Homeಕರ್ನಾಟಕಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪೂರ್ಣಗೊಳ್ಳದೇ ಟೋಲ್ ಸಂಗ್ರಹ: ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದ ಹೈಕೋರ್ಟ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪೂರ್ಣಗೊಳ್ಳದೇ ಟೋಲ್ ಸಂಗ್ರಹ: ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (ಎನ್‌ಎಚ್ 275) ಆರಂಭವಾದ ಮೊದಲ ದಿನದಿಂದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಟೋಲ್ ಸಂಗ್ರಹಿಸಲು ಮುಂದಾಗಿದ್ದು, ಇದರಿಂದ ವಾಹನ ಚಾಲಕರಿಗೆ ಸಾಕಷ್ಟು ಸಮಸ್ಯೆ ಉಂಟಾಗಿದೆ. ಈ ಕುರಿತು ಮಾಧ್ಯಮಗಳು ನಿರಂತರವಾಗಿ ವರದಿ ಬಿತ್ತರಿಸುತ್ತಿರುವ ಹಿನ್ನೆಲೆ ಕರ್ನಾಟಕ ಹೈಕೋರ್ಟ್ ಬುಧವಾರ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಲು ಮುಂದಾಗಿದೆ.

ವಾಹನ ಚಾಲಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಮೂರು ವಾರಗಳಲ್ಲಿ ಪ್ರತಿಕ್ರಿಯೆ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ನೇತೃತ್ವದ ವಿಭಾಗೀಯ ಪೀಠವು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ಸೂಚನೆ ನೀಡಿದೆ.

ಬೆಂಗಳೂರಿನಿಂದ ಕನಕಪುರದವರೆಗಿನ NH-209 ರ ಅಗಲೀಕರಣ ಮತ್ತು ನಿರ್ವಹಣಾ ಕಾಮಗಾರಿಗಳಲ್ಲಿ ವಿಳಂಬ ಮತ್ತು ಸುರಕ್ಷತಾ ಕ್ರಮಗಳನ್ನು ಅನುಸರಿಸದಿರುವುದುರ ಕುರಿತಾದ PIL ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಪೀಠವು ಈ ನಿರ್ದೇಶನಗಳನ್ನು ನೀಡಿದೆ.

ಇದನ್ನೂ ಓದು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

”ಕಾಮಗಾರಿ ಇನ್ನೂ ಪೂರ್ಣಗೊಳ್ಳದೇ ತೆರಿಗೆ ಅಥವಾ ಟೋಲ್‌ ವಸೂಲಿ ಮಾಡುವುದು ನ್ಯಾಯಸಮ್ಮತವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಸುದ್ದಿಯನ್ನು ನ್ಯಾಯಾಲಯ ಉಲ್ಲೇಖಿಸಿದೆ. ತಾಂತ್ರಿಕ ದೋಷಗಳಿಂದಾಗಿ ಟೋಲ್ ಬಳಿಯಿರುವ ಸೆನ್ಸಾರ್‌ಗಳು ಕೆಲಸ ಮಾಡುತ್ತಿಲ್ಲ. ಬೂಮ್ ಬ್ಯಾರಿಯರ್‌ಗಳು ಕಾರಿನ ಗಾಜು, ಡಿಕ್ಕಿಗಳ ಮೇಲೆ ಬೀಳುತ್ತವೆ.ಇದರಿಂದ ಸರ್ಕಾರಿ ವಾಹನಗಳು ಜಖಂಗೊಂಡಿವೆ ಇದಕ್ಕೆ ದೋಷಪೂರಿತ ಕಾರ್ಯನಿರ್ವಹಣೆ ಅಥವಾ ಕಾರ್ಯವಿಧಾನವೇ ಕಾರಣ” ಎಂದು ಪೀಠವು ಹೇಳಿದೆ.

