Homeಮುಖಪುಟಬೆಂಗಳೂರು: ಗೌರಿ ಹಂತಕರ ಜಾಮೀನು ಅರ್ಜಿ ತಿರಸ್ಕೃತ

ಬೆಂಗಳೂರು: ಗೌರಿ ಹಂತಕರ ಜಾಮೀನು ಅರ್ಜಿ ತಿರಸ್ಕೃತ

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರುವ ಪ್ರಕರಣದಲ್ಲಿ ಜಾಮೀನು ಕೋರಿ 6 ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಪ‍್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.

ಆರ್‌.ಆರ್‌ ನಗರದ ಐಡಿಯಲ್ ಹೋಮ್ಸ್ ಟೌನ್‌ಶಿಪ್‌ನಲ್ಲಿರುವ ಮನೆಯ ಎದುರೇ 2017ರ ಸೆಪ್ಟೆಂಬರ್ 5ರಂದು ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ವಿಶೇಷ ತನಿಖಾ ದಳದ (ಎಸ್‌ಐಟಿ) ಅಧಿಕಾರಿಗಳು, 16 ಆರೋಪಿಗಳನ್ನು ಬಂಧಿಸಿದ್ದರು. ಈಗ ಇವರೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

ಆರೋಪಿಗಳ ಪೈಕಿ ಅಮಿತ್ ದೇಗ್ವೇಕರ್, ಭರತ್ ಕುರ್ನೆ, ಸುಧನ್ವಾ ಗೊಂಧಲೇಕರ್, ಸುಜಿತ್‌ಕುಮಾರ್ ಅಲಿಯಾಸ್ ಪ್ರವೀಣ್, ಮನೋಹರ್ ಯಡವೆ ಹಾಗೂ ರಾಜೇಶ್ ಬಂಗೇರ್‌ ಜಾಮೀನು ಕೋರಿ ತಮ್ಮ ವಕೀಲರ ಮೂಲಕ 2020 ರಲ್ಲಿಯೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ, ಆರೂ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಶನಿವಾರ ಆದೇಶ ಹೊರಡಿಸಿದೆ.

ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲ ಉಮಾಶಂಕರ್ ಮೇವುಂಡಿ, “ತೀರ್ಪಿನಪ್ರತಿ ಪಡೆದು ಕೂಲಂಕುಷವಾಗಿ ಅಧ್ಯಯನ ನಡೆಸಲಾಗುವುದು. ಯಾವ ಆಧಾರದಲ್ಲಿ ಜಾಮೀನು ತಿರಸ್ಕರಿಸಲಾಗಿದೆ ಎಂಬುದನ್ನು ತಿಳಿದುಕೊಳ್ಳಲಾಗುವುದು. ನಂತರವೇ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು” ಎಂದರು.


ಇದನ್ನೂ ಓದಿ: ಆತ್ಮನಿರ್ಭರಕ್ಕಾಗಿ ಖಾಸಗಿಯವರನ್ನು ಬೆಂಬಲಿಸಿ: ಮೋದಿ ಹೇಳಿಕೆಗೆ ಕೆಲವು ಪ್ರಶ್ನೆಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...