Homeಕರ್ನಾಟಕಬೆಂಗಳೂರಿನ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇಮೇಲ್ - ಅರೋಪಿಯ ಬಂಧನ

ಬೆಂಗಳೂರಿನ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇಮೇಲ್ – ಅರೋಪಿಯ ಬಂಧನ

- Advertisement -
- Advertisement -

ಬೆಂಗಳೂರಿನ ಕಾಲೇಜುಗಳಲ್ಲಿ ಹೈಡ್ರೋಜನ್ ಆಧಾರಿತ ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಇರಿಸಿರುವುದಾಗಿ ಹೇಳಿಕೊಂಡು ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದ ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಗುರುವಾರ ಬಂಧಿಸಲಾಗಿದೆ. ಆರೋಪಿಯನ್ನು ದೀಪಂಜನ್ ಮಿತ್ರ (48) ಎಂದು ಗುರುತಿಸಲಾಗಿದೆ. ಎರಡು ಶಿಕ್ಷಣ ಸಂಸ್ಥೆಗಳು ನೀಡಿದ ದೂರಿನ ಮೇರೆಗೆ ವಿವಿ ಪುರಂ ಮತ್ತು ಹನುಮಂತನಗರ ಪೊಲೀಸ್ ಠಾಣೆಗಳ ಜಂಟಿ ತನಿಖೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಕಾಲೇಜುಗಳಿಗೆ ಬಾಂಬ್ ಬೆದರಿಕೆ

ಅಕ್ಟೋಬರ್ 4 ರಂದು, ಬೆಂಗಳೂರಿನ ಮೂರು ಪ್ರಮುಖ ಎಂಜಿನಿಯರಿಂಗ್ ಕಾಲೇಜುಗಳಾದ ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ), ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಎಂಎಸ್ ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಿಐಟಿಯ ಪ್ರಾಂಶುಪಾಲರು ಅಕ್ಟೋಬರ್ 4 ರಂದು [email protected] ವಿಳಾಸದಿಂದ ಬೆದರಿಕೆ ಇಮೇಲ್ ಪಡೆದ ಕೆಲವೇ ಕ್ಷಣಗಳಲ್ಲಿ ದೂರು ದಾಖಲಿಸಿದ್ದರು. ಕಾಲೇಜಿನಲ್ಲಿ ಸುಧಾರಿತ ಹೈಡ್ರೋಜನ್ ಆಧಾರಿತ IED ಗಳನ್ನು ಇಡಲಾಗಿದೆ ಎಂದು ಎಂದು ಇಮೇಲ್ ಹೇಳಿಕೊಂಡಿತ್ತು. ಬೆಂಗಳೂರಿನ ಕಾಲೇಜುಗಳಿಗೆ ಬಾಂಬ್ ಬೆದರಿಕೆ

ಅದೇ ದಿನ ಹನುಮಂತನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಿಎಂಎಸ್ ಕಾಲೇಜಿನ ಪ್ರಾಂಶುಪಾಲರು ಇದೇ ರೀತಿ ದೂರು ನೀಡಿದ್ದು, ಮತ್ತೊಂದು ಪ್ರಕರಣ ದಾಖಲಾಗಿತ್ತು. ದೂರು ದಾಖಲಾದ ಕೂಡಲೇ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಲೋಕೇಶ್ ಬರಮಪ್ಪ ಜಗಲಸರ್ ಅವರ ನೇತೃತ್ವದಲ್ಲಿ ವಿವಿ ಪುರಂ ಮತ್ತು ಹನುಮಂತನಗರ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಲಾಗಿತ್ತು.

ಎರಡೂ ಪ್ರಕರಣಗಳ ತಾಂತ್ರಿಕ ತನಿಖೆಯು ಡಾರ್ಜಿಲಿಂಗ್ ಜಿಲ್ಲೆಯ ಸಾಲಿಸ್‌ಬರಿ ಟೌನ್‌ನಲ್ಲಿರುವ ಶಂಕಿತ ವ್ಯಕ್ತಿಯನ್ನು ಬೆಟ್ಟು ಮಾಡಿತ್ತು. ಶಂಕಿತನನ್ನು ಅಕ್ಟೋಬರ್ 17 ರಂದು ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಆರೋಪಿಯು ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ.

