HomeUncategorized'ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ'ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

- Advertisement -
- Advertisement -

ರಾಜ್ಯ ಸರ್ಕಾರ ಉದ್ದೇಶಿಸಿರುವ ಬಸ್ ಪ್ರಯಾಣ ದರ ಏರಿಕೆಯನ್ನು ‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ ವಿರೊಧಿಸಿದ್ದು, ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ. “ಆದಾಯ ಪಾರ್ಕಿಂಗ್ ಶುಲ್ಕ ಮತ್ತು ದಟ್ಟಣೆ ತೆರಿಗೆಯಂತಹ ಉಪಾಯಗಳನ್ನು ಸರ್ಕಾರ ಪರಿಗಣಿಸಬೇಕು ಎಂದು ಹೇಳಿರುವ ವೇದಿಕೆಯು, “ಟನಲ್ ರಸ್ತೆ ಮತ್ತು ಸಿಗ್ನಲ್ ಮುಕ್ತ ಕಾರಿಡಾರ್‌ಗಳಂತಹ ಯೋಜನೆಗಳನ್ನು ಸರ್ಕಾರ ಕೈಬಿಡಬೇಕು ಮತ್ತು ಬಸ್ ವ್ಯವಸ್ಥೆಯನ್ನು ಬಲಪಡಿಸಲು ಆ ಹಣವನ್ನು ಬಳಸಬೇಕು” ಎಂದು ಭಾನುವಾರ ಹೇಳಿದೆ. ಬೆಂಗಳೂರು ಬಸ್ ಪ್ರಯಾಣಿಕರ

ರಾಜ್ಯ ಸರ್ಕಾರ ಬಸ್ ದರ ಹೆಚ್ಚಳ ಮಾಡಿರೋದು ನ್ಯಾಯಯುತವಾಗಿಲ್ಲ ಎಂದು ಹೇಳಿರುವ ವೇದಿಕೆಯು, ಬಸ್ ದರ ಹೆಚ್ಚಿಸುವುದರಿಂದ ಸರ್ಕಾರವು ಜನರನ್ನು ಬಸ್ ಸೇವೆಯಿಂದ ದೂರ ತಳ್ಳುತಿದೆ, ದುಡಿಯುವ ವರ್ಗದ ಬಸ್ ಪ್ರಯಾಣಿಕರಿಗೆ, ಈ ಬಸ್ ದರದಿಂದ ಹೊಡೆತ ಬೀಳುತ್ತದೆ ಹಾಗೂ ಅವರಿಗೆ ಇದನ್ನು ಬರಿಸುವುದು ಕಷ್ಟವಾಗುತ್ತದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಹುಪಾಲು ಕಾರ್ಮಿಕ ವರ್ಗದವರಿಗೆ ಬಸ್ಸು ನಗರ ಸಂಚಾರದ ಜೀವನಾಡಿಯಾಗಿದೆ. ಸಾರ್ವಜನಿಕ ಸಾರಿಗೆಯನ್ನು ಬಳಸುತ್ತಿರುವುದಕ್ಕಾಗಿ ಅವರಿಗೆ ಈ ರೀತಿ ದರ ಏರಿಸಿ ದಂಡ ವಿಧಿಸುವುದು ಅನ್ಯಾಯವಾಗಿದೆ ಎಂದು ವೇದಿಕೆಯು ಹೇಳಿದೆ. ಬೆಂಗಳೂರಿನ ಸಂಚಾರ ಸಮಸ್ಯೆಗೆ ಆರಾಮದಾಯಕ, ಕೈಗೆಟುಕುವ ದರವುಳ್ಳ ಸಾರ್ವಜನಿಕ ಸಾರಿಗೆಯೇ ಪರಿಹಾರ ಎಂದಿರುವ ಬಸ್ ಪ್ರಯಾಣಿಕರ ವೇದಿಕೆ, ಇದರಿಂದ ಪರಿಸರಕ್ಕೂ ಒಳ್ಳೆಯದಾಗುತ್ತದೆ ಎಂದು ಹೇಳಿದೆ.ಬೆಂಗಳೂರು ಬಸ್ ಪ್ರಯಾಣಿಕರ

“ದ್ವಿಚಕ್ರವಾಹನ ಉಳ್ಳ ಬಸ್ ಪ್ರಯಾಣಿಕರು, ಬಸ್ ಅನ್ನು ಬಿಟ್ಟು ಮತ್ತೆ ದ್ವಿಚಕ್ರ ವಾಹನ ಉಪಯೋಗಿಸುವುದು ಪ್ರಾರಂಭಿಸುತ್ತಾರೋ ಎಂಬ ಆತಂಕ ಇದೆ. ಹೆಚ್ಚು ಶುಲ್ಕ ಕೊಟ್ಟು ಐರಾವತ ಹಾಗು ಎಸಿ ವೋಲ್ವೋ ಬಸ್ ಗಳಲ್ಲಿ ಪ್ರಯಾಣಿಸುವ ಗ್ರಾಹಕರು ದರ ಏರಿಕೆಯಿಂದ ಈ ಸೌಲತ್ತನ್ನು ಉಪಯೋಗಿಸುವುದು ನಿಲ್ಲಿಸಬಹುದು ಎಂದು ಸಹ ನಮಗೆ ಆತಂಕವಿದೆ” ಎಂದು ವೇದಿಕೆ ಹೇಳಿದ್ದು, ಸಾರಿಗೆ ನಿಗಮದ ಆದಾಯ ಹೆಚ್ಚಿಸಲು , ಸರ್ಕಾರ ಬೇರೆ ಮಾರ್ಗೋಪಾಯಗಳನ್ನು ಅನುಸರಿಸಬೇಕೆಂದು ಮನವಿ ಮಾಡಿದೆ.

