Homeಕರ್ನಾಟಕಬೆಂಗಳೂರು: ಹಾಸ್ಯ ಕಾರ್ಯಕ್ರಮ ರದ್ದು ಮಾಡುವಂತೆ ದೂರು ನೀಡಿದ ಬಲಪಂಥೀಯರು; ಹಾಸ್ಯನಟ ವೀರ್‌‌ ದಾಸ್ ವಿರುದ್ಧ...

ಬೆಂಗಳೂರು: ಹಾಸ್ಯ ಕಾರ್ಯಕ್ರಮ ರದ್ದು ಮಾಡುವಂತೆ ದೂರು ನೀಡಿದ ಬಲಪಂಥೀಯರು; ಹಾಸ್ಯನಟ ವೀರ್‌‌ ದಾಸ್ ವಿರುದ್ಧ FIR

- Advertisement -
- Advertisement -

ನವೆಂಬರ್ 10 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾಮೇಡಿಯನ್‌ ವೀರ್‌‌ ದಾಸ್ ಅವರ ಹಾಸ್ಯ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಬಲಪಂಥೀಯ ಸಂಘಟನೆ ಹಿಂದೂ ಜನಜಾಗೃತಿ ಸಮಿತಿ ಪೊಲೀಸರಿಗೆ ದೂರು ನೀಡಿದೆ. ಅವರ ದೂರಿನ ಮೇರೆಗೆ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ವೀರ್‌‌ ದಾಸ್ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಸ್ಟ್ಯಾಂಡ್ ಅಪ್ ಕಾಮಿಡಿಯನ್ ಆಗಿರುವ ವೀರ್‌‌ ದಾಸ್ ಅವರ ಕಾರ್ಯಕ್ರಮವೂ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಮತ್ತು ಭಾರತವನ್ನು ಜಗತ್ತಿಗೆ ಕೆಟ್ಟ ರೀತಿಯನ್ನು ತೋರಿಸುತ್ತದೆ ಎಂದು ದೂರಿನಲ್ಲಿ ಹೇಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಾಸ್ಯನಟ ವೀರ್‌‌ ದಾಸ್ ಅವರು ನವೆಂಬರ್ 10 ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಹಾಸ್ಯ ಕಾರ್ಯಕ್ರಮ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಅಮೆರಿಕದ ವಾಷಿಂಗ್ಟನ್ ಡಿಸಿಯ ಜಾನ್ ಎಫ್. ಕೆನಡಿ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರು, ನಮ್ಮ ಪ್ರಧಾನಿ ಮತ್ತು ಭಾರತದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಜೊತೆಗೆ ದೇಶವನ್ನು ಅವಮಾನಿಸಿದ್ದಾರೆ” ಎಂದು ಹಿಂದೂ ಜನಜಾಗೃತಿ ಸಮಿತಿ ವಕ್ತಾರ ಮೋಹನ್ ಗೌಡ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

“ಇದು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಗಂಭೀರ ಅಪರಾಧವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಂತಹ ಕೋಮು ಸೂಕ್ಷ್ಮ ನಗರದಲ್ಲಿ ಇಂತಹ ವಿವಾದಾತ್ಮಕ ವ್ಯಕ್ತಿಗೆ ಇಂತಹ ಕಾರ್ಯಕ್ರಮ ನಡೆಸಲು ಅವಕಾಶ ನೀಡುವುದು ಸರಿಯಲ್ಲ” ಎಂದು ದೂರಿನಲ್ಲಿ ತಿಳಿಸಲಾಗಿದೆ.

“ಕರ್ನಾಟಕವು ಈಗಾಗಲೇ ಕೋಮು ಘಟನೆಗಳಿಂದ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವಾಗ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಇಂತಹ ಘಟನೆಗಳಿಗೆ ಅವಕಾಶ ನೀಡಬಾರದು. ಈ ಕಾರ್ಯಕ್ರಮವನ್ನು ತಕ್ಷಣವೇ ರದ್ದುಗೊಳಿಸಬೇಕು” ಎಂದು ದೂರು ಹೇಳಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ಕೈಗೆತ್ತಿಕೊಂಡಿದ್ದಾರೆ.

