Homeಕರ್ನಾಟಕಬೆಂಗಳೂರು ಪ್ರವಾಹ | ಸ್ಥಳಾಂತರಕ್ಕೆ ನಿರಾಕರಿಸಿದ 20 ಮನೆಯ ಬಾಗಿಲು ಒಡೆದು ತೆರವುಗೊಳಿಸಲು ಡಿಸಿಎಂ ಸೂಚನೆ

ಬೆಂಗಳೂರು ಪ್ರವಾಹ | ಸ್ಥಳಾಂತರಕ್ಕೆ ನಿರಾಕರಿಸಿದ 20 ಮನೆಯ ಬಾಗಿಲು ಒಡೆದು ತೆರವುಗೊಳಿಸಲು ಡಿಸಿಎಂ ಸೂಚನೆ

- Advertisement -
- Advertisement -

ಬೆಂಗಳೂರಿನ ಭಾರಿ ಮಳೆಗೆ ಜಲಾವೃತಗೊಂಡಿರುವ ನಗರದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರವಾಹವಿದ್ದರೂ ಅಪಾರ್ಟ್‌ಮೆಂಟ್‌ಗೆ ಬೀಗ ಹಾಕಿ ಮನೆಯೊಳಗೆ ಇರುವವರನ್ನು ಬಾಗಿಲು ಒಡೆದು ಅವರನ್ನು ಅಲ್ಲಿಂದ ತೆರವುಗೊಳಿಸುವಂತೆ ಆದೇಶಿಸಿದ್ದಾರೆ. ಸ್ಥಳಾಂತರಕ್ಕೆ ನಿರಾಕರಿಸಿದ

ಭಾರಿ ಮಳೆಯ ಕಾರಣಕ್ಕೆ ಪ್ರವಾಹ ಇದ್ದರೂ ಅಪಾರ್ಟ್‌ಮೆಂಟ್‌ನಲ್ಲಿ ಸುಮಾರು 20 ಫ್ಲ್ಯಾಟ್‌ಗಳ ಮಾಲೀಕರು ಒಳಗೆ ಬೀಗ ಜಡಿದು ತೆರವಿಗೆ ನಿರಾಕರಿಸಿದ್ದರಿಂದ ಬಾಗಿಲು ಒಡೆದು ಒಳನುಗ್ಗುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಸೂಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, “95%ದಷ್ಟು ತೆರವು ಕಾರ್ಯ ಪೂರ್ಣಗೊಂಡಿದ್ದು, 5%ದಷ್ಟು ಮಾತ್ರ ಬಾಕಿ ಇದೆ. 603 ಫ್ಲಾಟ್‌ಗಳಲ್ಲಿ ಸಾವಿರಾರು ಜನರು ವಾಸಿಸುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರು ಕೇಂದ್ರ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಾಗಿವೆ. ಹೆಚ್ಚಿನವರನ್ನು ಸ್ಥಳಾಂತರಿಸಲಾಗಿದೆ” ಎಂದು ಅವರು ಹೇಳಿದ್ದಾರೆ. ಸ್ಥಳಾಂತರಕ್ಕೆ ನಿರಾಕರಿಸಿದ

ಅಪಾರ್ಟ್‌ಮೆಂಟ್‌ನ ಆಡಳಿತದೊಂದಿಗೆ ಮಾತುಕತೆ ನಡೆಸಿ ತುರ್ತು ಕಾರ್ಯಾಚರಣೆಗಾಗಿ ಬಿಬಿಎಂಪಿ ಅಪಾರ್ಟ್ಮೆಂಟ್ ಅನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.

