Homeಮುಖಪುಟಬೆಂಗಳೂರು: ಮುನಾವರ್‌ ಬಳಿಕ ಕುನಾಲ್ ಕಮ್ರಾ ಕಾರ್ಯಕ್ರಮವೂ ರದ್ದು; ಬೆದರಿಕೆ ಆರೋಪ

ಬೆಂಗಳೂರು: ಮುನಾವರ್‌ ಬಳಿಕ ಕುನಾಲ್ ಕಮ್ರಾ ಕಾರ್ಯಕ್ರಮವೂ ರದ್ದು; ಬೆದರಿಕೆ ಆರೋಪ

- Advertisement -
- Advertisement -

ಸ್ಥಳವನ್ನು ಬಂದ್ ಮಾಡುವ ಬೆದರಿಕೆ ಮತ್ತು ವಿಶೇಷ ಆಸನ ಅನುಮತಿಗಳನ್ನು ನಿರಾಕರಿಸಿದ ಕಾರಣ ಮುಂದಿನ 20 ದಿನಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ತಮ್ಮ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಕಾಮೆಡಿಯನ್‌‌ ಕುನಾಲ್ ಕಮ್ರಾ ಘೋಷಿಸಿದ್ದಾರೆ.

ಡಿಸೆಂಬರ್ 1ರಿಂದ 19ರ ನಡುವೆ ಬೆಂಗಳೂರಿನ ಜೆಪಿ ನಗರದ ಸ್ಥಳವೊಂದರಲ್ಲಿ ‘ಕುನಾಲ್ ಕಮ್ರಾ ಲೈವ್’ ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಕಮ್ರಾ ಪ್ರದರ್ಶಿಸಲು ಸಜ್ಜಾಗಿದ್ದರು. ಇತರ ರಾಜ್ಯಗಳಲ್ಲಿ ಇದೇ ರೀತಿಯ ಕಾರಣಗಳಿಂದಾಗಿ ಅವರ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ ಎಂದು ಕುನಾಲ್ ಅವರ ಆಪ್ತ ಮೂಲಗಳು ಹೇಳಿವೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಮ್ರಾ ಅವರ ಕಾರ್ಯಕ್ರಮ ರದ್ದಾಗಿದೆ.

ಗುಜರಾತ್ ಮೂಲದ ಮುನಾವರ್ ಫರೂಕಿ ನಂತರ ಕಳೆದ ಐದು ದಿನಗಳಲ್ಲಿ ಬೆಂಗಳೂರಿನಲ್ಲಿ ತನ್ನ ಪ್ರದರ್ಶನವನ್ನು ರದ್ದುಪಡಿಸಿದ ಎರಡನೇ ಹಾಸ್ಯನಟ ಕಮ್ರಾ. ಮೂಲಗಳ ಪ್ರಕಾರ, ಬೆಂಗಳೂರಿನ ಜೆಪಿ ನಗರ ಪೊಲೀಸ್ ಠಾಣೆಯು ಕಮ್ರಾ ಅವರ ಪ್ರದರ್ಶನ ನಡೆಯಲಿರುವ ಆರ್ಟ್ ಖೋಜ್‌ ಮಾಲೀಕರಿಗೆ ಸಮನ್ಸ್ ನೀಡಿತ್ತು.

ಈ ಮಧ್ಯೆ, ನವೆಂಬರ್ 30 ರಂದು ಕೆಲವು ಜನರು ಸ್ಥಳದ ಹೊರಗೆ ಜಮಾಯಿಸಿ, ಪ್ರದರ್ಶನವನ್ನು ವಿರೋಧಿಸಿದರು. ಈ ವೇಳೆ ಪೊಲೀಸ್ ವ್ಯಾನ್ ಸ್ಥಳಕ್ಕೆ ಆಗಮಿಸಿ ಗುಂಪನ್ನು ಚದುರಿಸಿತು ಎಂದು ಮೂಲಗಳು ತಿಳಿಸಿವೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಆರ್ಟ್ ಖೋಜ್ ಜೊತೆ ಪೊಲೀಸರು ಠಾಣೆಯಲ್ಲಿ ಸಭೆ ನಡೆಸಿದರು. ಕೋವಿಡ್-19 ನಿರ್ಬಂಧಗಳಿಂದಾಗಿ ಪ್ರದರ್ಶನವನ್ನು ರದ್ದುಗೊಳಿಸಲಾಗುತ್ತಿದೆ ಎಂದು ಲಿಖಿತವಾಗಿ ತಿಳಿಸಲು ಕೇಳಿಕೊಂಡರು ಎಂದು ಮೂಲಗಳು ಹೇಳುತ್ತವೆ. ಆದರೆ, ಕುನಾಲ್ ಕಮ್ರಾ ತಮ್ಮ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ, ಬೆದರಿಕೆಗಳಿಂದಾಗಿ ಕಾರ್ಯಕ್ರಮ ರದ್ದು ಮಾಡಲಾಗಿದೆ ಆರೋಪಿಸಿದ್ದಾರೆ. ಡಿಸೆಂಬರ್ 31ರವರೆಗೆ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಪೊಲೀಸರು ಸ್ಥಳದ ಮಾಲೀಕರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಮ್ರಾ ಅವರ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ ಎಂದು ಡಿಸೆಂಬರ್‌ 1ರಂದು ಮಾಹಿತಿ ಹೊರಬಿದ್ದಿದೆ. ಮುನಾವರ್ ಅವರ ಕಾರ್ಯಕ್ರಮವನ್ನು ಬೆಂಗಳೂರಿನ ಗುಡ್ ಶೆಫರ್ಡ್ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ರದ್ದು ಮಾಡುವಾಗ ಪೊಲೀಸರು, “ಮುನಾವರ್ ಅವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ವಿವಾದಾತ್ಮಕ ವ್ಯಕ್ತಿಯಾಗಿರುವುದರಿಂದ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು” ಎಂದಿದ್ದರು. ಕುನಾಲ್ ಕಮ್ರಾ ಪ್ರಕರಣದಲ್ಲಿ, ಪೊಲೀಸರು ಯಾವುದೇ ಆಕ್ಷೇಪಣೆಯನ್ನು ಲಿಖಿತವಾಗಿ ನೀಡಿಲ್ಲ.

