Homeಚಳವಳಿರ್‍ಯಾಲಿಗೆ ಟ್ರಾಕ್ಟರ್‌ ತರಬೇಡಿ ಎಂದ ಬೆಂಗಳೂರು ಪೊಲೀಸರು: ತಂದೇ ತರುತ್ತೇವೆ ಎಂದ ರೈತರು!

ರ್‍ಯಾಲಿಗೆ ಟ್ರಾಕ್ಟರ್‌ ತರಬೇಡಿ ಎಂದ ಬೆಂಗಳೂರು ಪೊಲೀಸರು: ತಂದೇ ತರುತ್ತೇವೆ ಎಂದ ರೈತರು!

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾನೂನನ್ನು ವಿರೋಧಿಸಿ ಜ.26 ರಂದು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿರುವ ರೈತರ ರ್‍ಯಾಲಿಗೆ ಟ್ರಾಕ್ಟರ್‌‌‌ಗಳನ್ನು ತರಬಾರದು ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.

ಗಣರಾಜ್ಯೋತ್ಸವ ದಿನದಂದು ರೈತರು ಬೆಂಗಳೂರಿನಲ್ಲಿ ಬೃಹತ್‌ ರ್‍ಯಾಲಿಯನ್ನು ಈಗಾಗಲೇ ಆಯೋಜಿಸಿದ್ದಾರೆ. ಆದರೆ ಪೊಲೀಸರು, “ಪ್ರತಿಭಟನೆಯಲ್ಲಿ ಭಾಗವಹಿಸುವ ರೈತರು ಟ್ರಾಕ್ಟರ್‌‌ನಲ್ಲಿ ಬಂದರೆ ಟ್ರಾಫಿಕ್ ಜಾಂ ಆಗುತ್ತದೆ, ಆದ್ದರಿಂದ ಟ್ರ್ಯಾಕ್ಟರ್ ಮೂಲಕ ಬರುವ ಹಾಗಿಲ್ಲ. ಟ್ರಾಕ್ಟರ್‌‌ ಬಿಟ್ಟು ಬೇರೆ ಯಾವುದೇ ವಾಹನಗಳಲ್ಲಿ ಆಗಮಿಸಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ ಜ. 26ರಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್‌ ಪರೇಡ್‌; ರಾಜಧಾನಿಯತ್ತ 5000 ವಾಹನಗಳು!

ಟ್ರಾಕ್ಟರ್‌ಗಳನ್ನು ನಗರದ ಒಳಗೆ ಬಿಡದಂತೆ ಪ್ರವೇಶದ ಸ್ಥಳದಲ್ಲೇ ತಡೆಯುವಂತೆ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಆದರೆ ಇದನ್ನು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ವಿರೋಧಿಸಿದ್ದು, “ರಾಜ್ಯದಲ್ಲಿ ರೈತರು, ಕಾರ್ಮಿಕರು ದಲಿತರು ಸೇರಿ ಬೆಂಗಳೂರಲ್ಲಿ ಟ್ರಾಕ್ಟರ್‌‌ ಪೆರೇಡ್ ಮೂಲಕ ಗಣರಾಜ್ಯೋತ್ಸವ ಆಚರಣೆ ಮಾಡಲು ತೀರ್ಮಾನ ಮಾಡಿದ್ದೇವೆ. ಟ್ರಾಕ್ಟರ್ ರೈತರ ಸಂಕೇತ. ಈ‌ ಕಾರ್ಯಕ್ರಮ ಟ್ರಾಕ್ಟರ್ ವರ್ಸರ್ಸ್ ಟ್ಯಾಂಕರ್ ಆಗಿದೆ. ಟ್ರಾಕ್ಟರ್‌ಗಳಿಗೆ ಅಡ್ಡಿಪಡಿಸಬೇಡಿ, ನಮ್ಮನ್ನು ಗೌರವಯುತವಾಗಿ ಬೆಂಗಳೂರಿಗೆ ಬರ ಮಾಡಿಕೊಂಡು ಅಷ್ಟೇ ಗೌರವವಾಗಿ ಬಿಳ್ಕೊಡಿ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬೊಮ್ಮಯಿ ಅವರಿಗೆ ವಿನಂತಿ ಮಾಡಿದ್ದಾರೆ.

“ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಶಿಸ್ತಿನಿಂದ ಕಾರ್ಯಕ್ರಮ ನಡೆಸಿ, ಮತ್ತೆ ವಾಪಸ್ ಹಳ್ಳಿಗಳಿಗೆ ತೆರಳುತ್ತೇವೆ. ನೀವು ಟ್ರಾಕ್ಟರ್ ತಡೆದರೆ ‌ಅಲ್ಲಿಯೇ ನಮ್ಮ ರೈತರು ಬೀದಿಯಲ್ಲಿ ಕುಳಿತುಕೊಳ್ಳುತ್ತಾರೆ. ಸಂಚಾರ ಅಸ್ತವ್ಯಸ್ತ ಮಾಡಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಬಲವಂತವಾಗಿ ರೈತ ಜಾಥಾ ತಡೆದ ಪೊಲೀಸರು: ರೈತ ಮುಖಂಡರ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...