Homeಕರ್ನಾಟಕಬೆಂಗಳೂರು: ಎಪ್ರಿಲ್‌ 21ರಂದು ಕೋಡಿಹಳ್ಳಿ ಚಂದ್ರಶೇಖರ್‌‌‌ ನೇತೃತ್ವದಲ್ಲಿ ಬೃಹತ್‌ ರೈತ ಸಮಾವೇಶ; ಕೇಜ್ರಿವಾಲ್‌ ಉಪಸ್ಥಿತಿ

ಬೆಂಗಳೂರು: ಎಪ್ರಿಲ್‌ 21ರಂದು ಕೋಡಿಹಳ್ಳಿ ಚಂದ್ರಶೇಖರ್‌‌‌ ನೇತೃತ್ವದಲ್ಲಿ ಬೃಹತ್‌ ರೈತ ಸಮಾವೇಶ; ಕೇಜ್ರಿವಾಲ್‌ ಉಪಸ್ಥಿತಿ

ಸಮಾವೇಶದಲ್ಲಿ ಆಮ್‌ ಆದ್ಮಿ ಪಾರ್ಟಿ ಸೇರಲಿರುವ ಕೋಡಿಹಳ್ಳಿ ಚಂದ್ರಶೇಖರ್‌?

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರು ಏಪ್ರಿಲ್‌ 21ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ ನಡೆಯಲಿರುವ ಬೃಹತ್‌ ರೈತ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿಯ ಕರ್ನಾಟಕ ಸಮಿತಿ ಸೋಮವಾರ ಹೇಳಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿದೆ. ದೆಹಲಿ ಮಾದರಿಯಿಂದ ಪ್ರೇರಣೆ ಹೊಂದಿರುವ ರಾಜ್ಯ ರೈತ ಸಂಘವು ಸಿಎಂ ಕೇಜ್ರಿವಾಲ್‌ರವರಿಗೆ ವಿಶೇಷ ಆಹ್ವಾನ ನೀಡಿದ್ದು, ಅವರು ಆಗಮಿಸಿ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾಡಿನ ಸುಮಾರು 50 ಸಾವಿರ ರೈತರು ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನವಾಗಲಿದೆ” ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಪರ್ಸೆಂಟೇಜ್‌ ಫೈಲ್ಸ್‌: ದಿಂಗಾಲೇಶ್ವರ ಸ್ವಾಮೀಜಿಯವರನ್ನು ‘ಊಸರವಳ್ಳಿ’ ಎಂದ ಬಿ.ಸಿ.ಪಾಟೀಲ್

“ಜನಸಾಮಾನ್ಯರ ಕುಂದುಕೊರತೆಗಳನ್ನು ಅರಿತುಕೊಂಡು ಬದಲಾವಣೆ ತರುತ್ತಿರುವ ಏಕೈಕ ಪಕ್ಷವೆಂದರೆ ಆಮ್‌ ಆದ್ಮಿ ಪಾರ್ಟಿ. ಪ್ರಾಮಾಣಿಕ ವ್ಯಕ್ತಿಗಳು ರಾಜಕಾರಣಕ್ಕೆ ಬಂದರೆ ಜನಪರ ಕೆಲಸಗಳನ್ನು ದೊಡ್ಡ ಮಟ್ಟದಲ್ಲಿ ಮಾಡಬಹುದು, ಭ್ರಷ್ಟಾಚಾರವಿಲ್ಲದ ಆಡಳಿತ ನೀಡಬಹುದು ಎಂಬುದನ್ನು ದೆಹಲಿಯ ಕೇಜ್ರಿವಾಲ್‌ ನೇತೃತ್ವದ ಸರ್ಕಾರ ಕಳೆದ ಏಳು ವರ್ಷಗಳಲ್ಲಿ ತೋರಿಸಿಕೊಟ್ಟಿದೆ” ಎಂದು ಅವರು ಹೇಳಿದ್ದಾರೆ.

“ತೆರಿಗೆ ಹಣವು ಕಳ್ಳ ರಾಜಕಾರಣಿಗಳ ಜೇಬು ಸೇರುವುದನ್ನು ತಪ್ಪಿಸಿ, ಅಲ್ಲಿನ ಆರೋಗ್ಯ, ಶಿಕ್ಷಣ, ನೀರು, ವಿದ್ಯುತ್ ಮುಂತಾದ ಮೂಲಸೌಕರ್ಯ ನೀಡುವುದಕ್ಕೆ ಬಳಸಲಾಗಿದೆ” ಎಂದು ಪೃಥ್ವಿ ರೆಡ್ಡಿ ತಿಳಿಸಿದ್ದಾರೆ.