ಎರಡು ಕಾರಣಗಳಿಂದಾಗಿ ಬೆಂಗಳೂರಿನಲ್ಲಿ ತನ್ನ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ ಎಂದು ಕಮ್ರಾ ಆರೋಪಿಸಿದ್ದಾರೆ. “ಮೊದಲನೆಯದಾಗಿ, ಹೆಚ್ಚು ಕುಳಿತುಕೊಳ್ಳಬಹುದಾದ ಸ್ಥಳದಲ್ಲಿ 45 ಜನರನ್ನು ಕೂರಿಸಲು ನಾವು ವಿಶೇಷ ಅನುಮತಿಗಳನ್ನು ಪಡೆದಿಲ್ಲ. ಎರಡನೆಯದಾಗಿ, ನಾನು ಎಂದಾದರೂ ಅಲ್ಲಿ ಪ್ರದರ್ಶನ ನೀಡಿದರೆ ಸ್ಥಳವನ್ನು ಮುಚ್ಚುವುದಾಗಿ ಬೆದರಿಕೆ ಹಾಕಲಾಗಿದೆ. ಇದು COVID-19 ಪ್ರೋಟೋಕಾಲ್ ಮತ್ತು ಹೊಸ ಮಾರ್ಗಸೂಚಿಗಳ ಭಾಗವಾಗಿದೆ ಎಂದು ನಾನು ಭಾವಿಸುತ್ತೇನೆ. ವೈರಸ್‌ನ ರೂಪಾಂತರದಂತೆ ನಾನು ಕಾಣುತ್ತಿದ್ದೇನೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ ಕಮ್ರಾ.

“ತನ್ನ ಪರಿಸ್ಥಿತಿಯನ್ನು ಮುನಾವರ್‌ಗೆ ಹೋಲಿಸಿರುವ ಕಮ್ರಾ, ಇಬ್ಬರನ್ನೂ ಒಂದೇ ರೀತಿಯಲ್ಲಿ ಮೌನಗೊಳಿಸಲಾಗುತ್ತಿದೆ ಎಂದು ದೂರಿದ್ದಾರೆ. ‘ಫಾರೂಕಿ ಹಾಸ್ಯವನ್ನು ತೊರೆಯಬೇಕಾದಾಗ ಕಮ್ರಾ ಹೇಗೆ ಪ್ರದರ್ಶನ ನೀಡುತ್ತಾನೆ’ ಎಂದು ಆಶ್ಚರ್ಯ ಪಡುವವರಿಗೆ ಆಡಳಿತ ವರ್ಗವು ಕನಿಷ್ಠ ಸಮಾನತೆಯಿಂದ ದಬ್ಬಾಳಿಕೆ ಮಾಡಲು ಪ್ರಯತ್ನಿಸುತ್ತಿದೆ ಎಂಬ ಅಂಶದಿಂದ ನಾವು ಸಾಂತ್ವನವನ್ನು ಕಂಡುಕೊಳ್ಳಬಹುದು” ಎಂದು ಅವರು ಬರೆದಿದ್ದಾರೆ.


ಇದನ್ನೂ ಓದಿರಿ: ಕರ್ನಾಟಕ ಹೈಕೋರ್ಟ್‌ನ ವಿಚಾರಣೆಯ ವೇಳೆ ಅರೆಬೆತ್ತಲೆಯಾಗಿ ಸ್ನಾನ ಮಾಡಿದ ವ್ಯಕ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...