ಜೊತೆಗೆ ಬಸ್ ಸಾರಿಗೆ ಸಂಸ್ಥೆಗಳು ಆದಾಯ ಹೆಚ್ಚಿಸಲು ಕೆಲವು ವಿಧಾನಗಳನ್ನು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಸರ್ಕಾರಕ್ಕೆ ಸೂಚಿಸಿದೆ.
1. ಎಲ್ಲ ರಸ್ತೆಗಳಲ್ಲೂ ಪಾರ್ಕಿಂಗ್ ಶುಲ್ಕ ಸಂಗ್ರಹಿಸಿ.
2. ಗರಿಷ್ಟ ಸಂಚಾರ ಸಮಯದಲ್ಲಿ ಖಾಸಗಿ ವಾಹನಗಳಿಂದ ದಟ್ಟಣೆ ಶುಲ್ಕ ( congestion tax) ಸಂಗ್ರಹಿಸಿ.
3. ಕಂಪನಿಗಳಿಗೆ ತಮ್ಮ ನೌಕರರ ಖಾಸಗಿ ಸಂಚಾರದ ಆದರದ ಮೇಲೆ ಟ್ರಾಫಿಕ್ ಸೆಸ್ಸ್ ವಿಧಿಸಿ, ಎಂಬ ಮೂರು ವಿಧಾನಗಳನ್ನು ಸೂಚಿಸಿದೆ.

ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಹಕ್ಕೊತ್ತಾಯ

1. ಸರ್ಕಾರ ಬಸ್ ದರ ಏರಿಕೆಯನ್ನು ಹಿಂಪಡಿಯಬೇಕು.
2. ಟನಲ್ ರೋಡ್ ಫ್ಲೈಓವರ್ ಮತ್ತು ಮುಂತಾದ ಯೋಜನೆಗಳು, ಎಲ್ಲೂ ಸಹ ವಾಹನ ದಟ್ಟಣೆಯನ್ನು ನಿಲ್ಲಿಸಿಲ್ಲ, ಸಂಚಾರದ ಸಮಸ್ಯೆ ಪರಿಹರಿಸಿಲ್ಲ. ಹಾಗಾಗಿ ಸರ್ಕಾರ ಈ ಯೋಜನೆಗಳನ್ನು ಕೈ ಬಿಡಬೇಕು. ಈ ಯೋಜನೆಗಳಿಗೆ ಸುರಿಯುವ ಬಂಡವಾಳವನ್ನ ಬಸ್ ಸೇವೆ ಬಲಪಡಿಸಲು ಉಪಯೋಗಿಸಬಹುದು.
3. ಬೆಂಗಳೂರಿನ ಸಂಚಾರ ಸಮಸ್ಯೆಗೆ ಪರಿಹಾರವೆಂದರೆ ಹೆಚ್ಚು ಬಸ್‌ಗಳು ಹಾಗೂ ಬಸ್ ಆದ್ಯತೆ ಲೇನ್ ( bus-lanes). ಹಾಗಾಗಿ ಸರ್ಕಾರ ಇದಕ್ಕೆ ಆಧ್ಯತೆ ನೀಡಬೇಕು.
4. ಸರ್ಕಾರ ಬಸ್ ಸೇವೆಯ ಸಾಮರ್ಥ್ಯ ಮತ್ತು ವ್ಯಾಪ್ತಿಯನ್ನು ಹೆಚ್ಚಿಸಬೇಕು.
5. ನಗರಗಳಲ್ಲಿ ಕಾರ್ ಉಪಯೋಗಿಸುವುದನ್ನು ಸರ್ಕಾರ ನಿರುತ್ಸಾಹಗೊಳಿಸಬೇಕು – ಕಾರುಗಳ ಮೇಲೆ ಪಾರ್ಕಿಂಗ್ ಶುಲ್ಕ , ದಟ್ಟಣೆ ಶುಲ್ಕ , ಟ್ರಾಫಿಕ್ ಸೆಸ್ ಅನ್ನು ವಿಧಿಸಬೇಕು. ಸಾರ್ವಜನಿಕ ಸಂಚಾರವನ್ನು ಉಪಯೋಗಿಸಲು ಪ್ರೋತ್ಸಾಹಿಸಬೇಕು, ಹಾಗಾಗಿ ಬಸ್ ದರ ಕಮ್ಮಿ ಅಥವಾ ಉಚಿತ ಮಾಡಬೇಕು.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...