Homeಕರ್ನಾಟಕಬೆಂಗಳೂರು | ಅಮಾಯಕರ ಅಕ್ರಮ ಬಂಧನ; 4 ಪೊಲೀಸರ ಅಮಾನತು

ಬೆಂಗಳೂರು | ಅಮಾಯಕರ ಅಕ್ರಮ ಬಂಧನ; 4 ಪೊಲೀಸರ ಅಮಾನತು

- Advertisement -
- Advertisement -

ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಪ್ರಕರಣದಲ್ಲಿ ಅಮಾಯಕರನ್ನು ಅಕ್ರಮವಾಗಿ ಬಂಧಿಸಿದ್ದ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಪೊಲೀಸರು ಮಾಹಿತಿದಾರರ ಸುಳಿವು ಆಧರಿಸಿ ಅಮಾಯಕರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಕರಣದಲ್ಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಶ್ರೀಧರ್ ಗುಗ್ರಿ, ಸಹಾಯಕ ಸಬ್ ಇನ್‌ಸ್ಪೆಕ್ಟರ್ (ಎಎಸ್‌ಐ) ಎಸ್‌ಕೆ ರಾಜು ಮತ್ತು ಕಾನ್‌ಸ್ಟೆಬಲ್‌ಗಳಾದ ಸತೀಶ್ ಬಗಲಿ ಮತ್ತು ತಿಮ್ಮಣ್ಣ ಪೂಜಾರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಪ್ರಸ್ತುತ ಸಂವಿಧಾನದ ಅಡಿಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಾಧ್ಯವಿಲ್ಲ: ಪಿ. ಚಿದಂಬರಂ

ಹಲವು ವರ್ಷಗಳಿಂದ ಮಾಹಿತಿದಾರರಾಗಿದ್ದ ರಾಜನ್ ನೀಡಿದ ಸುಳಿವಿನ ಆಧಾರದ ಮೇಲೆ ಆಗಸ್ಟ್ 9 ರಂದು ಬನಶಂಕರಿ ಪೊಲೀಸರು ಕಡೇನಹಳ್ಳಿ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಗಳ ದ್ವಿಚಕ್ರ ವಾಹನದಲ್ಲಿ ಬಚ್ಚಿಟ್ಟಿದ್ದ 400 ಗ್ರಾಂಗೂ ಅಧಿಕ ಮಾದಕ ದ್ರವ್ಯವನ್ನು ಪೊಲೀಸರು ವಶಪಡಿಸಿಕೊಂಡು, ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು ಎಂದು ವರದಿ ಹೇಳಿವೆ.

ಇದಾದ ಬಳಿಕ ಆರೋಪಿಯ ಕುಟುಂಬದವರು ಮಾಹಿತಿದಾರ ರಾಜನ್ ಅವರ ಮೇಲೆ ಶಂಕೆ ವ್ಯಕ್ತಪಡಿಸಿ ನಗರ ಪೊಲೀಸ್‌ ಆಯುಕ್ತರಿಗೆ ದೂರು ಸಲ್ಲಿಸಿದ್ದರು. ತನಿಖೆಯ ವೇಳೆ ರಾಜನ್‌ಗೆ ಇಬ್ಬರು ಆರೋಪಿಗಳ ಮೇಲೆ ವೈಯಕ್ತಿಕ ದ್ವೇಷವಿದ್ದು, ಅವರನ್ನು ಸಿಲುಕಿಸಲು ಸಂಚು ರೂಪಿಸಿದ್ದ ಎನ್ನಲಾಗಿದೆ. ಸ್ನೇಹಿತ ಚೈತ್ರ ಅವರ ಸಹಾಯದಿಂದ ಅವರು ಅಮಾಯಕ ಆರೋಪಿಗಳ ದ್ವಿಚಕ್ರ ವಾಹನದಲ್ಲಿ ಡ್ರಗ್ಸ್ ಅನ್ನು ಇಟ್ಟು, ನಂತರ ಪೊಲೀಸರಿಗೆ ಸುಳಿವು ನೀಡಿದ್ದರು. ಪೊಲೀಸರು ರಾಜನ್ ಮಾಹಿತಿಯನ್ನು ಪರಿಶೀಲಿಸದೆ ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.

ರಾಜನ್ ವಿರುದ್ಧದ ದೂರಿನ ಆಧಾರದ ಮೇಲೆ ಡಿಸಿಪಿ (ದಕ್ಷಿಣ), ಸುಬ್ರಹ್ಮಣ್ಯಪುರ ಉಪವಿಭಾಗದ ಎಸಿಪಿ ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿದ್ದರು. ಎಸಿಪಿ ಸೆಪ್ಟೆಂಬರ್ 12 ರಂದು ವರದಿ ಸಲ್ಲಿಸಿದ್ದು, ವರದಿಯಲ್ಲಿ ರಾಜನ್ ಅವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬೆಳವಣಿಗೆಯ ನಂತರ ರಾಜನ್ ಮತ್ತು ಚೈತ್ರ ಅವರನ್ನು ಸಹ ಬಂಧಿಸಲಾಗಿದ್ದು, ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...