ಕಳೆದ ವರ್ಷ, ವಾಷಿಂಗ್ಟನ್‌ನಲ್ಲಿ ವೀರ್‌‌ ದಾಸ್ ಅವರ ಪ್ರದರ್ಶನದ ನಂತರ ವಕೀಲರೊಬ್ಬರು ಮುಂಬೈ ಪೊಲೀಸರಿಗೆ ದೂರು ನೀಡಿದ್ದರು. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬಿಜೆಪಿಯ ಕಾನೂನು ಸಲಹೆಗಾರ, ವಕೀಲ ಅಶುತೋಷ್ ದುಬೆ ಅವರು ಭಾರತ, ಭಾರತೀಯ ಮಹಿಳೆಯರು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ “ಉದ್ದೇಶಪೂರ್ವಕವಾಗಿ ಪ್ರಚೋದಿಸುವ ಮತ್ತು ಅವಹೇಳನಕಾರಿ ಹೇಳಿಕೆ” ನೀಡಿದ್ದಕ್ಕಾಗಿ ವೀರ್‌‌ ದಾಸ್ ವಿರುದ್ಧ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಕಾಮೇಡಿಯನ್ ’ಕುನಾಲ್ ಕಮ್ರ’ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ

ಈ ದೂರಿನ ಬಗ್ಗೆ ಪ್ರತಿಕ್ರಿಯಿಸಿದ್ದ ವೀರ್‌‌ ದಾಸ್, “ವಿವಾದವಾಗಿರುವ ವೀಡಿಯೊವು ವಿಭಿನ್ನ ಕೆಲಸಗಳನ್ನು ಮಾಡುವ ಎರಡು ಪ್ರತ್ಯೇಕ ಭಾರತದ ದ್ವಂದ್ವತೆಯ ಬಗ್ಗೆಗಿನ ವಿಡಂಬನೆಯಾಗಿದೆ. ಯಾವುದೇ ರಾಷ್ಟ್ರಗಳಲ್ಲಿ ಕೂಡಾ ಬೆಳಕು ಮತ್ತು ಕತ್ತಲೆ, ಒಳ್ಳೆಯದು ಮತ್ತು ಕೆಟ್ಟದ್ದು ಇರುತ್ತದೆ. ಇದೇನೂ ಗುಟ್ಟಲ್ಲ. ನಾವು ಶ್ರೇಷ್ಠರು ಎಂಬುದನ್ನು ಎಂದಿಗೂ ಮರೆಯಬಾರದು ಎಂದು ವೀಡಿಯೊ ಮನವಿ ಮಾಡುತ್ತದೆ. ನಮ್ಮನ್ನು ಶ್ರೇಷ್ಠರನ್ನಾಗಿಸುವುದರ ಮೇಲೆ ಕೇಂದ್ರೀಕರಿಸುವುದನ್ನು ಎಂದಿಗೂ ನಿಲ್ಲಿಸಬಾರದು” ಎಂದು ಹೇಳಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಬಾರತ, ಹಿಟ್ಲರನ ಜರ್ಮನಿಯಾಗುವತ್ತ ವೇಗವಾಗಿ ಸಾಗುತ್ತಿದೆ. ಇದು ನಮ್ಮ ದುರಂತ.

LEAVE A REPLY

Please enter your comment!
Please enter your name here

- Advertisment -

Must Read

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

0
ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಅತ್ಯಂತ ಕಟ್ಟದಾಗಿದ್ದು, ನೆರೆಯ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕಿಂತಲೂ ಕಳಪೆಯಾಗಿದೆ. ಇದು ಪ್ರಜಾಪ್ರಭುತ್ವ ದೇಶಕ್ಕೆ ಯೋಗ್ಯವಾದ ಬೆಳವಣಿಗೆಯಲ್ಲ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬಿಡುಗಡೆ ಮಾಡಿದ 2024ರ...