“ಕಳೆದ 75 ವರ್ಷಗಳಲ್ಲಿ ಕರ್ನಾಟಕದ ರೈತರು ಮೂರೂ ಪಕ್ಷಗಳಿಗೆ ಮತ ನೀಡಿ ಗೆಲ್ಲಿಸಿ ಕಳಿಸಿದರು. ಮೂರೂ ಪಕ್ಷಗಳಲ್ಲಿ ಯಾರೂ ರೈತನ ಬವಣೆ ಅರ್ಥ ಮಾಡಿಕೊಳ್ಳಲಿಲ್ಲ. ಎಲ್ಲರಿಂದ ಅನ್ಯಾಯ ಎದುರಿಸಿ ತಾವೇ ರಾಜಕಾರಣಕ್ಕಿಳಿಯಲು ರೈತರು ತೀರ್ಮಾನಿಸಿದ್ದಾರೆ. ಅವರ ಮುಂದಿರುವ ಎಲ್ಲಾ ಆಯ್ಕೆಗಳನ್ನು ಪರಿಶೀಲಿಸಿ, ಆಮ್ ಆದ್ಮಿ ಪಾರ್ಟಿಯೊಂದೇ ತಮಗೆ ನ್ಯಾಯ ದೊರಕಿಸಿಕೊಡಲು ಸಾಧ್ಯ ಎಂಬ ತೀರ್ಮಾನಕ್ಕೆ ರೈತರು ಬಂದಿದ್ದಾರೆ” ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಪರ್ಸೆಂಟೇಜ್‌ ಫೈಲ್ಸ್‌: ಗೋವಿನ ಮೇವಿನಲ್ಲೂ ಕಮಿಷನ್‌; ಮಠಕ್ಕೆ ನೀಡಿದ ಅನುದಾನದಲ್ಲೂ ಕಮಿಷನ್‌!

“ಇತ್ತೀಚೆಗೆ ನಡೆದ ಪಂಜಾಬ್ ಚುನಾವಣೆಯಲ್ಲಿ 117 ಸ್ಥಾನಗಳ ಪೈಕಿ 92 ಸ್ಥಾನಗಳಲ್ಲಿ ಎಎಪಿ ಗೆದ್ದಿದೆ. ಇದರಲ್ಲಿ 82 ಜನರು ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದವರು. ಬೇರೆ ಪಕ್ಷದವರ ರೀತಿ ಎಎಪಿ ವ್ಯಕ್ತಿಯ ಬ್ಯಾಂಕ್ ಬ್ಯಾಲೆನ್ಸ್ ನೋಡುವುದಿಲ್ಲ. ಬದಲಾಗಿ, ಆತನ ಸಾಮಾಜಿಕ ಕಾಳಜಿ ಹಾಗೂ ಮತದಾರರ ಬಗ್ಗೆ ಇರುವ ಕಳಕಳಿಯನ್ನು ನೋಡುತ್ತದೆ. ಸಾಮಾನ್ಯರನ್ನು ನಾಯಕರನ್ನಾಗಿ ಮಾಡುವ ಎಎಪಿಯನ್ನು ಜನಸಾಮಾನ್ಯರು ಬಳಸಿಕೊಳ್ಳಬೇಕು” ಎಂದು ಇತ್ತೀಚೆಗೆ ಆಮ್‌‌ ಆದ್ಮಿ ಪಾರ್ಟಿ ಸೇರಿದ ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದ್ದಾರೆ.

ಆಮ್‌ ಆದ್ಮಿ ಪಕ್ಷ ಸೇರಲಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌?

ಬೃಹತ್‌ ರೈತ ಸಮಾವೇಶದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಅವರು ತಮ್ಮ ಸಾವಿರಾರು ರೈತರೊಂದಿಗೆ ಆಮ್‌ ಆದ್ಮಿ ಪಾರ್ಟಿ ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ನಾನುಗೌರಿ.ಕಾಂಗೆ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯೆ ನೀಡಿರುವ ಕೋಡಿಹಳ್ಳಿ ಚಂದ್ರಶೇಖರ್‌ ಅವರು ಇದನ್ನು ನಿರಾಕರಿಸಿದ್ದಾರೆ. “ಆಮ್‌ ಆದ್ಮಿ ಪಕ್ಷವನ್ನು ಸೇರುತ್ತಿಲ್ಲ. ಆದರೆ ಪಕ್ಷವೂ ಈಗ ಅನಿವಾರ್ಯ ಆಗಿರುವುದರಿಂದ ಅವರಿಗೆ ಬೆಂಬಲ ನೀಡುತ್ತಿದ್ದೇನೆ” ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...