“ನೀರು, ವಿದ್ಯುತ್ ಮತ್ತು ಆಹಾರ ಇಲ್ಲದೆ, ಮನೆಯೊಳಗೆ ಬೀಗ ಹಾಕಿಕೊಂಡಿರುವ ಸುಮಾರು 20 ಫ್ಲ್ಯಾಟ್ ಇವೆ. ಅದರಲ್ಲಿರುವ ಜನರ ಆರೋಗ್ಯಕ್ಕೆ ಅಪಾಯ ಇರುವುದರಿಂದ ಒಕ್ಕಲಿಗರ ಸಂಘ ಮತ್ತು ಪೊಲೀಸರ ನೆರವು ಪಡೆದು ಬಾಗಿಲು ಒಡೆದು ಅವರನ್ನು ರಕ್ಷಿಸಲು ಬಿಬಿಎಂಪಿಗೆ ಆದೇಶ ನೀಡಲಾಗಿದೆ’’ ಎಂದು ಶಿವಕುಮಾರ್ ಹೇಳಿದ್ದಾರೆ.

ನಿವಾಸಿಗಳು ತಮ್ಮ ಮನೆಗಳೊಂದಿಗೆ ಇರುವ ಭಾವನಾತ್ಮಕ ಸಂಬಂಧದ ಕಾರಣಕ್ಕೆ ಅದರಿಂದ ಹೊರಗೆ ಬರಲು ನಿರಾಕರಿಸಿರಬಹುದು, ಆದರೆ ಅವರ ಸುರಕ್ಷತೆಯೂ ನಮಗೆ ಮುಖ್ಯ ಎಂದು ಅವರು ಹೇಳಿದ್ದಾರೆ. ಅವರನ್ನು ಒಂದು ವಾರದವರೆಗೆ ಹತ್ತಿರದ ಹೋಟೆಲ್‌ಗಳಲ್ಲಿ ಇರಿಸಲಾಗುವುದು ಮತ್ತು ಪರಿಸ್ಥಿತಿ ಸಹಜವಾದ ನಂತರ ಅವರನ್ನು ತಮ್ಮ ಮನೆಗಳಿಗೆ ಹಿಂತಿರುಗುವಂತೆ ಕೇಳಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

ಇದೇ ವೇಳೆ ಅವರು, ಪ್ರವಾಹದ ಮೂಲವನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಪ್ರದೇಶವು ಮೊದಲು ಜೌಗು ಪ್ರದೇಶವಾಗಿತ್ತು ಮತ್ತು ಹತ್ತಿರದ ಕೆರೆಯ ಬಫರ್ ವಲಯವಾಗಿತ್ತು. ಅಗತ್ಯ ಕ್ರಮ ಕೈಗೊಂಡು ಪ್ರವಾಹಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು. ಯಾವುದೇ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಡಿಸಿಎಂ ಹೇಳಿದ್ದಾರೆ.

ಎನ್‌ಡಿಎಂಎಫ್‌ನೊಂದಿಗೆ ಮಳೆನೀರು ಚರಂಡಿಗಳನ್ನು ಸಂಪೂರ್ಣವಾಗಿ ಮರುವಿನ್ಯಾಸಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು, ಇದಕ್ಕಾಗಿ ವಿಶ್ವಬ್ಯಾಂಕ್‌ನಿಂದ ಹಣವನ್ನು ಕೋರಲಾಗುವುದು ಎಂದು ಅವರು ಒತ್ತಿ ಹೇಳಿದ್ದಾರೆ.

ಈ ಮರುವಿನ್ಯಾಸವನ್ನು ನಗರದಾದ್ಯಂತ ದೊಡ್ಡ ಪ್ರಮಾಣದಲ್ಲಿ ಮಾಡಗುವುದು ಎಂದ ಅವರು, “ನಾವು ಕೆರೆಗಳನ್ನು ಪುನಃಸ್ಥಾಪಿಸುತ್ತೇವೆ ಮತ್ತು ಅಡೆತಡೆಗಳನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: “ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು”? ಮಕ್ಕಳ ಹಕ್ಕುಗಳ ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

“ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು”? ಮಕ್ಕಳ ಹಕ್ಕುಗಳ ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...