ್‌‌

ಹನಿ ಟ್ರ್ಯಾಪ್‌ಗೆ ಸಿಲುಕಿ ಜೀವ ಕಳೆದುಕೊಂಡ ಬೆಂಗಳೂರು BJP ಮುಖಂಡ ಅನಂತರಾಜು: ಪೊಲೀಸ್‌‌

- Advertisement -
- Advertisement -

ಬೆಂಗಳೂರಿನಲ್ಲಿ ನಡೆದ ಬಿಜೆಪಿ ನಾಯಕನ ಸಾವಿನ ತನಿಖೆಯಲ್ಲಿ ಅವರು ಹನಿಟ್ರ್ಯಾಪ್‌ಗೆ ಬಲಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಅವರ ಪತ್ನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಇಬ್ಬರು ಮಹಿಳೆಯರು ಮತ್ತು ಪುರುಷನೊಬ್ಬನ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ಮೇ 12 ರಂದು ಹೇರೋಹಳ್ಳಿ ವಾರ್ಡ್‌ನ ಬಿಜೆಪಿ ಮುಖಂಡ ಅನಂತರಾಜು ಬ್ಯಾಡರಹಳ್ಳಿಯ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆರಂಭದಲ್ಲಿ ಪೊಲೀಸರು ಅಸಹಜ ಸಾವು ಎಂದು ಪ್ರಕರಣವನ್ನು ದಾಖಲಿಸಿದ್ದರು. ನಂತರ ಅವರು ಬರೆದ ಡೆತ್‌ ನೋಟ್‌ ವಶಪಡಿಸಿಕೊಂಡು ಮೂರು ಜನರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದಾರೆ. ಹಣಕ್ಕಾಗಿ ತನ್ನನ್ನು ಬ್ಲಾಕ್‌ಮೇಲ್ ಮಾಡಲಾಗಿದೆ ಎಂದು ಅನಂತರಾಜು ಡೆತ್‌ನೋಟ್‌ನಲ್ಲಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪರಾರಿಯಾಗಿರುವ ಆರೋಪಿಗಳನ್ನು ರೇಖಾ, ಆಕೆಯ ಪತಿ ವಿಂದೋ ಮತ್ತು ಅವರ ಸ್ನೇಹಿತೆ ಸ್ಪಂದನಾ ಎಂದು ಗುರುತಿಸಲಾಗಿದ್ದು, ಎಲ್ಲರೂ ಕೆಆರ್ ಪುರಂ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

“ಅನಂತರಾಜು ಮಹಿಳೆಯೊಂದಿಗೆ ಫೇಸ್‌ಬುಕ್‌ನಲ್ಲಿ ಸ್ನೇಹ ಬೆಳೆಸಿದ್ದರು. ನಂತರ ಅವರು ಮಹಿಳೆಯನ್ನು ಭೇಟಿಯಾಗಿ ಖಾಸಗಿ ಕ್ಷಣಗಳನ್ನು ಕಳೆದರು. ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದ ಮಹಿಳೆ, ಅವರಿಂದ ಹಣಕ್ಕಾಗಿ ಬೇಡಿಕೆಯಿಡುತ್ತಿದ್ದಳು (ಅದನ್ನು ಸಾರ್ವಜನಿಕಗೊಳಿಸದಿರಲು) ಎಂದು ಆರೋಪಿಸಲಾಗಿದೆ” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಉದ್ಯಮಿಯಾಗಿದ್ದ ಅನಂತರಾಜು ಅವರು ಹಣ ನೀಡಿದ್ದರೂ ಮಹಿಳೆ ಮತ್ತು ಆಕೆಯ ಸಹಚರರು ಪದೇ ಪದೇ ಹಣಕ್ಕೆ ಬೇಡಿಕೆ ಇಡುತ್ತಿದ್ದರಿಂದ ಹತಾಶರಾಗಿದ್ದರು. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯ ಬಿಜೆಪಿ ನಾಯಕರೊಂದಿಗೆ ವಿಡಿಯೋ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಅಂತಹ ಪರಿಸ್ಥಿತಿಗೆ ಹೆದರಿ ಅನಂತರಾಜು ತನ್ನ ಜೀವನವನ್ನು ಕೊನೆಗೊಳಿಸಿದ್ದಾರೆ” ಎಂದು ಅಧಿಕಾರಿ ಹೇಳಿದ್ದಾರೆ.

ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದ ಅನಂತರಾಜು ಅವರು ಆರೋಗ್ಯದ ಕಾರಣದಿಂದ ತಮ್ಮ ಜೀವನಕ್ಕೆ ಅಂತ್ಯ ಹಾಡಿದ್ದಾರೆ ಎಂದು ಈ ಹಿಂದೆ ಅವರ ಸೋದರ ಸಂಬಂಧಿ ಮನೋಜ್ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಶ್ರೀರಂಗಪಟ್ಟಣದ ಮಸೀದಿ ನಿರ್ಮಾಣವಾಗಿದ್ದು ಹೇಗೆ? ಇತಿಹಾಸತಜ್ಞ ಪ್ರೊ.ನಂಜರಾಜ ಅರಸು ಹೇಳುವುದೇನು?

ಅನಂತರಾಜು ಅವರು ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಿದ್ದರು ಮತ್ತು ಮುಂದಿನ ಚುನಾವಣೆಗೂ ನಿಲ್ಲಲು ಸಿದ್ಧತೆ ನಡೆಸಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌‌ಪ್ರೆಸ್‌ ವರದಿ ತಿಳಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಡ್ಯ | ಹೆಣ್ಣು ಭ್ರೂಣ ಹತ್ಯೆ ಪ್ರಕರಣ : ಮತ್ತೆ ಮೂವರ ಬಂಧನ

0
ಮಂಡ್ಯ ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಭ್ರೂಣ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ರಾಮಕೃಷ್ಣ ಅಲಿಯಾಸ್...