Homeಕರ್ನಾಟಕಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದರು. ಆದರೆ ಉದ್ಘಾಟನೆಯಾದ ಮರುದಿನವೇ ರಾಷ್ಟ್ರೀಯ ದಶಪಥ ಹೆದ್ದಾರಿಯ ಟಾರ್ ಕಿತ್ತು ಬಂದಿದೆ. ಮತ್ತೊಂದೆಡೆ ಹಲವು ಸಂಘಟನೆಗಳು ಟೋಲ್ ಸಂಗ್ರಹ ವಿಚಾರಕ್ಕೆ ಪ್ರತಿಭಟನೆಗಳನ್ನು ನಡೆಸಿದ್ದಾರೆ.

ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್‌ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ಟಾರ್ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆದಿದೆ. ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್‌ ಹಾಕಲಾಗಿದೆ.

ಈ ಕಾಮಗಾರಿಯಲ್ಲೂ ಬಿಜೆಪಿ ಸಂಸದ ಕಮಿಷನ್ ತಿಂದ ಆರೋಪ

ಮಂಗಳವಾರ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು, ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ. ಕಮಿಷನ್ ತಿಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಮಗಾರಿಯಲ್ಲಿ ದೊಡ್ಡ ಅಕ್ರಮವಾಗಿದ್ದು, ಹೆದ್ದಾರಿಗೆ ಸರಬರಾಜು ಆಗಿರುವ ಸಾಮಗ್ರಿಗಳು ಪ್ರತಾಪ್ ಸಿಂಹ ಬೆಂಬಲಿಗರಿಗೆ ಸೇರಿದ್ದಾಗಿವೆ. ಆ ರೀತಿಯಲ್ಲಿ ಕೋಟ್ಯಾಂತರ ರೂ ಕಮಿಷನ್ ಹೊಡೆದಿದ್ದಾರೆ. ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ ಎಂದು ಪ್ರಶ್ನಿಸಿದರು.

ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಯ ದಿನವೇ ಅಪಘಾತವೊಂದು ಸಂಭವಿಸಿತ್ತು. ಭಾನುವಾರ ಹೆದ್ದಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸುಮಾರು 50 ಮೀಟರ್‌ ದೂರ ನಡೆಯುವ ಮೂಲಕ ಅಧಿಕೃತವಾಗಿ ದಶಪಥ ರಸ್ತೆಯನ್ನು ಉದ್ಘಾಟಿಸಿದರು.

ಉದ್ಘಾಟನೆಯ ಬಳಿಕ ಮಧ್ಯಾಹ್ನ 2:30ರ ಸುಮಾರಿಗೆ ಮದ್ದೂರು ಶಿಂಷಾ ನದಿ ಸೇತುವೆ ಬಳಿ ಕಾರು ಅಪಘಾತ ಸಂಭವಿಸಿತ್ತು. ಬೆಂಗಳೂರಿನಿಂದ ಮೈಸೂರಿನ ಕಡೆಗೆ ಸಂಚರಿಸುತ್ತಿದ್ದ ಕಾರು, ಶಿಂಷಾ ನದಿ ಸೇತುವೆಯ ಬಳಿ ತಡೆಗೋಡೆಗೆ ಡಿಕ್ಕಿಯಾಗಿತ್ತು. ಡಿಕ್ಕಿಯಾದ ರಭಸಕ್ಕೆ ಕಾರು ಪಲ್ಟಿಯಾಗಿತ್ತು. ಈ ರಸ್ತೆಯು ಅವೈಜ್ಣಾನಿಕವಾಗಿದೆ ಎಂದು ಹಲವರು ಈ ಹಿಂದಿನಿಂದಲೂ ಆರೋಪಿಸುತ್ತಿದ್ದರು.

ಇದನ್ನೂ ಓದಿ: ಮೋದಿ ರೋಡ್‌ ಶೋ: ಒಂದು ಬದಿಗಷ್ಟೇ ಡಾಂಬರು, ಅಲಂಕಾರ ಮತ್ತೊಂದು ಬದಿಯಲ್ಲಿ ಗುಂಡಿಗಳ ಸಾಲು

ಟೋಲ್ ಸಂಗ್ರಹಕ್ಕೆ ವಿರೋಧ

ರಾಷ್ಟ್ರೀಯ ಹೆದ್ದಾರಿ ಪ್ರಧಿಕಾರವು ವಾಹನ ಸವಾರರಿಂದ ಮಂಗಳವಾರ (ಮಾರ್ಚ್ 14)ದಂದು ಟೋಲ್ ಸಂಗ್ರಹಕ್ಕೆ ಮುಂದಾಗಿದೆ. ಸುಮಾರು 55 ಕಿ.ಮೀ, ಹೆದ್ದಾರಿಗೆ ಬೆಳಗ್ಗೆ 8 ಗಂಟೆಯಿಂದಲೇ ಟೋಲ್ ಸಂಗ್ರಹಿಸಲು ಮುಂದಾಗಿದ್ದರು. ಆದರೆ ವಾಹನ ಸವಾರರು ಹಾಗೂ ಹಲವು ಸಂಘಟನೆಯವರು ವಿರೋಧ ವ್ಯಕ್ತಪಡಿಸಿದರು.

ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಹತ್ತಿರ ಟೋಲ್ ಸಂಗ್ರಹ ಮಾಡಲು ನಿರ್ಧರಿಸಿದ್ದರು. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹ ಮಾಡಲು ಮುಂದಾಗಿದ್ದಾರೆ. ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಕಣಿಮಿಣಿಕೆ ಟೋಲ್ ಪ್ಲಾಜಾ ಬಳಿ ಪ್ರತಿಭಟನೆ ನಡೆಸಿದ್ದರು, ಅವರನ್ನೆಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟೋಲ್ ದರ ಹೀಗಿದೆ:

  • ಕಾರು, ಜೀಪು, ವ್ಯಾನ್​ಗಳಿಗೆ ಏಕಮುಖ ಸಂಚಾರಕ್ಕೆ 135 ರೂ., ಎರಡೂ ಕಡೆಗೆ 205 ರೂ.
  • ಲಘು ವಾಣಿಜ್ಯ ವಾಹನಗಳು, ಲಘು ಸರಕು ವಾಹನ, ಮಿನಿ ಬಸ್​ಗಳಿಗೆ ಏಕಮುಖ ಸಂಚಾರಕ್ಕೆ 220 ರೂ., ಅದೇ ದಿನ ಮರುಸಂಚಾರಕ್ಕೆ 330 ರೂಪಾಯಿ.
  • ಬಸ್/ಟ್ರಕ್​ಗಳಿಗೆ ಏಕಮುಖ ಸಂಚಾರಕ್ಕೆ 460 ರೂ, ಎರಡೂ ಕಡೆಗೆ 690 ರೂ.

ಟೋಲ್ ಶುಲ್ಕ ಸಂಗ್ರಹ ಮಾಡಲು ಮುಂದಾಗುತ್ತಿದ್ದಂತೆಯೇ ಹಲವು ಸಂಘಟನೆಗಳ ಮುಖಂಡರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ದಕ್ಷಿಣದ ಕಣಿಮಿಣಿಕೆ ಮತ್ತು ರಾಮನಗರ ಬಳಿಯ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಹಲವು ಸಂಘಟನೆಗಳು ಮತ್ತು ಕಾಂಗ್ರೆಸ್‌ ನಾಯಕರು ಸರ್ಕಾರ ಜನರಿಂದ ಹೆಚ್ಚಿನ ದರ ವಿಧಿಸಿ ಸುಲಿಗೆ ಮಾಡುತ್ತಿದೆ ಎಂದು ಪ್ರತಿಭಟನೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಮಂಗಳವಾರ ಬೆಳಗ್ಗೆ ಹಲವು ಸಂಘಟನೆಗಳು ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿವೆ. ಧರಣಿಗೆ ಕರೆ ಹಿನ್ನೆಲೆ ವಾಹನ ಸವಾರರಿಗೆ ಪ್ರತಿಭಟನೆಯ ಬಿಸಿ ಮುಟ್ಟಿದೆ ಎನ್ನಲಾಗಿದೆ. ಇದರಿಂದ ಸಂಚಾರ ದಟ್ಟಣೆಯೂ ಕೂಡ ಆಗಿದೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ. ಹಲವು ವಾಹನ ಸವಾರರು ಈ ಟೋಲ್ ಸಂಗ್ರದ ವಿಚಾರವಾಗಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಪ್ರತಿಭಟನೆಯ ಕಾವು ಜೋರಾಗುತ್ತಿದ್ದಂತೆ ಟೋಲ್ ಪ್ಲಾಜಾಗಳಲ್ಲಿ ಸೂಕ್ತ ಪೊಲೀಸ್‌ ಭದ್ರತೆ ಒದಗಿಸಲು ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್ ರಾಮನಗರ ಡಿಸಿ, ಎಸ್‌ಪಿಗೆ ಮನವಿ ಮಾಡಿದ್ದಾರೆ. ಅದರಂತೆಯೇ ಟೋಲ್‌ ಬಳಿ 3 ಕೆಎಸ್​ಆರ್​ಪಿ ತುಕಡಿ, ಸ್ಥಳೀಯ ಪೊಲೀಸರ ನಿಯೋಜನೆ ಮಾಡಿದ್ದಾರೆ. ಭದ್ರತೆಗಾಗಿ 200‌ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಗಿದೆ. ಎಸ್‌ಪಿ ಕಾರ್ತಿಕ್ ರೆಡ್ಡಿ‌ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...