ಬೆಂಗಳೂರಿನ ಹೊಸಗುಡ್ಡದಹಳ್ಳಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ ಸಂಭವಿಸಿದೆ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದರೆ ಬೆಂಕಿ ನಿಯಂತ್ರಣಕ್ಕೆ ಬಾರದೆ ಅಗ್ನಿಶಾಮ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಬೆಂಕಿ ಕೆನ್ನಾಲಿಗೆಗೆ ಕಾರ್ಖಾನೆ ಅಕ್ಕ ಪಕ್ಕ ನಿಲ್ಲಿಸಿದ್ದ ವೆಹಿಕಲ್‌ಗಳು ಸಹ ಬೆಂಕಿಗೆ ಆಹುತಿಯಾಗಿವೆ. ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ವ್ಯಾಪಿಸುತ್ತಿದ್ದು, ಅಕ್ಕಪಕ್ಕದವರನ್ನು ಬೇರೆಡೆಗೆ ಸ್ಥಳಾಂತರಿಸಲು ಬ್ಯಾಟರಾಯನಪುರ ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿಯ ಪ್ರಯತ್ನಿಸುತ್ತಿದ್ದಾರೆ.

ಕೆಮಿಕಲ್ ಫ್ಯಾಕ್ಟರಿಯಲ್ಲಿ ನಾಲ್ಕು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಬೆಂಕಿ ಕಾಣಿಸಿಕೊಂಡ ತಕ್ಷಣ ಹೊರ ಓಡಿ ಬಂದಿದ್ದಾರೆ. ಇಲ್ಲದಿದ್ದರೇ ಭಾರಿ ಅನಾಹುತ ಸಂಭವಿಸುತ್ತಿತ್ತು.
ಕಾರ್ಖಾನೆಯಲ್ಲಿ ಬೆಂಕಿ ನಿಯಂತ್ರಣಕ್ಕೆ ಭಾರದ ಹಿನ್ನೆಲೆ ಮತ್ತೆ ಎರಡು ಅಗ್ನಿಶಾಮಕ ದಳ ಬಂದಿವೆ. ಸದ್ಯ ಹತ್ತು ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಇಡೀ ರಸ್ತೆ ತುಂಬಾ ಬೆಂಕಿಯ ಹೊಗೆ ಆವರಿಸಿದೆ.


