Homeಕರ್ನಾಟಕಇಂದಿನಿಂದ ಆಗಸ್ಟ್‌ 15 ರ ವರೆಗೆ ಚಿತ್ರಕಲಾ ಪರಿಷತ್‌ನಲ್ಲಿ ಬೆಂಗಳೂರು ಉತ್ಸವ

ಇಂದಿನಿಂದ ಆಗಸ್ಟ್‌ 15 ರ ವರೆಗೆ ಚಿತ್ರಕಲಾ ಪರಿಷತ್‌ನಲ್ಲಿ ಬೆಂಗಳೂರು ಉತ್ಸವ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ಕರಕುಶಲಕರ್ಮಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಇಂದಿನಿಂದ (ಆಗಸ್ಟ್ 6) 10 ದಿನಗಳ ಕಾಲ ಬೆಂಗಳೂರು ಉತ್ಸವ ಆಯೋಜನೆ ಮಾಡಲಾಗಿದೆ.

10 ದಿನಗಳ ಬೆಂಗಳೂರು ಉತ್ಸವಕ್ಕೆ ಕಿರುತೆರೆಯಲ್ಲಿ ಕಿನ್ನರಿಯ ಮಣಿಯಾಗಿ ಕಮಾಲ್ ಮಾಡಿದ್ದ ಭೂಮಿ ಶೆಟ್ಟಿ ಚಾಲನೆ ನೀಡಿದ್ದಾರೆ.

ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿರುವ ನಟಿ ಭೂಮಿ ಶೆಟ್ಟಿ, ’ಕೊರೊನಾ ಕಾಲದಲ್ಲಿ ಎಲ್ಲರೂ ಸಂಕಷ್ಟ ಅನುಭವಿಸಿದ್ದಾರೆ. ಅದರಲ್ಲೂ ಕರಕುಶಲಕರ್ಮಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ತೊಂದರೆಗೀಡಾಗಿದ್ದರು. ಅವರಿಗೆ ಮಾರುಕಟ್ಟೆಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಆಯೋಜಿಸಲಾಗಿದೆ’ ಎಂದಿದ್ದಾರೆ.

ಬೆಂಗಳೂರು ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಪಾಲ್ಗೊಂಡು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡಿಬೇಕು ಎಂದು ಭೂಮಿ ಶೆಟ್ಟಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪೊಲಿಟಿಕಲ್ ಕರೆಕ್ಟ್‌ನೆಸ್ ಮತ್ತು ಸಂವೇದನೆ; ಚಿತ್ರ, ಕಾರ್ಟೂನು, ಮಾಧ್ಯಮ ಮತ್ತು ತಿಳಿವಳಿಕೆಯ ಸಂವಾದ

ಈ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಆಗಸ್ಟ್‌ 15 ರ ವರೆಗೆ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ನಡೆಯಲಿದ್ದು, ಕೊರೊನಾ ಸಾಂಕ್ರಾಮಿಕ ರೋಗ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಂಘಟಕರು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ. ಬಿ.ಎಲ್‌ ಶಂಕರ್‌, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳಾದ ಪ್ರೊ. ಕೆ.ಎಸ್‌ ಅಪ್ಪಾಜಯ್ಯ ಪಾಲ್ಗೊಂಡಿದ್ದರು.

ಮುಂಬರುವ ವರಮಹಾಲಕ್ಷ್ಮಿ ಹಬ್ಬ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ಕರಕುಶಲಕರ್ಮಿಗಳಿಗೆ ಉತ್ತಮ ಮಾರುಕಟ್ಟೆಯನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಉತ್ಸವ ಆಯೋಜಿಸಲಾಗಿದೆ ಎಂದು ಸಂಘಟಕರು ಹೇಳಿದ್ದಾರೆ.


ಇದನ್ನೂ ಓದಿ: ಈ ಅಸಹಾಯಕತೆ ಸಿಎಂ ಬೊಮ್ಮಾಯಿಯವರದ್ದಾ? ಕರ್ನಾಟಕದ ಜನರದ್ದಾ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

0
ಕೋವಿಡ್ -19 ವಿರುದ್ಧದ 'ಕೋವಿಶೀಲ್ಡ್‌' ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಮರ್ಥ್ಯವನ್ನು ಹೊಂದಿದೆ ಎಂದು ಬ್ರಿಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’  ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. TTS ಅಥವಾ...