Homeಕರ್ನಾಟಕಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌!

ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌!

- Advertisement -
- Advertisement -

ಬೆಂಗಳೂರಿನ ‘ನಮ್ಮ ಮೆಟ್ರೋ’ ದರ ಏರಿಕೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಆಟೋಮೊಬೈಲ್ ಎಂಜಿನಿಯರ್ ಸನತ್ ಕುಮಾರ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರ ವಿಭಾಗೀಯ ಪೀಠ ವಜಾಗೊಳಿಸಿದೆ. ಬೆಂಗಳೂರು ಮೆಟ್ರೋ

ಅರ್ಜಿಯಲ್ಲಿನ ಖಂಡನೆಗಳನ್ನು ಪರಿಶೀಲಿಸಿ ಅರ್ಜಿಯನ್ನು ಪರಿಗಣಿಸಿದ್ದ ಪೀಠವು, ಪ್ರಸ್ತುತ ದರ ಏರಿಕೆಯ ವಿಷಯಕ್ಕೆ ಸಂಬಂಧಿಸಿದಂತೆ, ಕಾಯ್ದೆಯ ಸೆಕ್ಷನ್ 33 ರ ಅಡಿಯಲ್ಲಿ ಮೆಟ್ರೋ ಆಡಳಿತವು ಕಾಲಕಾಲಕ್ಕೆ ದರವನ್ನು ನಿಗದಿಪಡಿಸಲು ಅಧಿಕಾರ ಹೊಂದಿದೆ. ಇದನ್ನು ದರ ನಿಗದಿ ಸಮಿತಿಯ ಶಿಫಾರಸ್ಸಿನ ಮೇಲೆ ಮಾಡಲಾಗುತ್ತದೆ ಎಂದು ಹೈಕೋರ್ಟ್‌ ಹೇಳಿದೆ. ಬೆಂಗಳೂರು ಮೆಟ್ರೋ

“ಮೆಟ್ರೋ ರೈಲು ಕಾರ್ಯಾಚರಣೆಗಾಗಿ ರೈಲ್ವೆ ಆಡಳಿತದ ದರ ನಿಗದಿಯು ಶಾಸನಬದ್ಧ ಪ್ರಕ್ರಿಯೆಯಾಗಿದೆ. ದರ ನಿಗದಿ ಸಮಿತಿಗೆ ಇದರ ಕಾರ್ಯವನ್ನು ವಹಿಸಲಾಗಿದೆ. ದರ ನಿಗದಿಯು ತಜ್ಞರ ಪ್ರಕ್ರಿಯೆಯಾಗಿದೆ. ಅಂತಹ ಅಂಶಗಳನ್ನು ಪರಿಶೀಲಿಸುವುದು ನ್ಯಾಯಾಲಯದ ಕೆಲಸವಲ್ಲ. ಅದನ್ನು ದರ ನಿಗದಿ ಸಮಿತಿಯಿಂದ ಪರಿಗಣಿಸುವುದು ಉತ್ತಮ. ಶಾಸನಬದ್ಧ ಉಲ್ಲಂಘನೆಯನ್ನು ಸೂಚಿಸದ ಹೊರತು ನ್ಯಾಯಾಲಯವು ಅಂತಹ ನಿರ್ಧಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ” ಎಂದು ಪೀಠವೂ ಹೇಳಿದೆ.

ಅರ್ಜಿದಾರರ ಪರ ವಾದಿಸಿದ ವಕೀಲರು, ದರ ಹೆಚ್ಚಳವನ್ನು ಶೇಕಡಾ 71 ರಷ್ಟು ಹೆಚ್ಚಿಸಲಾಗಿದೆ. ಇದು ಪ್ರಾಮಿಸರಿ ಎಸ್ಟೋಪೆಲ್ ತತ್ವಗಳು ಮತ್ತು ಕಾನೂನುಬದ್ಧ ನಿರೀಕ್ಷೆಗೆ ವಿರುದ್ಧವಾಗಿದೆ ಎಂದು ವಾದಿಸಿದರು. ಇದಲ್ಲದೆ ಅವರು (ಬೆಂಗಳೂರು ಮೆಟ್ರೋ ರೈಲ್ವೆ ನಿಗಮ) ನಿಲ್ದಾಣವಾರು ದರಗಳನ್ನು ನಿಗದಿಪಡಿಸಬೇಕಿತ್ತು. ಆದರೆ ಅವರು ಅದರ ಬದಲಿಗೆ ಅದನ್ನು ಹಂತವಾರು ನಿಗದಿಪಡಿಸಿದ್ದಾರೆ. ಇದರಲ್ಲಿ ಒಂದು ಹಂತದಲ್ಲಿ 2 ರಿಂದ 3 ನಿಲ್ದಾಣಗಳನ್ನು ಒಳಗೊಂಡಿದೆ ಎಂದು ವಾದಿಸಲಾಯಿತು.

“ಪ್ರಾಮಿಸರಿ ಎಸ್ಟೊಪೆಲ್ ಉಲ್ಲಂಘನೆ ಅಥವಾ ಕಾನೂನುಬದ್ಧ ನಿರೀಕ್ಷೆಯ ನಿರಾಕರಣೆಯ ಬಗ್ಗೆ ಅರ್ಜಿದಾರರ ವಾದವನ್ನು ತಿರಸ್ಕರಿಸಿದ ನ್ಯಾಯಾಲಯವು,” ಯಾವುದೇ ಸಮಯದಲ್ಲೂ ದರವನ್ನು ಹೆಚ್ಚಿಸುವುದಿಲ್ಲ ಎಂದು ಯಾವುದೇ ಭರವಸೆ ನೀಡಲಾಗಿಲ್ಲ. ಕಾನೂನುಬದ್ಧ ನಿರೀಕ್ಷೆಯ ಪರಿಕಲ್ಪನೆಯನ್ನು ಇದರಲ್ಲಿ ಅನ್ವಯಿಸಲಾಗುವುದಿಲ್ಲ. ಇದರ ಸಂದರ್ಭಗಳು ಕಾನೂನುಬದ್ಧ ನಿರೀಕ್ಷೆಯ ಉಲ್ಲಂಘನೆಯಾಗಿದೆ ಎಂದು ಸೂಚಿಸುವುದಿಲ್ಲ ಎಂದು ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ದೆಹಲಿ ಗಲಭೆ ಪ್ರಕರಣ | ಬಿಜೆಪಿ ನಾಯಕ ಕಪಿಲ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ದೆಹಲಿ ಗಲಭೆ ಪ್ರಕರಣ | ಬಿಜೆಪಿ ನಾಯಕ ಕಪಿಲ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...