ವಿವಿ ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಶಮೀದ್ ಪಾಷಾ, ವಿವಿ ಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಧರ್ಮೇಂದ್ರ ಮತ್ತು ಅವರ ತಂಡ ಅರೋಪಿಯನ್ನು ತಾಂತ್ರಿಕ ವಿಶ್ಲೇಷಣೆಯನ್ನು ಬಳಸಿಕೊಂಡು ಪತ್ತೆ ಹಚ್ಚಿತ್ತು.

“ನಾವು ಶಂಕಿತನನ್ನು ಸಿಡಿಆರ್ ಮತ್ತು ಇಮೇಲ್ ವಿಳಾಸಗಳನ್ನು ರಚಿಸಲು ಬಳಸಿದ ರೆಫರಲ್ ಐಡಿಯನ್ನು ಬಳಸಿಕೊಂಡು ಪತ್ತೆಹಚ್ಚಿದೆವು. ಅದರ ಮೂಲಕ ಅವರು ನಕಲಿ ಬಾಂಬ್ ಬೆದರಿಕೆಗಳನ್ನು ಕಳುಹಿಸುತ್ತಿದ್ದರು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆರೋಪಿಯು ಮೈಲ್ ಕಳುಹಿಸಲು ಬಳಸಿದ HP ಲ್ಯಾಪ್‌ಟಾಪ್ ಮತ್ತು ನೋಕಿಯಾ ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಯು ಇದೇ ರೀತಿಯಲ್ಲಿ ಕನಿಷ್ಠ 10 ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಬೆಂಗಳೂರಿನಾದ್ಯಂತ ಇತರ ಶಾಲಾ-ಕಾಲೇಜುಗಳಿಗೆ ಕಳುಹಿಸಲಾದ ಬಾಂಬ್ ಬೆದರಿಕೆ ಇಮೇಲ್‌ಗಳಲ್ಲಿ ತನ್ನ ಕೈವಾಡವನ್ನು ಒಪ್ಪಿಕೊಂಡಿದ್ದಾನೆ. ಈ ಹೆಚ್ಚುವರಿ ಘಟನೆಗಳಲ್ಲಿ ಶಂಕಿತನ ಪಾತ್ರವನ್ನು ನಿರ್ಧರಿಸಲು ಅಧಿಕಾರಿಗಳು ಈಗ ತನಿಖೆಯನ್ನು ನಡೆಸುತ್ತಿದ್ದಾರೆ.

ಬಿ ಕಾಮ್ ಪದವೀಧರನಾಗಿರುವ ದೀಪಂಜನ್ ಮಿತ್ರ 2012 ರಿಂದ ನಿರುದ್ಯೋಗಿಯಾಗಿದ್ದಾನೆ. 2012ರ ವರೆಗೆ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಆತ, ಕಂಪ್ಯೂಟರ್ ಸೈನ್ಸ್‌ನಲ್ಲಿ ಅನೇಕ ಸರ್ಟಿಫಿಕೇಶನ್ ಕೋರ್ಸ್‌ಗಳನ್ನು ಸಹ ಪೂರ್ಣಗೊಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. “ನಿರುದ್ಯೋಗಿಯಾಗಿದ್ದ ಆರೋಪಿ ಮಾನಸಿಕವಾಗಿ ತೊಂದರೆಗೀಡಾಗಿದ್ದ. ಹೀಗಾಗಿ ನಕಲಿ ಇಮೇಲ್‌ಗಳನ್ನು ಕಳುಹಿಸಿದ್ದಾನೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅದಾಗ್ಯೂ, ಆರೋಪಿಯ ಚಟುವಟಿಕೆಗಳ ಸಂಪೂರ್ಣ ವ್ಯಾಪ್ತಿ ಮತ್ತು ಯಾವುದೇ ಸಂಭಾವ್ಯ ಸಹಚರರನ್ನು ಗುರುತಿಸಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮುಡಾ ಕಚೇರಿ ಮೇಲೆ ಇಡಿ ದಾಳಿ | ಸಿಎಂ ಸಿದ್ದರಾಮಯ್ಯ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ

ಮುಡಾ ಕಚೇರಿ ಮೇಲೆ ಇಡಿ ದಾಳಿ | ಸಿಎಂ ಸಿದ್ದರಾಮಯ್ಯ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...