ಸುದ್ದಿ ವರದಿಗಳನ್ನು ಉಲ್ಲೇಖಿಸಿದ ಪೀಠವು, ”ಫಾಸ್ಟ್-ಟ್ರ್ಯಾಕ್ ಗುರುತಿಸುವಿಕೆಯಲ್ಲಿ ತಾಂತ್ರಿಕ ದೋಷಗಳಿಂದಾಗಿ ವಾಹನ ಸವಾರರು ದೀರ್ಘ ಸರತಿ ಸಾಲಿನಲ್ಲಿ ಕಾಯುವಂತಾಗಿದೆ. ಇವೆಲ್ಲವೂ ವಾಹನಗಳ ದಟ್ಟಣೆಗೆ ಕಾರಣವಾಯಿತು ಮತ್ತು ವಾಹನ ಚಾಲಕರು ಸರ್ವಿಸ್ ರಸ್ತೆಯನ್ನು ಬಳಸಲು ಒತ್ತಾಯಿಸಿರುವ” ಬಗ್ಗೆಯೂ ಪೀಠವು ಉಲ್ಲೇಖಿಸಿದೆ.

ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಗಳು, 2008ಅನ್ನು ಉಲ್ಲೇಖಿಸಿದ ಪೀಠವು, ಎಲ್ಲಾ ನಿಯಮಗಳನ್ನು ಅನುಸರಿಸಲಾಗಿದೆಯೇ ಎಂದು ತಿಳಿದುಕೊಳ್ಳುವ ಪ್ರಯತ್ನ ಮಾಡಿತು. “ರಾಷ್ಟ್ರೀಯ ಹೆದ್ದಾರಿಗಳ (ದರಗಳು ಮತ್ತು ಸಂಗ್ರಹಣೆಯ ನಿರ್ಣಯ) ನಿಯಮಗಳು-2008ಕ್ಕಿಂತ ಇದು ಸ್ವಲ್ಪ ಭಿನ್ನವಾಗಿರಬಹುದು. ಆದರೆ ನಿಯಮ 3 ಶುಲ್ಕವನ್ನು ವಿಧಿಸುವುದನ್ನು ಉಲ್ಲೇಖಿಸುತ್ತದೆ. ಅಧಿಸೂಚನೆಯ ಪ್ರಕಟಣೆ ಮತ್ತು ಶುಲ್ಕದ ಅಧಿಸೂಚನೆ ಮತ್ತು ಸಂಗ್ರಹಣೆಯ ನಡುವಿನ ನಿಗದಿತ ಅವಧಿ ಸೇರಿದಂತೆ ವಿವಿಧ ಪೂರ್ವಾಪೇಕ್ಷಿತಗಳಿವೆ. ಆದರೆ ಈ ಅಂಶಗಳ ಬಗ್ಗೆ ಗಮನಹರಿಸದೆ ಪ್ರಯಾಣಿಕರಿಂದ ಟೋಲ್ ವಸೂಲಿ ಮಾಡಲಾಗುತ್ತಿದೆ ಎಂದು ಪೀಠ ಹೇಳಿದೆ.

ಬೆಂಗಳೂರು-ಕನಕಪುರ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಈ ರಸ್ತೆಯ ವಿಸ್ತರಣೆಯನ್ನು ಪರಿಶೀಲಿಸಲು ನ್ಯಾಯಾಲಯದ ಆಯುಕ್ತರಾಗಿ ನ್ಯಾಯವಾದಿ ಶಿವಪ್ರಸಾದ್ ಶಾನನಗೌಡರನ್ನು ನೇಮಿಸಿತು.

ತಾಂತ್ರಿಕ ಅಂಶಗಳ ಕುರಿತು ನ್ಯಾಯಾಲಯದ ಆಯುಕ್ತರಿಗೆ ಸಹಾಯ ಮಾಡಲು ಸಹಾಯಕ ಅಭಿಯಂತರರನ್ನು ನಿಯೋಜಿಸುವಂತೆ ರಾಮನಗರ ವಿಭಾಗದ ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ. ಕೆಲಸದ ಹಂತ, ಕೆಲಸದ ಗುಣಮಟ್ಟ ಮತ್ತು ಸುರಕ್ಷತಾ ಕ್ರಮಗಳ ಅನುಸರಣೆಯನ್ನು ಮೌಲ್ಯಮಾಪನ ಮಾಡಲು ಮತ್ತು ಮೂರು ವಾರಗಳಲ್ಲಿ ಅದರ ವರದಿ ನೀಡುವಂತೆ ನ್ಯಾಯಾಲಯವು ಆಯುಕ್ತರಿಗೆ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...