Homeಕರ್ನಾಟಕಬೆಂಗಳೂರು| 7.11 ಕೋಟಿ ರೂ. ದರೋಡೆ ಪ್ರಕರಣ : ಮೂವರು ಆರೋಪಿಗಳ ಸೆರೆ, 5.76 ಕೋಟಿ...

ಬೆಂಗಳೂರು| 7.11 ಕೋಟಿ ರೂ. ದರೋಡೆ ಪ್ರಕರಣ : ಮೂವರು ಆರೋಪಿಗಳ ಸೆರೆ, 5.76 ಕೋಟಿ ರೂ. ವಶ

- Advertisement -
- Advertisement -

ಎಟಿಎಂ ಯಂತ್ರಗಳಿಗೆ ತುಂಬಿಸಲು ಕೊಂಡೊಯ್ಯುತ್ತಿದ್ದ 7.11 ಕೋಟಿ ರೂಪಾಯಿ ದರೋಡೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಸಿಎಂಎಸ್ ಸೆಕ್ಯುರಿಟೀಸ್ ಕಸ್ಟೋಡಿಯನ್ ವಾಹನದ ಮೇಲ್ವಿಚಾರಕ ರವಿ, ಮಾಜಿ ಉದ್ಯೋಗಿ ಕ್ಸೇವಿಯರ್ ಹಾಗೂ ಗೋವಿಂದಪುರ ಠಾಣೆಯ ಕಾನ್‌ಸ್ಟೇಬಲ್ ಅಣ್ಣಪ್ಪ ನಾಯ್ಕ್ ಬಂಧಿತರು. ಇವರಿಂದ 5.76 ಕೋಟಿ ರೂಪಾಯಿ ವಶಕ್ಕೆ ಪಡೆಯಲಾಗಿದೆ.

ಪ್ರಕರಣ ವರದಿಯಾದ 54 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಕೃತ್ಯದಲ್ಲಿ ಆರರಿಂದ 8 ಜನರು ಶಾಮೀಲಾಗಿರುವ ಸಾಧ್ಯತೆಯಿದೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಮೂರು ತಿಂಗಳಿನಿಂದ ಸಂಚು

ಆರೋಪಿಗಳು ಮೂರು ತಿಂಗಳಿನಿಂದ ದರೋಡೆಗೆ ಸಂಚು ರೂಪಿಸಿದ್ದರು. ಕೃತ್ಯಕ್ಕೆ 15 ದಿನಗಳಿಂದಲೂ ಸ್ಥಳ ನಿಗದಿ ಮಾಡಿದ್ದರು. ನವೆಂಬರ್ 19ರಂದು 12:48ರ ಸುಮಾರಿಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಕಾರಿನಲ್ಲಿ ಅಶೋಕ ಪಿಲ್ಲರ್ – ಜಯನಗರ – ಡೇರಿ ಸರ್ಕಲ್ ಮಾರ್ಗದಲ್ಲಿ ಬಂದು, ಕಸ್ಟೋಡಿಯನ್ ವಾಹನವನ್ನು ಅಡ್ಡಗಟ್ಟಿ ತಾವು ಆರ್‌ಬಿಐ ನಿಯಂತ್ರಣಾಧಿಕಾರಿಗಳೆಂದು ಭದ್ರತಾ ಸಿಬ್ಬಂದಿ ಹಾಗೂ ಕಸ್ಟೋಡಿಯನ್ ಸಿಬ್ಬಂದಿಯನ್ನು ಕೆಳಗಿಳಿಸಿದ್ದರು. ನಂತರ ಮತ್ತೋರ್ವ ಆರೋಪಿ ಕಸ್ಟೋಡಿಯನ್ ವಾಹನದೊಳಗೆ ಕುಳಿತು ಚಾಲಕನಿಗೆ ಡೇರಿ ಸರ್ಕಲ್ ನತ್ತ ಚಲಾಯಿಸುವಂತೆ ಸೂಚಿಸಿದ್ದ ಎಂದು ಪೊಲೀಸ್ ಆಯುಕ್ತರು ವಿವರಿಸಿದ್ದಾರೆ.

ಭದ್ರತಾ ಸಿಬ್ಬಂದಿ ಹಾಗೂ ಕಸ್ಟೋಡಿಯನ್ ಸಿಬ್ಬಂದಿಯನ್ನು ಕಾರಿನಲ್ಲಿ ಕರೆದೊಯ್ದಿದ್ದ ಆರೋಪಿಗಳು, ಮೊಬೈಲ್ ಫೋನ್ ಕಿತ್ತುಕೊಂಡು, ಅವರನ್ನು ನಿಮ್ಹಾನ್ಸ್ ಆಸ್ಪತ್ರೆ ಬಳಿ ಕೆಳಗಿಳಿಸಿ ಪರಾರಿಯಾಗಿದ್ದರು. ಕೃತ್ಯ ನಡೆದ ನಂತರ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗುವಷ್ಟರಲ್ಲಿ ಒಂದೂವರೆ ತಾಸು ಕಳೆದು ಹೋಗಿತ್ತು. ನಂತರ ನಾವು ತನಿಖೆ ಕೈಗೊಂಡಾಗ ಆರೋಪಿಗಳು ಸಿಸಿಟಿವಿ ಕ್ಯಾಮರಾಗಳು ಇರದ ಸ್ಥಳಗಳನ್ನು ಬಳಸಿಕೊಂಡಿರುವುದು, ಮೊಬೈಲ್ ಫೋನ್‌ ಬಳಕೆ ಮಾಡದಿರುವುದು ಹಾಗೂ ದರೋಡೆಯಾದ ಹಣದ ನೋಟುಗಳು ಕೂಡ ಸರಣಿ ನಂಬರ್‌ನಲ್ಲಿ ಇರದಿರುವುದು ತನಿಖೆಗೆ ಸಾಕಷ್ಟು ಸವಾಲಿನ ಸಂಗತಿಯಾಗಿತ್ತು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಕೃತ್ಯದ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ, ಬೆಂಗಳೂರಿನ ಗಡಿಭಾಗದ ಜಿಲ್ಲೆಗಳ ಎಸ್ಪಿಗಳು, ನೆರೆಯ ರಾಜ್ಯಗಳ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಜೊತೆಗೆ, ಬೆಂಗಳೂರು ಪೊಲೀಸ್ ಇಲಾಖೆಯ ಇಬ್ಬರು ಜಂಟಿ ಆಯುಕ್ತರ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿಗಳ ನೇತೃತ್ವದ ಸುಮಾರು 200 ಜನ ಅಧಿಕಾರಿ ಹಾಗೂ ಸಿಬ್ಬಂದಿಯನ್ನೊಳಗೊಂಡ 11 ತಂಡಗಳು ಕೇರಳ, ತಮಿಳುನಾಡು, ತೆಲಂಗಾಣಗಳಿಗೆ ತೆರಳಿ ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...